ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಮಧ್ಯಾಹ್ನದ ಊಟ ಸೇವಿಸಿದ ನಂತರ 35 ಸೈನಿಕರು ಅಸ್ವಸ್ಥರಾಗಿರುವಂತಹ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.

ಇದನ್ನೂ ಓದಿ; ಮಹಿಳೆ ಮೇಲೆ ಹುಲಿ ದಾಳಿ; ಗಂಭೀರ ಗಾಯ

ಇದನ್ನೂ ಓದಿ; ಮರಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು

ವಾಹನ ಚಾಲನಾ ತರಬೇತಿಗೆ ಸೈನಿಕರು ಬಂದು ಇಲ್ಲಿ ತಂಗಿದ್ದರು. ಮಧ್ಯಾಹ್ನ ಕ್ಯಾಂಪ್‌ನಲೇ ತಯಾರಾದ ಆಹಾರ ಸೇವಿಸಿದ ಬಳಿಕ ಸೈನಿಕರು ಅಸ್ವಸ್ಥತೆಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಅಸ್ವಸ್ಥರಾದ ಸೈನಿಕರಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿಕ್ಕಮಗಳೂರು: ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲ ಬೇಕಾಗಲ್ಲ: ಸಿ.ಟಿ. ರವಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಕ್ರವರ್ತಿ ಸೂಲಿಬೆಲೆ ಅಪ್ರತಿಮ ದೇಶಭಕ್ತ, ಅವರ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದರು.

ಇದನ್ನೂ ಓದಿ; ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ

ಇದನ್ನೂ ಓದಿ; ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ

ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ. ಬಹುಶಃ ಕಾಂಗ್ರೆಸ್ ಅವರ ಕಣ್ಣಿಗೆ ಸೂಲಿಬೆಲೆ ಲಾಡೆನ್ ತರ ಕಾಣ್ತಿದ್ದಾರಾ, ಲಾಡೆನ್ ಬಂದ್ರೆ ಒಳಗೆ ಬಿಟ್ಟುಕೊಳ್ತಾರೆ. ಚಕ್ರವರ್ತಿ ಸೂಲಿಬೆಲೆ ಬಂದ್ರೆ ಏನು, ಕಾಂಗ್ರೆಸ್ಸಿಗರಿಗೆ ಅಧಿಕಾರದ ಮದ ಅತಿಯಾಗಿದೆ ಎಂದು ಕಾಣಿಸುತ್ತದೆ. ಹಾಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ; ಸಿಟ್ಟಿನಲ್ಲಿ ತಮ್ಮನ ಜೀವವನ್ನೇ ತೆಗೆದ ಅಣ್ಣ

ಅಧಿಕಾರದ ಅತಿಯಾದ ಮದ ಹೆಚ್ಚು ದಿನ ಉಳಿಯಲು ಸಾಧ್ಯವಿಲ್ಲ ಈ ಹಿಂದೆ ಕಾಂಗ್ರೆಸ್ ಸಂವಿಧಾನವನ್ನೇ ಬುಡಮೇಲು ಮಾಡಿ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿತ್ತು. ಜನ ಈ ಹಿಂದೆ ಕಾಂಗ್ರೆಸ್ಸಿಗೆ ಬುದ್ಧಿ ಕಲಿಸಿದ್ದನ್ನ ಅವರು ನೆನಪಿಟ್ಟುಕೊಳ್ಳಬೇಕು ಎಂದು ಸಿ.ಟಿ ರವಿ ಹೇಳಿದರು

ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲಬೇಕಾಗಲ್ಲ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಯುವಕರು ಸ್ಥಳದಲ್ಲೇ ಸಾವು