Wednesday, November 29, 2023
Homeಮಲೆನಾಡುಕೊಡಗುಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ

ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ

ಬೆಳ್ತಂಗಡಿ/ಕೊಡಗು: (ನ್ಯೂಸ್ ಮಲ್ನಾಡ್ ವರದಿ) ಟೆಲಿಪೋನ್ ಎಕ್ಸ್ ಚೇಂಜ್ ಟವರ್ ಬಳಿ ವ್ಯಕ್ತಿಯೊಬ್ಬರ ಮೃತದೇಹದ ಪಕ್ಕದಲ್ಲಿದ್ದ ಚೀಲದಲ್ಲಿ 6.65 ಲಕ್ಷ ನಗದು ಪತ್ತೆಯಾಗಿರುವ ಘಟನೆ ಉಜಿರೆಯಲ್ಲಿ ನಡೆದಿದೆ. ತಮ್ಮಯ್ಯ (55) ಟೆಲಿಪೋನ್ ಎಕ್ಸ್ ಚೇಂಜ್ ಟವರ್ ಬಳಿ ಮೃತದೇಹ ಪತ್ತೆಯಾದ ವ್ಯಕ್ತಿ.

ಇದನ್ನೂ ಓದಿ; ಬೈಕ್‌ಗೆ ಆಂಬ್ಯುಲೆನ್ಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಇದನ್ನೂ ಓದಿ; ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ

ತಮ್ಮಯ್ಯ ಮಡಿಕೇರಿಯ ಕುಶಾಲನಗರ ಮೂಲದ ವ್ಯಕ್ತಿಯಾಗಿದ್ದು, ಇವರು ಹಲವು ವರ್ಷಗಳಿಂದ ಉಜಿರೆಯಲ್ಲಿ ವಾಸಿಸುತ್ತಿದ್ದರು. ಬಸ್ ನಿಲ್ಡಾಣ, ಅಂಗಡಿಗಳು ಮುಚ್ಚಿದಾಗ ಅವುಗಳ ಮುಂಭಾಗದಲ್ಲಿ, ಬಿ.ಎಸ್.ಎನ್.ಎಲ್ ಕಚೇರಿ ಪಕ್ಕದಲ್ಲಿ ವಸತಿ ಹೂಡಿ ದಿನ ಕಳೆಯುತ್ತಿದ್ದರು.

ಇವರ ಮೃತದೇಹ ಟೆಲಿಪೋನ್ ಎಕ್ಸ್ ಚೇಂಜ್ ಟವರ್ ಬಳಿ ಪತ್ತೆಯಾಗಿದ್ದು, ಕುಟುಂಬದಲ್ಲಿ ಯಾರಿಗೂ ವಿಷಯ ತಿಳಿದಿಲ್ಲ. ಈ ಬಗ್ಗೆ ಉಜಿರೆ ಬೆಳಾಲು ಘಟಕದ ಶೌರ್ಯ ವಿಪತ್ತು ತಂಡ ತಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಪೊಲೀಸರು ಕುಟುಂಬದವರ ಪತ್ತೆಗಾಗಿ ಹುಡುಕಾಡುತ್ತಿದ್ದಾರೆ. ಅಲ್ಲದೇ ವ್ಯಕ್ತಿಯ ಮೃತದೇಹದ ಬಳಿ ಇದ್ದ ಚೀಲವನ್ನು ಪರಿಶೀಲಿಸಿದಾಗ ಅದರಲ್ಲಿ ಸುಮಾರು 6.65 ಲಕ್ಷ ರೂ. ಹಣ ಕಂಡುಬಂದಿದ್ದು, ಹಣವನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ.

ವ್ಯಕ್ತಿಯು ಕೂಲಿ ಕೆಲಸ ಮಾಡಿ ಸಂಗ್ರಹಿಸಲಾಗಿದ್ದ ಮೊತ್ತವಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಮೃತ ವ್ಯಕ್ತಿಯ ಕುಟುಂಬಸ್ಥರನ್ನು ಸಂಪರ್ಕಿಸುವಂತೆ ಬೆಳ್ತಂಗಡಿ ಪೊಲೀಸರು ತಿಳಿಸಿದ್ದಾರೆ.

ಸ್ನೇಕ್ ಕಿರಣ್ ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಉರಗ ಸಂರಕ್ಷಕ ಹಾವು ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಸ್ನೇಕ್ ಕಿರಣ್ ಹಾವು ಕಡಿತಕ್ಕೆ ಒಳಗಾದವರು.

ನಗರದ ಹೊರಭಾಗವಾಗಿರುವ ತಾವರೆ ಚಟ್ನಹಳ್ಳಿಯಲ್ಲಿ ಹಾವು ಬಂದಿದೆ ಎಂದು ಕರೆ ಬಂದ ಹಿನ್ನಲೆಯಲ್ಲಿ ಹಾವು ಹಿಡಿಯಲು ಸ್ನೇಕ್ ಕಿರಣ್ ಮುಂದಾಗಿದ್ದಾರೆ. ಹಾವು ಹಿಡಿಯಲು ಮುಂದಾದಾಗ ಪೊದೆ ಒಳಗೆ ನುಗ್ಗಿದೆ.

ಇದನ್ನೂ ಓದಿ; ಭೀಕರ ಅಪಘಾತ, ಅತ್ತೆ-ಸೊಸೆ ಸಾವು

ಸ್ನೇಕ್ ಕಿರಣ್ ಶೂ ಹಾಕದೆ ಬಂದಿದ್ದೂ, ಕಾಲಿಗೆ ಸರಿಯಾಗಿ ಕೊಳಕಮಂಡಲ ಹಾವು ಕಚ್ಚಿದೆ. ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Most Popular

Recent Comments