ಕೊಡಗು: (ನ್ಯೂಸ್ ಮಲ್ನಾಡ್ ವರದಿ) 3 ವರ್ಷದ ಮಗು ಆಯತಪ್ಪಿ ತೆರೆದ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೋಟೂರಿನಲ್ಲಿ ನಡೆದಿದೆ.
ಇದನ್ನೂ ಓದಿ; ಎಸ್.ಎಸ್.ಎಲ್.ಸಿ ಫಲಿತಾಂಶ: ಚಿಕ್ಕಮಗಳೂರು ಜಿಲ್ಲೆಗೆ ಎಷ್ಟನೇ ಸ್ಥಾನ?
ಇದನ್ನೂ ಓದಿ; ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ
ಕೋಟೂರಿನ ನಿವಾಸಿ ರೋಶನ್ ಅವರ 3 ವರ್ಷದ ಮಗು ಸಿಯಾನ್ ಬಲೂನು ಹಿಡಿದು ಆಟವಾಡುತ್ತಿದ್ದಾಗ ಮನೆ ಮುಂದಿನ ತೆರೆದ ಬಾವಿಗೆ ಬಿದ್ದು ಮೃತಪಟ್ಟಿತು.
ಕೈ ಜಾರಿ ಬಾವಿಯೊಳಗೆ ಬಿದ್ದ ಬಲೂನನ್ನು ನೋಡಲು ಬಗ್ಗಿದ ಮಗು ಆಯತಪ್ಪಿ ಬಿದ್ದಿತ್ತು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಮತದಾನ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ಮೃತ್ಯು
- ರಕ್ತದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ಕೈಕಾಲುಗಳ ಬೆರಳುಗಳಲ್ಲಿ ಹೀಗೆಲ್ಲಾ ಸಮಸ್ಯೆ ಬರುತ್ತೆ!
- ಇಬ್ಬರ ಹೆಸರು ಬರೆದಿಟ್ಟು ಚಿನ್ನಾಬೆಳ್ಳಿ ವ್ಯಾಪಾರಿ ಆತ್ಮಹತ್ಯೆ
ಮನೆಯೊಳಗಿಂದ ತಾಯಿ ವಿನುತಾ ಅವರು ಬಂದು ನೋಡುವಷ್ಟರಲ್ಲಿ ಮೃತಪಟ್ಟಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು
ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.
ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗಿರಿಧರ್ (46) ಮಯಂಕ್(3) ಮೃತ ರ್ದುದೈವಿಗಳು. ಇನ್ನು ಹೊನ್ನಾವರದಿಂದ ಸಂಬಂಧಿಕರ ಮದುವೆ ನಿಮಿತ್ತ ಗಿರಿಧರ್ ಕುಟುಂಬ ತೆರಳುವಾಗ, ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ ವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.