ತುಮಕೂರಿನಲ್ಲಿರುವ ಶ್ರೀ ಸಿದ್ದಗಂಗಾ ಐ. ಟಿ. ಐ. ಕಾಲೇಜ್‌ನಲ್ಲಿ ಕ್ಯಾಂಪಸ್ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ.
ಇದೇ ತಿಂಗಳ ಮಾರ್ಚ್ 30ರಂದು ಕ್ಯಾಂಪಸ್ ಸಂದರ್ಶನ ನಡೆಯಲಿದೆ.ರಾಮನಗರದ ಬಿಡದಿಯಲ್ಲಿರುವ ಬಹುರಾಷ್ಟ್ರೀಯ ಕಂಪನಿ ಕ್ಯಾಂಪಸ್ ಸಂದರ್ಶನವನ್ನು ಆಯೋಜನೆ ಮಾಡಿದೆ. ಮಾರ್ಚ್ 30ರಂದು ಬೆಳಗ್ಗೆ 9 ಗಂಟೆಗೆ ಬಟವಾಡಿಯ ಶ್ರೀ ಸಿದ್ದಗಂಗಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ.
ಐ.ಟಿ.ಐ. ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಅಭ್ಯರ್ಥಿಗಳಿಗೆ ಕನಿಷ್ಠ 18 ರಿಂದ ಗರಿಷ್ಠ 25 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಫಿಟ್ಟರ್, ಟರ್ನರ್, ಎಂಎಂಟಿಎಂ, ಎಂಎಂವಿ, ಮೆಕಾನಿಕ್ ಡೀಸೆಲ್, ಎಂಎಆರ್‌ಸಿ, ವೆಲ್ಡರ್ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.