ಮೂಡುಬಿದಿರೆ/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕ್ಷುಲ್ಲಕ ವಿಚಾರವಾಗಿ ಬಾವ-ಮೈದುನರ ನಡುವಿನ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ.
ಇದನ್ನೂ ಓದಿ; ಎಸ್.ಎಸ್.ಎಲ್.ಸಿ ಫಲಿತಾಂಶ: ಚಿಕ್ಕಮಗಳೂರು ಜಿಲ್ಲೆಗೆ ಎಷ್ಟನೇ ಸ್ಥಾನ?
ಮೃತರನ್ನು ಜಮಾಲ್ ಎಂದು ಗುರುತಿಸಲಾಗಿದೆ. ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಆರೋಪಿಯಾಗಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಮತದಾನ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ಮೃತ್ಯು
- ರಕ್ತದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ಕೈಕಾಲುಗಳ ಬೆರಳುಗಳಲ್ಲಿ ಹೀಗೆಲ್ಲಾ ಸಮಸ್ಯೆ ಬರುತ್ತೆ!
- ಇಬ್ಬರ ಹೆಸರು ಬರೆದಿಟ್ಟು ಚಿನ್ನಾಬೆಳ್ಳಿ ವ್ಯಾಪಾರಿ ಆತ್ಮಹತ್ಯೆ
ಇವರಿಬ್ಬರ ಮನೆಗಳು ಅಕ್ಕಪಕ್ಕದಲ್ಲಿದ್ದು ಸಣ್ಣ ಮಕ್ಕಳೊಳಗಿನ ವೈಮನಸ್ಸಿನ ವಿಚಾರವಾಗಿ ನಿನ್ನೆ ಬೆಳಿಗ್ಗೆ ಜಮಾಲ್ ಮತ್ತು ಸುಹೈಬ್ ನಡುವೆ ಮಾತಿಕ ಚಕಮಕಿ ನಡೆದಿದೆ. ಇದು ತಾರಕಕ್ಕೇರಿದಾಗ ಜಮಾಲ್ ಹೊಟ್ಟೆಗೆ ಆರೋಪಿ ಸುಹೈಬ್ ಚಾಕುವಿನಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ, ಇದರಿಂದ ಗಂಭೀರ ಗಾಯಗೊಂಡ ಜಮಾಲ್ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ; ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ
ಮೂಡುಬಿದಿರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು
ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.
ಇದನ್ನೂ ಓದಿ; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ
ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗಿರಿಧರ್ (46) ಮಯಂಕ್(3) ಮೃತ ರ್ದುದೈವಿಗಳು. ಇನ್ನು ಹೊನ್ನಾವರದಿಂದ ಸಂಬಂಧಿಕರ ಮದುವೆ ನಿಮಿತ್ತ ಗಿರಿಧರ್ ಕುಟುಂಬ ತೆರಳುವಾಗ, ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ ವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.