(2025 SSLC Result:) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ -1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಒಟ್ಟಾರೆ ಶೇ. 66.14 ಮಕ್ಕಳು ತೇರ್ಗಡೆಯಾಗಿದ್ದಾರೆ. ಈ ಬಾರಿ ದಕ್ಷಿಣ ಕನ್ನಡ ಪ್ರಥಮ ಸ್ಥಾನದಲ್ಲಿದ್ದರೆ, ಕಲಬುರಗಿ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಇದನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ
ದಕ್ಷಿಣ ಕನ್ನಡ (91.12%) ಹಾಗೂ ಉಡುಪಿ ಜಿಲ್ಲೆ(89.96%) ಹಾಗೂ ಉತ್ತರ ಕನ್ನಡ ಜಿಲ್ಲೆಗೆ(83.19%) ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನ ಸಿಕ್ಕಿದೆ.
ಈ ಬಾರಿ 22 ವಿದ್ಯಾರ್ಥಿಗಳುನ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಹಾಗೆಯೇ 624 ಅಂಕಗಳನ್ನು 65 ವಿದ್ಯಾರ್ಥಿಗಳು, 623 ಅಂಕಗಳನ್ನು 108 ವಿದ್ಯಾರ್ಥಿಗಳು, 622 ಅಂಕಗಳನ್ನು 189 ವಿದ್ಯಾರ್ಥಿಗಳು ಪಡೆದಿದ್ದಾರೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಎಸ್‌ಎಸ್‌ಎಲ್‌ಸಿ ಯಲ್ಲಿ ಈ ಬಾರಿಯೂ ಹೆಣ್ಣುಮಕ್ಕಳದ್ದೇ ಮೇಲುಗೈ:
ಈ ಬಾರಿ ಪರೀಕ್ಷೆಗೆ ಹಾಜರಾದ 842173 ವಿದ್ಯಾರ್ಥಿಗಳ ಪೈಕಿ 524984 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಪರೀಕ್ಷೆಗೆ ಹಾಜರಾದ 390311 ಬಾಲಕರ ಪೈಕಿ 226637 ಬಾಲಕರು ಪಾಸಾಗಿದ್ದರೆ, ಪರೀಕ್ಷೆಗೆ ಹಾಜರಾದ 400579 ಬಾಲಕಿಯರ ಪೈಕಿ 296438 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಒಟ್ಟಾರೆ ಈ ವರ್ಷವು ಸಹ ಬಾಲಕಿಯರೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ.
ಇದನ್ನೂ ಓದಿ: ಮನೆಯಲ್ಲಿ ಪಾಲಿಶ್ ಅಕ್ಕಿ ಬಳಸೋ ಮುನ್ನ ಹುಷಾರ್; ಹೊರಬಿತ್ತು ಅಘಾತಕಾರಿ ಅಂಶ!
ಎಸ್‌ಎಸ್‌ಎಲ್‌ಸಿ ಟಾಪರ್‌ಗಳ ಲಿಸ್ಟ್
* ರಂಜಿತಾ – ಬೆಂಗಳೂರು ಗ್ರಾಮಾಂತರ ಜಿಲ್ಲೆ
* ನಿತ್ಯಾ ಕುಲಕರ್ಣಿ – ಶಿವಮೊಗ್ಗ ಜಿಲ್ಲೆ
* ನಂದನ್ – ಚಿತ್ರದುರ್ಗ ಜಿಲ್ಲೆ
* ಮೌಲ್ಯ – ಚಿತ್ರದುರ್ಗ ಜಿಲ್ಲೆ
* ರೂಪಾ ಪಾಟೀಲ್ – ಬೆಳಗಾವಿ
* ಭಾವನಾ – ದೇವನಹಳ್ಳಿ
* ಮೊಹಮ್ಮದ್ ಮಸ್ತೂದ್ – ತುಮಕೂರು ಜಿಲ್ಲೆ
* ಮಧುಸೂದನ್ ರಾಜ್ – ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ
(2025 SSLC Result:) SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ:
ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ.
ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
SMS ಮೂಲಕ ಫಲಿತಾಂಶ:
KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶ ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (2025 SSLC Result:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





