ದೇಶದ ಸ್ವಾತಂತ್ರ್ಯ ಹೋರಾಟದ ಕತೆಯನ್ನು ಸಾರುವ ಇನ್ನೊಂದು ಸಿನಿಮಾ ಇತ್ತೀಚೆಗಷ್ಟೇ ಸೆಟ್ಟೇರಿದೆ. ಆ ಚಿತ್ರದ ಹೆಸರು ‘ದಂಡಿ’. ಸುಚೇಂದ್ರ ಪ್ರಸಾದ್ ಹಾಗೂ ನಟ ತಾರಾ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರವನ್ನು ವಿಶಾಲ್ ರಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ.
ಹೊನ್ನಾವರದಲ್ಲಿ ಈ ಚಿತ್ರಕ್ಕೆ ಚಾಲನೆ ನೀಡಲಾಯಿತು. ಡಾ. ರಾಜಶೇಖರ್ ಮಠಪತಿ ಅವರ ಕಾದಂಬರಿ ಆಧರಿಸಿ ಈ ಚಿತ್ರವನ್ನು ರೂಪಿಸಲಾಗುತ್ತಿದೆ. ಹೊನ್ನಾವರದ ಮೂಡ ಗಣಪತಿ ದೇವಸ್ಥಾನದಲ್ಲಿ ನಡೆದ ಈ ಚಿತ್ರದ ಮುಹೂರ್ತ ಸಮಾರಂಭಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸುಕ್ರಿ ಗೌಡ ಆಗಮಿಸಿ ಚಿತ್ರೀಕರಣಕ್ಕೆ ಚಾಲನೆಯನ್ನು ನೀಡಿದರು.
ಉತ್ತರ ಕನ್ನಡದ ಸ್ವಾತಂತ್ರ್ಯ ಹೋರಾಟಗಾರರಿಗೆ ಈ ಚಿತ್ರವನ್ನು ಅರ್ಪಿಸಿದ್ದು, ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಸಂದರ್ಭದಲ್ಲಿ ಈ ಕತೆಯನ್ನು ಚಿತ್ರ ಮಾಡುತ್ತಿರುವುದಾಗಿ ನಿರ್ದೇಶಕರು ಹೇಳಿಕೊಂಡಿದ್ದಾರೆ. ಉಷಾರಾಣಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ವೆಂಕಟೇಶ ಅವರ ಛಾಯಾಗ್ರಹಣವಿದೆ. ಸಾಹಿತ್ಯ ಹಾಗೂ ಸಂಭಾಷಣೆಯನ್ನು ರಾಗಂ ಅವರು ಬರೆದಿದ್ದು, ರಾಮ್ ಕ್ರಿಶ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ನಿರ್ಮಾಪಕರ ಪುತ್ರ ಯುವಾನ್ ದೇವ್ ಹಾಗೂ ಶಾಲಿನಿ ಭಟ್ ಈ ಚಿತ್ರದ ಮೂಲಕ ಕನ್ನಡ ಚಲನಚಿತ್ರರಂಗಕ್ಕೆ ಹೊಸದಾಗಿ ಪರಿಚಯವಾಗುತ್ತಿದ್ದಾರೆ