ಬೆಂಗಳೂರಿನ ಬಿಬಿಎಂಪಿ ವಾರ್ ರೂಂ ನಲ್ಲಿ ಬೆಳಕಿಗೆ ಬಂದ ಬೆಡ್ ಬ್ಲಾಕಿಂಗ್ ದಂಧೆಯ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಇರುವ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ ಬೆಡ್ ಬ್ಲಾಕ್ ಮಾಡುವ ಮೂಲಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸಲಾಗುತ್ತಿದೆ. ಸಂಸದ ತೇಜಸ್ವಿ ಸೂರ್ಯ ಈ ಹಗರಣವನ್ನು ಬಯಲಿಗೆಳೆದಿದ್ದಾರೆ. ಇದರ ಹಿಂದೆ ಇರುವ ಸಂಘಟನೆ ಅಥವಾ ವ್ಯಕ್ತಿಯನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸಲಾಗುತ್ತದೆ, ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಅತಿ ಹೆಚ್ಚು ಮುಸ್ಲಿಂ ಸಮುದಾಯದವರು ಇದ್ದು ಇದರ ಹಿಂದೆ ಯಾವುದೋ ಮುಸ್ಲಿಂ ಸಂಘಟನೆ ಕೈವಾಡ ಇರುವ ಕುರಿತು ಅನುಮಾನವಿದೆ. ಈ ಕೃತ್ಯದಲ್ಲಿ ಯಾರಿದ್ದಾರೆ ಎನ್ನುವುದು ತನಿಖೆಯಿಂದ ಹೊರಬರಬೇಕಿದೆ ಎಂದರು.