ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಕೊರೋನಾ ಎರಡನೇ ಅಲೆ ಜೋರಾಗಿಯೇ ಹರಡುತ್ತಿದೆ, ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರರಾದ ಸಚಿನ್ ತೆಂಡೂಲ್ಕರ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿನ್ ತೆಂಡೂಲ್ಕರ್, ಕೊರೊನಾ ವೈರಸ್ ಟೆಸ್ಟ್ ಮಾಡಸಿಕೊಳ್ಳಲಾಗಿದ್ದು, ಈ ವೇಳೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ ಹೋಂ ಕ್ವಾರಂಟೈನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.