(2nd Puc Result:) ರಾಜ್ಯಾದ್ಯಂತ ಮಾರ್ಚ್ 01 ರಿಂದ 20 ರವರೆಗೆ ನಡೆಸಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತಿದೆ. ಮಧ್ಯಾಹ್ನ 01-30 ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ
ವಿದ್ಯಾರ್ಥಿಗಳು ಮಧ್ಯಾಹ್ನ 1 ಗಂಟೆ ನಂತರ ಫಲಿತಾಂಶವನ್ನು ಮಂಡಲಿಯ ಜಾಲತಾಣದಲ್ಲಿ ಚೆಕ್ ಮಾಡಬಹುದು. ಹಾಗೂ ನಂತರದಲ್ಲಿ ಎಲ್ಲ ಕಾಲೇಜುಗಳ ಸೂಚನಾ ಫಲಕದಲ್ಲಿ ಸಹ ಪ್ರಕಟಿಸಲಾಗುತ್ತದೆ. ಅಲ್ಲದೆ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಮೊಬೈಲ್ ಸಂಖ್ಯೆಗೂ ಫಲಿತಾಂಶವನ್ನು ರವಾನಿಸಲಾಗುತ್ತದೆ.
ಇದನ್ನೂ ಓದಿ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಈ ರೂಲ್ಸ್ ಕಡ್ಡಾಯ: ಕಲಿಕಾ ಸಾಮರ್ಥ್ಯ ವೃದ್ಧಿಗೆ ಮಹತ್ವದ ಕ್ರಮ
ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸಲು ಮಂಡಳಿಯ ವೆಬ್‌ಸೈಟ್ https://karresults.nic.in ಗೆ ಭೇಟಿ ನೀಡಿ ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ದಾಖಲಿಸಿ ಫಲಿತಾಂಶ ಚೆಕ್ ಮಾಡಬಹುದು.
ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವ ವಿಧಾನ:
* ಮಂಡಲಿಯ ವೆಬ್‌ಸೈಟ್ ಲಿಂಕ್ http://www.karresults.nic.in/ ಗೆ ಭೇಟಿ ನೀಡಿ.
* ತೆರೆದ ವೆಬ್‌ಪೇಜ್‌ನಲ್ಲಿ ‘2nd PUC Main Examination 1 Results’ ಎಂದಿರುವ ಲಿಂಕ್ ಕ್ಲಿಕ್ ಮಾಡಿ.
* ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಮತ್ತೊಂದು ವೆಬ್‌ಪೇಜ್ ತೆರೆಯುತ್ತದೆ.
* ಇಲ್ಲಿ ಮೊದಲಿಗೆ ದ್ವಿತೀಯ ಪಿಯುಸಿ ರಿಜಿಸ್ಟರ್ ನಂಬರ್ ಟೈಪಿಸಿ.
* ನಂತರ ಕಾಂಬಿನೇಷನ್ ಆಯ್ಕೆ ಮಾಡಿ.
* Submit ಎಂಬಲ್ಲಿ ಕ್ಲಿಕ್ ಮಾಡಿ.
* ಫಲಿತಾಂಶ ಶೀಟ್ ಪ್ರದರ್ಶಿತವಾಗುತ್ತದೆ. ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಇತ್ತೀಚಿನ ಜನಪ್ರಿಯ ಸುದ್ದಿಗಳು (2nd Puc Result:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





