Sunday, June 4, 2023
Homeಮಲೆನಾಡುಸಿಟಿ ಬಸ್ ದ್ವಿಚಕ್ರ ವಾಹನದ ನಡುವೆ ಡಿಕ್ಕಿ; ರೊಚ್ಚಿಗೆದ್ದ ಜನರಿಂದ ಗ್ಲಾಸ್‌ಗೆ ಕಲ್ಲು ತೂರಾಟ

ಸಿಟಿ ಬಸ್ ದ್ವಿಚಕ್ರ ವಾಹನದ ನಡುವೆ ಡಿಕ್ಕಿ; ರೊಚ್ಚಿಗೆದ್ದ ಜನರಿಂದ ಗ್ಲಾಸ್‌ಗೆ ಕಲ್ಲು ತೂರಾಟ

ಶಿವಮೊಗ್ಗ; (ನ್ಯೂಸ್ ಮಲ್ನಾಡ್ ವರದಿ) ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ.

ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್

ಇದನ್ನೂ ಓದಿ; ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ

ಈ ಅಪಘಾತದಲ್ಲಿ ಖಾಸಗಿ ಸಿಟಿ ಬಸ್ ಸಿಗ್ನಲ್ ಜಂಪ್ ಮಾಡಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ದ್ವಿಚಕ್ರವಾಹನವನ್ನ ಉಜ್ಜಿಕೊಂಡು ಹೋಗಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಟ್ರಾಫಿಕ್ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಪೊಲೀಸ್ ಇಲಾಖೆ ಕೇವಲ ದಂಡ ವಸೂಲಿ ಮಾಡ್ತಾ ಇದೆ. ರಸ್ತೆ ನಿಯಮ ಪಾಲಿಸದವರ ವಿರುದ್ಧ ಕ್ರಮ ಯಾಕೆ ಇಲ್ಲವೆಂದು ಆಕ್ರ‍್ರೋಶ ವ್ಯಕ್ತಪಡಿಸಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಗೋಪಾಳದಿಂದ ರೈಲ್ವೆ ನಿಲ್ದಾಣಕ್ಕೆ ಹೋಗುತ್ತಿದ್ದ ಖಾಸಗಿ ಸಿಟಿ ಬಸ್ ಮಹಾವೀರ ವೃತ್ತದಲ್ಲಿ ಸಿಗ್ನಲ್ ಜಂಪ್ ಮಾಡಿದೆ. ಸವಳಂಗ ರಸ್ತೆಯಿಂದ ಬಾಲರಾಜ್ ಅರಸ್ ರಸ್ತೆಗೆ ಫ್ರೀಲೆಫ್ಟ್ ಇರುವುದರಿಂದ ತೆರಳುತ್ತಿದ್ದ ದ್ವಿಚಕ್ರವಾಹನ ಸವಾರನಿಗೆ ಬಸ್ ಡಿಕ್ಕಿ ಹೊಡೆದಿದ್ದು ಉಜ್ಜಿಕೊಂಡು ಹೋಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡಿದ್ದಾನೆ.

ಸಿಟಿ ಬಸ್ಸಿನ ಗ್ಲಾಸ್‌ಗೆ ಕಲ್ಲು ತೂರಿದ್ದಾರೆ. ಗಾಜು ಪುಡಿ ಪುಡಿಯಾಗಿದೆ. ಚಾಲಕನ ಮೇಲೆಯೂ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಇದರಿಂದ ಮಹಾವೀರ ವೃತ್ತದಲ್ಲಿ ಕೆಲಕಾಲ ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು.

ಇದನ್ನೂ ಓದಿ; ಕಾರ್ಮಿಕನ ಮೇಲೆ ಕಾಡಾನೆ ದಾಳಿ; ಗಂಭೀರ ಗಾಯ

ಇದನ್ನೂ ಓದಿ; ಜ್ಯೋತಿಷಿ ಮಾತು ಕೇಳಿ ಯುವಕನ ಕೈ-ಕಾಲು ಕತ್ತರಿಸಿದ್ದ ಚಿಕ್ಕಪ್ಪ?

ಗಾಯಗೊಂಡವನ ಹೆಸರು ಇನ್ನೂ ತಿಳಿದುಬಂದಿಲ್ಲ. ಆದರೆ ಟ್ಯಾಂಕ್ ಮೊಹಲ್ಲಾದಲ್ಲಿ ಇವರು ಹಾಲಿನ ಅಂಗಡಿ ನಡೆಸುವವರಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕೆಇಬಿ ವೃತ್ತದಲ್ಲಿ ಪೊಲೀಸರು ಹೆಲ್ಮೆಟ್ ದಂಡ ವಿಧಿಸುತ್ತಿದ್ದಾರೆ. ಗೋಪಿ ವೃತ್ತದಲ್ಲಿ ದ್ವಿಚಕ್ರವಾಹನ ಸವಾರರ ದಾಖಲಾತಿ ಪರಿಶೀಲಿಸಲಾಗುತ್ತಿದೆ. ಆದರೆ ಈ ವೃತ್ತದಲ್ಲಿ ಯಾವ ಪೊಲೀಸು ಇಲ್ಲ ಯಾಕೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಂಡ ವಸೂಲಿ ಮಾಡಲು ಮಾತ್ರ ಪೊಲೀಸರು ಇರುವುದು ಕಂಡು ಬರುತ್ತಿದೆ. ಖಾಸಗಿ ಸಿಟಿ ಬಸ್ ಗಳ ಹಾವಳಿ ನಗರದಲ್ಲಿ ಹೆಚ್ಚಾಗಿದೆ. ಇವನ್ನೆಲ್ಲಾ ಯಾರು ನಿಯಂತ್ರಿಸುವುದು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ; ಸರ್ಕಾರಿ ನೌಕರನಿಂದ ಮರ್ಕಲ್ ಗ್ರಾಮ ಪಂಚಾಯಿತಿ ಸಮೀಪ ಅಕ್ರಮ ಕಟ್ಟಡ ನಿರ್ಮಾಣ ಆರೋಪ, ಶಿಸ್ತು ಕ್ರಮಕ್ಕೆ 

Most Popular

Recent Comments