ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) “ಲಿಂಗಾಯತರಿಗೆ ಪ್ರಾಮುಖ್ಯ ಕೊಡಬೇಕಿಲ್ಲ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿರುವುದಾಗಿ ಪತ್ರಿಕಾ ಸುದ್ದಿರೂಪದ ತುಣುಕೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಎಂಬಾತನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಇದನ್ನೂ ಓದಿ; ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರು ಪಾಲು
ಇದನ್ನೂ ಓದಿ; ಮೂಡಿಗೆರೆ ಪೊಲೀಸ್ ಠಾಣೆಯ ಮೇಲೆಯೇ ಹತ್ತಿ ಆತ್ಮಹತ್ಯೆಗೆ ಯತ್ನ
ಪತ್ರಿಕಾ ಸುದ್ದಿರೂಪದ ತುಣುಕೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯಬಿಟ್ಟಿದ್ದಕ್ಕೆ ಸಂಬಂಧಿಸಿದಂತೆ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದರು. ಬಸವನಹಳ್ಳಿ ಠಾಣೆಯಲ್ಲಿ ಮೂವರು ವಿರದ್ಧ ಪ್ರಕರಣ ದಾಖಲಾಗಿತ್ತು. ಐಪಿಸಿ 505(2) ಕಲಂ ನಡಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಕಾಂಗ್ರೆಸ್ ಜಿಲ್ಲಾ ಘಟಕದ ಐಟಿ ಸೆಲ್‌ನ ಮಾಜಿ ಸದಸ್ಯ ಹರೀಶ್ ಎಂಬಾತನನ್ನು ನಗರದ ಬಸವನನಹಳ್ಳಿ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ತನ್ನ ‘ಫೇಸ್ ಬುಕ್’ ಖಾತೆಗೆ ಬಂದಿದ್ದ ಪೋಸ್ಟ್ ಹಂಚಿಕೊಂಡಿದ್ದೆ, ಆ ಪೋಸ್ಟ್ ತಾನು ಸೃಷ್ಟಿಸಿದ್ದಲ್ಲ ಎಂದು ವಿಚಾರಣೆ ವೇಳೆ ಆರೋಪಿ ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ನಾಮಪತ್ರ ಸಲ್ಲಿಸಿರುವ ಬಿಜೆಪಿ ಅಭ್ಯರ್ಥಿ ಜೀವರಾಜ್ ಘೋಷಿಸಿರುವ ಆಸ್ತಿ ವಿವರದಲ್ಲಿ ಏನಿದೆ ಗೊತ್ತಾ?
- ಶೃಂಗೇರಿ ಕ್ಷೇತ್ರದಿಂದ ಮಲ್ನಾಡ್ ಕೇಸರಿ ಸೇನೆಯ ಪುನೀತ್ ಪೂಜಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ.!
- ಕೊಪ್ಪದ ರ್ಯಾಪರ್ ಚೇತನ್ ನಿಂದ ‘RCB Hawa’ ಹೊಸ ಸಾಂಗ್
ಆರೋಪಿ ಬಂಧನ ವಿಚಾರ ತಿಳಿದ ಕೂಡಲೇ ಪೊಲೀಸ್ ಠಾಣೆ ಮುಂದೆ ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿ, ಆರೋಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಸಿ.ಟಿ.ರವಿಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಹಿನ್ನಲೆ ಬಹಿರಂಗವಾಗಿ ಕ್ಷಮೆ ಕೇಳಿದ್ದರು.
ಇನ್ನೂ ಕಾಂಗೇಸ್ ಕಾರ್ಯಕರ್ತನನ್ನು ಠಾಣೆಯಿಂದ ಹೊರ ಕಳಿಸುವಂತೆ ಪಟ್ಟು ಹಿಡಿದಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಯ ಒಳ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು-ಪೊಲೀಸ್ ಮಧ್ಯೆ ವಾಕ್ಸಮರ, ತಳ್ಳಾಟ ನೂಕಾಟ ನಡೆದಿದೆ.