Sunday, June 4, 2023
Homeರಾಜ್ಯರಾಜ್ಯಾದ್ಯಂತ ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ರಾಜ್ಯಾದ್ಯಂತ ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಏಪ್ರಿಲ್ 21ರ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, 2023ರ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.

ಇದನ್ನೂ ಓದಿ; ಪೋಸ್ಟ್ ಆಫೀಸ್​ನಲ್ಲಿರುವ ಈ 5 ಯೋಜನೆಗಳ ಬಗ್ಗೆ ನಿಮಗೆ ಗೊತ್ತೇ?

ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿದ್ದು,

ಇದನ್ನೂ ಓದಿ; ನೇಣು ಹಾಕಿಕೊಂಡು ಆಟೋ ಚಾಲಕ ಆತ್ಮಹತ್ಯೆಗೆ ಶರಣು

ರಾಜ್ಯದಲ್ಲಿ 5,716 ಕಾಲೇಜುಗಳಿಂದ 7.27 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ರಾಜ್ಯದಲ್ಲಿ 1,109 ಪರೀಕ್ಷಾ ಕೇಂದ್ರಗಳನ್ನು ತೆರೆದು, ಗೊಂದಲವಿಲ್ಲದಂತೆ ಪರೀಕ್ಷೆ ನಡೆಸಲಾಗಿತ್ತು. ಕೂಡಲೇ ಮೌಲ್ಯಮಾಪನ ನಡೆಸಿದ್ದರಿಂದ ನಿರೀಕ್ಷೆಗೂ ಮೊದಲೇ ಫಲಿತಾಂಶ ಪ್ರಕಟವಾಗುತ್ತಿದೆ.

ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟಿಸಲಾಗುತ್ತದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು

http://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಜೊತೆಗೆ SATS ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ವಿದ್ಯಾರ್ಥಿಗಳಿಗೆ ಅವರ ಮೊಬೈಲ್‌ ಸಂಖ್ಯೆಗೆ ಎಸ್‌ಎಂಎಸ್‌ ಸಂದೇಶ ಬರಲಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯಾದ ಮೇಲೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಿಸಲ್ಟ್ ಚೆಕ್‌ ಮಾಡುವ ವಿಧಾನದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಇದನ್ನು ಅನುಸರಿಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ; ಬಿಸಿಲಿನಿಂದ ತತ್ತರಿಸಿದ್ದ ಮಲೆನಾಡಿಗೆ ತಂಪೆರೆದ ವರುಣದೇವ

ದ್ವಿತೀಯ ಪಿಯುಸಿ ಫಲಿತಾಂಶ ಚೆಕ್‌ ಮಾಡುವುದು ಹೇಗೆ?

* ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ವೆಬ್‌ಸೈಟ್‌ https://kseab.karnataka.gov.in/ ಗೆ ಭೇಟಿ ನೀಡಿ.

* ಓಪನ್‌ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.

* ಆಗ ನಿಮಗೆ ಇನ್ನೊಂದು ಪೇಜ್‌ ಓಪನ್‌ ಆಗುತ್ತದೆ.
ಆ ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್‌ ಟೈಪ್‌ ಮಾಡಿ.

* ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.

* ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ.

Most Popular

Recent Comments