2000 Monthly: ರೈತರ ಪತ್ನಿಗೆ ಮಾಸಿಕ 2000ರೂ. ಪಿಂಚಣಿ

(2000 Monthly:) ಬೆಂಗಳೂರು: ರಾಜ್ಯದಲ್ಲಿ ಸಾಲಬಾಧೆ ಹಾಗೂ ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ರಾಜ್ಯ ಸರ್ಕಾರ ವಿಶೇಷ ವಿಧವಾ ವೇತನ ಯೋಜನೆಯನ್ನು ಜಾರಿಗೆ ತಂದಿದ್ದು, ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2000 ಪಿಂಚಣಿ ನೀಡಲಾಗುತ್ತಿದೆ.

ಸಾಮಾಜಿಕ ಭದ್ರತೆ ಮತ್ತು ಪಿಂಚಣೆಗಳ ನಿರ್ದೇಶನಾಲಯದ ವತಿಯಿಂದ ಜಾರಿಯಲ್ಲಿರುವ ಈ ಯೋಜನೆಯಡಿ, ಕೃಷಿ ಇಲಾಖೆಯಿಂದ ರೈತರ ಆತ್ಮಹತ್ಯೆ ಪ್ರಕರಣವೆಂದು ಅಧಿಕೃತವಾಗಿ ಗುರುತಿಸಿ ಪರಿಹಾರ ಧನ ಪಡೆದಿರುವ ಮೃತ ರೈತರ ಪತ್ನಿಯರಿಗೆ ಮಾಸಿಕ ಪಿಂಚಣಿ ಸೌಲಭ್ಯ ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಮುಂದುವರಿದಿರುವ ಬರ ಪರಿಸ್ಥಿತಿ ಹಾಗೂ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ.

ಯಾರು ಅರ್ಹರು?
ಕೃಷಿ ಇಲಾಖೆಯ ನಿಯಮಾವಳಿಗಳ ಪ್ರಕಾರ ರೈತರ ಆತ್ಮಹತ್ಯೆ ಪ್ರಕರಣವೆಂದು ಗುರುತಿಸಲ್ಪಟ್ಟು ಸರ್ಕಾರದಿಂದ ಪರಿಹಾರ ಧನ ಪಡೆದಿರುವ ಮೃತ ರೈತರ ಪತ್ನಿಯರು ಮಾತ್ರ ಈ ಯೋಜನೆಯಡಿ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ.

ಎಲ್ಲಿ ಅರ್ಜಿ ಸಲ್ಲಿಸಬೇಕು?
ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ Atal Ji Janasnehi Kendra (ನಾಡಕಚೇರಿ) ಕೇಂದ್ರಗಳ ಮೂಲಕ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗತ್ಯ ದಾಖಲೆಗಳು
ಕೃಷಿ ಇಲಾಖೆಯಿಂದ ಆತ್ಮಹತ್ಯೆ ಪರಿಹಾರ ಧನ ಮಂಜೂರಾದ ಅಧಿಕೃತ ಆದೇಶದ ಪ್ರತಿ
ಅಟಲ್ ಜೀ ಜನಸ್ನೇಹಿ ಕೇಂದ್ರದ ನಿಗದಿತ ಅರ್ಜಿ ನಮೂನೆ
ಅರ್ಜಿದಾರರ ಆಧಾರ್ ಕಾರ್ಡ್
ಬ್ಯಾಂಕ್ ಅಥವಾ ಅಂಚೆ ಕಚೇರಿ ಖಾತೆ ವಿವರಗಳು

ಕುಟುಂಬದ ಯಜಮಾನನನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಯಲ್ಲಿದ್ದು, ಅರ್ಹರು ಇದರ ಸೌಲಭ್ಯ ಪಡೆದುಕೊಳ್ಳುವಂತೆ ಸರ್ಕಾರ ಮನವಿ ಮಾಡಿದೆ.

2000 Monthly: ರೈತರ ಪತ್ನಿಗೆ ಮಾಸಿಕ 2000ರೂ. ಪಿಂಚಣಿ
2000 Monthly: ರೈತರ ಪತ್ನಿಗೆ ಮಾಸಿಕ 2000ರೂ. ಪಿಂಚಣಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (2000 Monthly:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?