Sunday, September 24, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹಿರೇಗೌಜ ಸಮೀಪದಲ್ಲಿ ನಡೆದಿದೆ. ದರ್ಶನ್(28) ಸ್ಥಳದಲ್ಲಿಯೇ ಮೃತಪಟ್ಟ ವ್ಯಕ್ತಿ.

ಇದನ್ನೂ ಓದಿ;  ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ

ಹಿರೇಗೌಜ ಸಮೀಪ ಸೋಮವಾರ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸವಾರ ಮೃತಪಟ್ಟು, ಮತ್ತೋರ್ವ ಸವಾರ ಗಂಭೀರ ಗಾಯಗೊಂಡಿದ್ದಾನೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಬೈಕಿನಲ್ಲಿದ್ದ ತಾಲೂಕಿನ ಬಾಳೇನಹಳ್ಳಿ ಮೂಲದ ದರ್ಶನ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಶಿಕುಮಾರ್ ಎಂಬುವವರಿಗೆ ತೀವ್ರ ಗಾಯಗಳಾಗಿವೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೃಂಗೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಭರವಸೆ

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮತದಾನಕ್ಕೆ 9 ದಿನಗಳು ಬಾಕಿ ಇರುವಾಗ ರಾಜ್ಯದ ಆಡಳಿತಾರೂಢ ಸರ್ಕಾರ ಹಲವಾರು ಭರವಸೆಗಳನ್ನು ಜನರಿಗೆ ನೀಡಿದೆ.

ಇದನ್ನೂ ಓದಿ; ಕುಂದಾಪುರಕ್ಕೆ ಹೋಗುತ್ತಿದ್ದ ಬಸ್‌ ಪಲ್ಟಿ; 15 ಮಂದಿಗೆ ಗಾಯ

ಇದನ್ನೂ ಓದಿ; ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿದ ಪೊಲೀಸರು

ಕರ್ನಾಟಕ ವಿಧಾನಸಭೆ ಚುನಾವಣೆ 2023 ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸೋಮವಾರ ‘ಬಿಜೆಪಿ ಪ್ರಜಾ ಪ್ರಣಾಳಿಕೆ 2023 ‘ ಬಿಡುಗಡೆ ಮಾಡಿದರು. ಪಕ್ಷ ಡಾ. ಕೆ. ಸುಧಾಕರ್ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ ಮಾಡಿತ್ತು. ಪ್ರಣಾಳಿಕೆಯಲ್ಲಿ ವಿವಿಧ ವಲಯಗಳಿಗೆ ಹಲವಾರು ಘೋಷಣೆಗಳನ್ನು ಮಾಡಲಾಗಿದೆ.

ಇದನ್ನೂ ಓದಿ; ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ

ಆರೋಗ್ಯ ಕ್ಷೇತ್ರಕ್ಕೆ ಬಿಜೆಪಿಯ ಪ್ರಜಾ ಪ್ರಣಾಳಿಕೆ:
ಆರೋಗ್ಯ ಕ್ಷೇತ್ರಕ್ಕೆ ಯಾವ ಭರವಸೆ ಸಿಗಲಿದೆ? ಎಂಬ ನಿರೀಕ್ಷೆ ಇತ್ತು. ಪ್ರಣಾಳಿಕೆ ಬಿಡುಗಡೆಯಾಗಿದ್ದು ಹಲವು ಭರವಸೆಗಳನ್ನು ಕೊಡಲಾಗಿದೆ ಅದರಲ್ಲಿ ಶೃಂಗೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಭಾರೀ ಹೋರಾಟ ನಡೆದಿತ್ತು. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರಣಾಳಿಕೆಯಲ್ಲಿ ಅತ್ಯಾಧುನಿಕ 200 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಆದ್ಯತೆಯ ಮೇರೆಗೆ ಸ್ಥಾಪನೆ ಮಾಡುತ್ತೇವೆ ಎಂದು ಬಿಜೆಪಿ ಹೇಳಿದೆ.

ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಸ್ಥಾಪನೆ:
ಪ್ರಾದೇಶಿಕ ವಾಯುಯಾನ ಸಂಪರ್ಕ ಕಲ್ಪಿಸಲು ಉಡಾನ್ ಯೋಜನೆಯಡಿ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಗಳನ್ನು ಸ್ಥಾಪಿಸುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಇದನ್ನೂ ಓದಿ; ಜೆಡಿಎಸ್ ಗೆ ಮತ್ತೊಂದು ಆಘಾತ; ಮಾಜಿ ಸಚಿವ ಬಿಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆ

ಚತುಷ್ಪಥ ರಸ್ತೆ ನಿರ್ಮಾಣ:
ಮಿಷನ್ ಕನೆಕ್ಟ್ ಕರ್ನಾಟಕದ ಅಡಿಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಶಿವಮೊಗ್ಗ-ಶೃಂಗೇರಿ ಉತ್ತಮ ಚತುಷ್ಪಥ ರಸ್ತೆಯನ್ನು ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ಭರವಸೆ ನೀಡಿದೆ.

ಆರ್ಯವೇದ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಸ್ಥಾಪನೆ:
ಬಿಜೆಪಿ ತನ್ನ 5ನೇ ಭರವಸೆಯಲ್ಲಿ ಶಿವಮೊಗ್ಗದಲ್ಲಿ ಆರ್ಯವೇದ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದೆ.

Most Popular

Recent Comments