Wednesday, November 29, 2023
Homeಮಲೆನಾಡುಚಿಕ್ಕಮಗಳೂರುಕೊಪ್ಪ: ಮೇಯುವಾಗ ಆಯಾ ತಪ್ಪಿ ಬಾವಿಗೆ ಬಿದ್ದ ಹಸು

ಕೊಪ್ಪ: ಮೇಯುವಾಗ ಆಯಾ ತಪ್ಪಿ ಬಾವಿಗೆ ಬಿದ್ದ ಹಸು

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಮೇಯಲು ಬಂದಿದ್ದ ಹಸು ಜಾರಿ 50 ಅಡಿ ಆಳದ ಬಾವಿಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಅಬ್ಬಿಗದ್ದೆ-ಕಾಚುಗಲ್ ರಸ್ತೆ ಬಳಿ ನಡೆದಿದ್ದು ಹಸುವನ್ನ ಅಗ್ನಿಶಾಮಕ ಸಿಬ್ಬಂದಿಯವರು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ; ಶೃಂಗೇರಿ: ರಿಜಿಸ್ಟ್ರೇಷನ್ ನಂಬರ್ ಇಲ್ಲದ ಕಾರ್ ನಲ್ಲಿ ಬಂದ್ರು.. 3000 ರೂ. ಪೆಟ್ರೋಲ್ ಹಾಕಿಸಿ ಹಣ ಕೊಡದೆ ಪರಾರಿಯಾದ್ರು!

ಮೇಯ್ಯುತ್ತಿದ್ದ ಹಸು ಆಯತಪ್ಪಿ ಪಕ್ಕದಲ್ಲಿ ಇದ್ದ 50 ಅಡಿ ಆಳದ ತೆರೆದ ಬಾವಿಗೆ ಬಿದ್ದಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಅಗ್ನಿಶಾಮಕ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸೊಂಟಕ್ಕೆ ಹಗ್ಗ ಕಟ್ಟಿ ಬಾವಿಗೆ ಇಳಿದಿದ್ದಾರೆ ನಂತರ ಹಸುವಿನ ಬೆನ್ನಿಗೆ ಹಗ್ಗ ಕಟ್ಟಿ ಸುರಕ್ಷಿತವಾಗಿ ಮೇಲೆ ಎತ್ತಿದ್ದಾರೆ. ಅದೃಷ್ಟವಶಾತ್ ಹಸುವಿಗೆ ಯಾವುದೇ ತೊಂದರೆಯಾಗಿಲ್ಲ.


ಇತ್ತೀಚಿನ ಜನಪ್ರಿಯ ಸುದ್ದಿಗಳು

ಮೂಡಿಗೆರೆ: ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಡ್ರೈವರ್ ಗಳ ಕಾಲಿಗೆ ತೀವ್ರ ಗಾಯ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಸರ್ಕಾರಿ ಬಸ್ಸುಗಳ ನಡೆವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ ಗಳ ಡ್ರೈವರ್ ಗಳ ಕಾಲಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 2 ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇನ್ನು ಈ ಅಪಘಾತಕ್ಕೆ ರಸ್ತೆ ಕಾಮಾಗಾರಿಯೇ ಕಾರಣ ಎಂದು ಹೇಳಲಾಗಿದೆ. 2019 ರಲ್ಲಿ ಕುಸಿದಿದ್ದ ಕಾಮಗಾರಿ ಇನ್ನೂ ಮುಗಿಯದೇ ಇರದ ಕಾರಣ ಈ ಅಪಘಾತ ಸಂಭವಿಸಿದ್ದು, ಚಾರ್ಮಾಡಿಯಲ್ಲಿ ರಸ್ತೆ ಕಾಮಗಾರಿಯನ್ನ ಕೂಡಲೇ ಮುಗಿಸುವಂತೆ ಆಗ್ರಹಿಸಲಾಗಿದೆ. ಹಾಗೂ ಚಾರ್ಮಾಡಿ ಘಾಟಿಯ ಮಂಜು ಕೂಡ ಕಾರಣ ಎನ್ನಲಾಗಿದೆ. ಚಾರ್ಮಾಡಿಯಲ್ಲಿ ಕವಿದಿರೋ ಭಾರೀ ಪ್ರಮಾಣದ ಮಂಜು ಅಡಿ ದೂರದಲ್ಲಿ ಇರುವವರು ಕಾಣದಂತಹಾ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಅಪಘಾತದಿಂದ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಘಾಟಿಯಲ್ಲಿ ಸಿಲುಕಿ ವಾಹನ ಸವಾರರ ಪರದಾಡುವಂತೆ ಆಗಿದೆ. ಇನ್ನು ಕೆಲ ಪ್ರಯಾಣಿಕರು 10 ಕಿ.ಮೀ. ನಡೆದು ಕೊಟ್ಟಿಗೆಹಾರ ತಲುಪಿದ್ದಾರೆ.

Most Popular

Recent Comments