60 percent: ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

(60 percent:) ರಾಜ್ಯದ ಲಕ್ಷಾಂತರ ಕಾರ್ಮಿಕರಿಗೆ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದ 81ಕ್ಕೂ ಹೆಚ್ಚು ಉದ್ಯೋಗ ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು ಸರಾಸರಿ ಶೇಕಡಾ 60ರಷ್ಟು ಹೆಚ್ಚಳ ಮಾಡಿ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಹೌದು,ಸರ್ಕಾರದ ಈ ಮಹತ್ವದ ತೀರ್ಮಾನದಿಂದಾಗಿ ರಾಜ್ಯಾದ್ಯಂತ ಇರುವ ಒಂದು ಕೋಟಿಗೂ ಅಧಿಕ ಅಸಂಘಟಿತ ಮತ್ತು ನಿಗದಿತ ವಲಯದ ಕಾರ್ಮಿಕರಿಗೆ ನೇರ ಆರ್ಥಿಕ ಅನುಕೂಲವಾಗಲಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಅನ್ವಯ ವೈಜ್ಞಾನಿಕವಾಗಿ ಈ ವೇತನ ಪರಿಷ್ಕರಣೆ ಮಾಡಲಾಗಿದೆ ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಮಿಕ ವಲಯದ ದೀರ್ಘಕಾಲದ ಬೇಡಿಕೆಗೆ ಮಣಿದಿರುವ ಸರ್ಕಾರ, ಇದೇ ಮೊದಲ ಬಾರಿಗೆ ಎಲ್ಲಾ ನಿಗದಿತ ಉದ್ಯೋಗಗಳನ್ನು ಒಂದೇ ಅಧಿಸೂಚನೆಯಡಿ ತಂದಿದೆ.

ವಲಯ-3ರ ಕುಶಲರಹಿತ ಕಾರ್ಮಿಕರು: ಕನಿಷ್ಠ ಮಾಸಿಕ ವೇತನವನ್ನು 19,300 ರೂ. ಗೆ ನಿಗದಿಪಡಿಸಲಾಗಿದೆ.

ವಲಯ-1ರ ಕೌಶಲ್ಯಯುತ ಕಾರ್ಮಿಕರು: ಕನಿಷ್ಠ ಮಾಸಿಕ ವೇತನವನ್ನು 31,100 ರೂ. ಗೆ ನಿಗದಿಪಡಿಸಲಾಗಿದೆ.

ವಲಯಗಳ ಪುನರ್ರಚನೆ: ವೇತನ ಲೆಕ್ಕಾಚಾರವನ್ನು ಸುಲಭಗೊಳಿಸಲು ಈ ಹಿಂದೆ ಇದ್ದ 4 ವಲಯಗಳ ವರ್ಗೀಕರಣವನ್ನು 3 ವಲಯಗಳಿಗೆ ಪರಿಷ್ಕರಿಸಲಾಗಿದೆ.

ಯಾರಿಗೆಲ್ಲ ಅನ್ವಯ?
ಈ ಪರಿಷ್ಕೃತ ವೇತನ ಪಟ್ಟಿಯು ಖಾಸಗಿ ಶಾಲೆ ಮತ್ತು ಕಾಲೇಜುಗಳ ಬೋಧಕೇತರ ಸಿಬ್ಬಂದಿ, ಇ-ಕಾಮರ್ಸ್ ಮತ್ತು ಕೊರಿಯರ್ ಸಂಸ್ಥೆಗಳ ನೌಕರರು ಹಾಗೂ ಧಾರ್ಮಿಕ ಸಂಸ್ಥೆಗಳಲ್ಲಿ ದುಡಿಯುವ ಸಿಬ್ಬಂದಿಗೂ ಅನ್ವಯಿಸಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

60 percent: ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್
60 percent: ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು (60 percent:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?