Wednesday, November 29, 2023
Homeಮಲೆನಾಡುಚಿಕ್ಕಮಗಳೂರುಎನ್.ಆರ್.ಪುರ: ಭಾರೀ ಗಾಳಿ, ಮಳೆ; ಬೃಹತ್ ಗಾತ್ರದ ಮರ ಬಿದ್ದು ಮನೆ ಜಖಂ

ಎನ್.ಆರ್.ಪುರ: ಭಾರೀ ಗಾಳಿ, ಮಳೆ; ಬೃಹತ್ ಗಾತ್ರದ ಮರ ಬಿದ್ದು ಮನೆ ಜಖಂ

ಎನ್.ಆರ್.ಪುರ: (ನ್ಯೂಸ್ ಮಲ್ನಾಡ್ ವರದಿ) ಭಾರಿ ಗಾಳಿ, ಮಳೆಗೆ ಮನೆಯ ಮೇಲೆ ಭಾರಿ ಗಾತ್ರದ ಮರ ಉರುಳಿ ಮನೆ ಸಂಪೂರ್ಣ ಜಖಂ ಆಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕಡಹಿನಬೈಲು ಗ್ರಾಪಂ ಕರುಗುಂದ ಸಮೀಪದಲ್ಲಿ ನಡೆದಿದೆ.

ಇದನ್ನೂ ಓದಿ; ಸರ್ಕಾರಿ ಆಸ್ಪತ್ರೆ ವೈದ್ಯ ಬರುವಾಗಲೇ ಚಿತ್ತಾಲ್ ಪತ್ತಾಲ್!

ಇದನ್ನೂ ಓದಿ; ಚಿಕ್ಕಮಗಳೂರಿನ ಹೋಂ ಸ್ಟೇ ಮೇಲೆ ಪೊಲೀಸ್ ದಾಳಿ; 25 ಜನ ವಶಕ್ಕೆ

ಎ.ಜಿ.ಮಣಿ ಎಂಬುವರ ಮನೆಯ ಮೇಲೆ ಬುಧವಾರ ಸಂಜೆ ಭಾರಿ ಗಾಳಿ, ಮಳೆಗೆ ಮತ್ತಿ ಮರ ಉರುಳಿ ಮನೆ ಸಂಪೂರ್ಣ ಜಖಂ ಆಗಿದೆ. ಮರ ಬಿದ್ದ ಸಂದರ್ಭದಲ್ಲಿ ಮನೆಯ ಮಾಲೀಕ ಮಣಿ ಟಿ.ವಿ. ನೋಡುತ್ತ ಕುಳಿತಿದ್ದು ತಕ್ಷಣ ಹೊರಗೆ ಓಡಿ ಬಂದಿದ್ದರಿಂದ ಪಾರಾಗಿದ್ದಾರೆ.

ಇದನ್ನೂ ಓದಿ; ನಕ್ಸಲರಿಗಿಂತ ಸಿ.ಟಿ ರವಿಯೇ ಡೇಂಜರ್

ಕುಟುಂಬದವರು ಮನೆಯಲ್ಲಿ ಇರಲಿಲ್ಲ. ಮನೆಯ ಮೇಲ್ಚಾವಣಿ, ಹಂಚು, ಪಕಾಸಿ, ಟಿ.ವಿ. ಪುಡಿಯಾಗಿದೆ. ಮನೆಯ ಸೀಲಿಂಗ್, ನೆಲಕ್ಕೆ ಹಾಕಿದ ಟೈಲ್ಸ್ ಹಾಳಾಗಿದೆ. ಗೋಡೆಗಳು ಬಿರುಕು ಬಿಟ್ಟಿವೆ ಸ್ಥಳಕ್ಕೆ ಕಡಹಿನಬೈಲು ಗ್ರಾಪಂ ಅಧ್ಯಕ್ಷ ಚಂದ್ರಶೇಖರ್, ಸದಸ್ಯರಾದ ಸುನೀಲ್, ಎ.ಬಿ.ಮಂಜುನಾಥ್, ವಾಣಿ ನರೇಂದ್ರ, ಪೂರ್ಣಿಮಾ, ಪಿಡಿಒ ಪ್ರೇಮಾ, ಗ್ರಾಮ ಲೆಕ್ಕಾಧಿಕಾರಿ ಸಾನಿಯಾ ಭೇಟಿ ನೀಡಿ ಪರಿಶೀಲಿಸಿದರು.

ಭಾರೀ ಗಾಳಿಗೆ ತೆಂಗಿನ ಮರ ಉರುಳಿ ಮನೆ ಜಖಂ:
ಭಾರೀ ಗಾಳಿಗೆ ತೆಂಗಿನ ಮರ ಉರುಳಿ ಮನೆ ಜಖಂವಾಗಿರುವ ಘಟನೆ ಎನ್.ಆರ್.ಪುರ ಪಟ್ಟಣದ ವಾರ್ಡ್ ನಂ.8 ಸುಂಕದಕಟ್ಟೆಯಲ್ಲಿ ನಡೆದಿದೆ. ಪ್ರಭಾಕರ್ ಹಾಗೂ ಗ್ರೇಸಿ ಎಂಬುವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಸ್ಥಳಕ್ಕೆ ಪಟ್ಟನ ಪಂ ಮುಖ್ಯಾಧಿಕಾರಿ ಎ.ಚಂದ್ರಕಾಂತ್, ಸದಸ್ಯ ಮುಕುಂದ, ಲೆಕ್ಕಾಧಿಕಾರಿ ಸಾನಿಯಾ ಭೇಟಿ ನೀಡಿ ಪರಿಶೀಲಿಸಿದರು.

ಬಿರುಗಾಳಿ ಮಳೆ ಸೃಷ್ಟಿಸಿದ ಅವಾಂತರ: ಎಲ್ಲೆಲ್ಲಿ ಏನೇನು?

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುವ ಮೂಲಕ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದಾನೆ ಹಲವೆಡೆ ಬೆಳೆಗಳು ನಾಶವಾಗಿದೆ, ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ.

ಇದನ್ನೂ ಓದಿ; ಭೀಕರ ರಸ್ತೆ ಅಪಘಾತ; ತಲೆ ಮೇಲೆ ಟಿಪ್ಪರ್ ಹರಿದು ಬಾಲಕಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ನಿನ್ನೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬೇಲೂರು, ಚೀಕನಹಳ್ಳಿ, ಮೂಡಿಗೆರೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್ ಕಂಬಗಳು ಧರೆಗುರುಳಿವೆ. ಮತ್ತು ಮೂರು ಟ್ರಾನ್ಸ್ ಫಾರ್ಮ ಗಳು ಹಾಳಾಗಿವೆ. ಮತ್ತೊಂದೆಡೆ ಕೋನರ್ಲು ಗ್ರಾಮದಲ್ಲಿ ಬಿರುಗಾಳಿಗೆ ಹುಸೇನ್ ಎಂಬುವವರ ವಾಸದ ಮನೆಯ ಮೇಲ್ನಾವಣಿ ಹಾರಿ ಹೋಗಿದೆ. ಇನ್ನು ಭಾರಿ ಮಳೆಯಿಂದ ಟ್ರಾನ್ಸ್ಫಾರ್ಮ ಗಳು ಹಾಳಾದ ಹಿನ್ನೆಲೆ ನಿನ್ನೆಯಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗೆಯೆ ಬೇಲೂರು ತಾಲೂಕಿನ, ಬಳ್ಳೂರು ಗ್ರಾಮದಲ್ಲಿ ಧರ್ಮೇಗೌಡ ಎಂಬುವವರ ಜಮೀನಿನಲ್ಲಿ ನೂರಾರು ಬಾಳೆ ಗಿಡಗಳು ಮುರಿದು ಬಿದ್ದಿದ್ದು, ಬಾಳೆ ಬೆಳೆ ಕಳೆದುಕೊಂಡ ರೈತ ಧರ್ಮೇಗೌಡ ಕಾಂಗಾಲಾಗಿದ್ದಾರೆ. ಅಲ್ಲದೆ ಗಾಳಿ, ಮಳೆಯಿಂದ ನೆಲಕ್ಕುರುಳಿದ ಮರಗಳು ಮತ್ತು ವಿದ್ಯುತ್ ಕಂಬಗಳನ್ನು ಸಾರ್ವಜನಿಕರೇ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ; ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ; ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ

Most Popular

Recent Comments