ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜರಾಣಿಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅಷ್ಟೆ ಅಲ್ಲದೆ ಹಣ, ಹೆಂಡ ಹಂಚಲು ಕೂಡ ಶುರು ಮಾಡಿದ್ದು, ಇದಕ್ಕೆ ಕಡಿವಾಣ ಹಾಕಲು ಪೊಲೀಸರು, ಅಬಕಾರಿ ಅಧಿಕಾರಿಗಳು ಮುಂದಾಗಿದ್ದು.
ಇದನ್ನೂ ಓದಿ; ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ!
ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತ್ಯೇಕ ಎರಡು ಪ್ರಕರಣದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.08 ಲಕ್ಷ ರೂಪಾಯಿಯನ್ನು ಎಫ್‌ಎಸ್‌ಟಿ ಮತ್ತು ಎಸ್‌ಎಸ್‌ಟಿ ತಂಡದವರು ವಶಪಡಿಸಿಕೊಂಡಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ವಿವಿಧ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಗದು ವಶಕ್ಕೆ
- ಉಡಾ ಶಿಕಾರಿ; ಆರೋಪಿ ಬಂಧನ
- ಅಕ್ರಮವಾಗಿ ದಾಸ್ತಾನು ಮಾಡಿದ್ದ 5.5 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ
ಕಡೂರು ತಾಲೂಕಿನ ಮಲ್ಲೇಶ್ವರದಲ್ಲಿ ದಾಖಲೆ ಇಲ್ಲದ 1 ಲಕ್ಷ ರೂಪಾಯಿ ಮತ್ತು ಅಹಮದನಗರದಲ್ಲಿ 2,08,300 ರೂಪಾಯಿಯನ್ನು ವಶಪಡಿಸಿಕೊಂಡಿದ್ದಾರೆ.
ಕಾಂಗ್ರೆಸ್ಸಿಗರು ವೋಟ್ ಕೇಳೋಕೆ ಬಂದ್ರೆ ʻನಾಯಿ ಬಿಡ್ತೀವಿʼ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿನ ಮನೆಯೊಂದರ ಮುಂದೆ ಕಾಂಗ್ರೆಸ್ಸಿಗರು ಮತ ಕೇಳಲು ಬಂದ್ರೆ ನಾಯಿ ಬಿಡಲಾಗುವುದು ಎಂದು ಎಚ್ಚರಿಕೆಯ ಬೋರ್ಡ್ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಯ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರೊಬ್ಬರು ಎಚ್ಚರಿಕೆಯನ್ನು ನೀಡಿದ್ದಾರೆ.
ಇದನ್ನೂ ಓದಿ; ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂದೂ ಸಂಘಟನೆ ಭಜರಂಗದಳ ನಿಷೇಧ ಮಾಡುತ್ತೇವೆ ಎಂದಿರುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ಕೆಂಡವಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಗುಡ್ಡಟ್ಟಿ ಎಂಬ ಗ್ರಾಮದಲ್ಲಿ ಅರುಣ್ ಎಂಬ ಭಜರಂಗದಳದ ಕಾರ್ಯಕರ್ತ ತಮ್ಮ ಮನೆ ಮುಂದೆ ಬೋರ್ಡ್ ಹಾಕಿ ಮತ ಕೇಳಲು ಬರುವ ಕಾಂಗ್ರೆಸ್ಸಿಗರಿಗೆ ಎಚ್ಚರಿಕೆ ನೀಡಿದ್ದಾರೆ. ಇದು ಬಜರಂಗದಳದವರ ಮನೆ. ಕಾಂಗ್ರೆಸ್ಸಿಗರು ಮತ ಕೇಳಲು ಅವಕಾಶವಿಲ್ಲ. ಕಾಂಗ್ರೆಸ್ಸಿಗರು ಮತ ಕೇಳಲು ಬಂದ್ರೆ ನಾಯಿಯನ್ನು ಬಿಡಲಾಗುವುದು”ಎಂಬ ಎಚ್ಚರಿಕೆ ಬೋರ್ಡ್ ಹಾಕಿದ್ದಾರೆ.