ನವದೆಹಲಿ: ರಾಜ್ಯದ ಅಭಿವೃದ್ಧಿ ಮತ್ತು ಸುವರ್ಷ ಭವಿಷ್ಯಕ್ಕಾಗಿ ಮತದಾನ ಮಾಡಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಜನರಲ್ಲಿ ಮನವಿ ಮಾಡಿದ್ದಾರೆ. ಅಸ್ಸಾಂ ರಾಜ್ಯದಲ್ಲಿ ಶನಿವಾರ ಮೊದಲ ಹಂತದ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ, ಇಂದು, ಅಸ್ಸಾಂನಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.
ಅಸ್ಸಾಂನಲ್ಲಿ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ‘ವಿಶೇಷವಾಗಿ ಯುವಕರು ಹಾಗೂ ನನ್ನ ಸಹೋದರಿಯರು ಮತಗಟ್ಟೆಗೆ ತೆರಳಿ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಮೇ 2 ರಂದು ಅಸ್ಸಾಂ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ನಡೆಯಲಾಗಿದೆ.