ಈಜುಕೊಳದಲ್ಲಿ ಆಟವಾಡಲು ಹೋಗಿ 12 ವರ್ಷದ ಬಾಲಕಿ ಸಾವು

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಈಜುಕೊಳದಲ್ಲಿ ಆಟವಾಡಲು ಹೋಗಿ 12 ವರ್ಷದ ಬಾಲಕಿ ಮುಳುಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಸಮೀಪದ ರೆಸಾರ್ಟ್ ನಲ್ಲಿ ನಡೆದಿದೆ. ಖುಷಿ (12) ಮೃತ ಪಟ್ಟ ಬಾಲಕಿ.

ಇದನ್ನೂ ಓದಿ; ಪೆಟ್ರೋಲ್ ತುಂಬಿಸುವಾಗಲೇ ಬ್ಯಾಟರಿ ಸ್ಪೋಟ

ಇದನ್ನೂ ಓದಿ; ಬೈಕ್ ಅಪಘಾತದಲ್ಲಿ ಯೋಧನ ಸಾವು; ಪೊಲೀಸರ ಬಳಿ ಹೆತ್ತವರು ಕೇಳಿದ್ದು ಏನು?

ಗ್ರೀನ್ ಪ್ಲಾಸ್ಟರ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೃತಪಟ್ಟಳು. ಬೆಂಗಳೂರು ಮೂಲದ ಧನರಾಜ್ ತಮ್ಮ ಕುಟುಂಬದವರೊಂದಿಗೆ ರೆಸಾರ್ಟ್ ಗೆ ಭಾನುವಾರ ಬಂದಿದ್ದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಮಧ್ಯಾಹ್ನ ಊಟ ಮಾಡುವ ಸಂದರ್ಭದಲ್ಲಿ ರಿಷಿ ಮತ್ತು ಖುಷಿ ಈಜುಕೊಳಕ್ಕೆ ಆಟವಾಡಲು ಇಳಿದಿದ್ದರು. ಖುಷಿ ಮುಳುಗಿ ಸಾವಿಗೀಡಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದರು. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾನು ಕಾಂಗ್ರೆಸ್ ಶಾಸಕನಾಗಿರಬಹುದು ಆದರೆ ನಾನೊಬ್ಬ ಸಂಘದ ಸ್ವಯಂಸೇವಕ ಎನ್ನಲು ಹೆಮ್ಮೆಯಿದೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಾನೊಬ್ಬ ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಚಿಕ್ಕಮಗಳೂರು ಶಾಸಕ ಎಚ್. ಡಿ ತಮ್ಮಯ್ಯ ಹೇಳಿದ್ದಾರೆ.

ಇದನ್ನೂ ಓದಿ; ಹೈಟೆಕ್‌ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್

ನಗರದಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣಪತಿ ಸಮಿತಿಯಲ್ಲಿ ಕೋದಂಡ ಸ್ವಾಮಿ ದೇವಸ್ಥಾನದ ಸಮಿತಿಯಲ್ಲಿ ಅಧ್ಯಕ್ಷನಾಗಿ ಕೆಲಸ ಮಾಡುವಾಗ ದಾನಿಗಳ ಬಳಿ ಸಂಗ್ರಹಕ್ಕೆ ಹೋಗುತ್ತಿದ್ದ ಸಮಯದಲ್ಲಿ ಅವರು ನೀಡುತ್ತಿದ್ದ 500 ರೂ. ದೊಡ್ಡ ಹಣವಾಗುತ್ತಿತ್ತು. ಇದನ್ನು ಚಂದ ವಸೂಲಿ ಎಂದು ಹೇಳುವುದಿಲ್ಲ ಸಂಘದಲ್ಲಿ ಸಂಗ್ರಹ ಎಂದು ಹೇಳಿಕೊಂಡಿದ್ದಾರೆ. ನಾನು ಬಿಜೆಪಿಯಲ್ಲಿ 15 ರಿಂದ 16 ವರ್ಷ ಕೆಲಸ ಮಾಡಿದ್ದೇನೆ. ಈಗಲೂ ನಾನೊಬ್ಬ ಸಂಘದ (rss) ಸ್ವಯಂ ಸೇವಕ. ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿದ್ದರೂ ಸಂಘದಲ್ಲಿನ ಶಿಸ್ತಿನಿಂದ ನಾನೊಬ್ಬ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಹೇಳಿಕೊಂಡಿದ್ದಾರೆ.

ನಾನು ಜಾತ್ಯಾತೀತ ವ್ಯಕ್ತಿ, ಜಾತ್ಯಾತೀತ ಶಾಸಕ ಪ್ರಮಾಣ ವಚನ ಸ್ವೀಕರಿಸುವಾಗ ಅದೇ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿಯೇ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದಿದ್ದಾರೆ.