ಕೊಡಗು: (ನ್ಯೂಸ್ ಮಲ್ನಾಡ್ ವರದಿ) ಗುಂಡಿನ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ತೋರಾ ಗ್ರಾಮದಲ್ಲಿ ನಡೆದಿದೆ. ಮಧು ನಾಣಯ್ಯ(42) ಮೃತ ಪಟ್ಟ ವ್ಯಕ್ತಿ.
ಇದನ್ನೂ ಓದಿ; ಎನ್ ಆರ್ ಪುರದಲ್ಲಿ ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಹೆಚ್ಚಿದ ಭಯ
ತಡರಾತ್ರಿ 12 ಗಂಟೆ ಸುಮಾರಿಗೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದ್ದು, ಮಧು ನಾಣಯ್ಯ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- 5 ನಿಮಿಷದಲ್ಲಿ ಕೈ ಸೇರುತ್ತೆ ಡಿಜಿಟಲ್ ವೋಟರ್ ಐಡಿ
- ಹೊಳೆಯಲ್ಲಿ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತ್ಯು.!
- ಶಾಸಕ ಸಿ.ಟಿ ರವಿ ವಿರುದ್ಧ ನಕಲಿ ಪೋಸ್ಟ್ ಹಾಕಿದ್ದ ಕಾಂಗ್ರೆಸ್ ಕಾರ್ಯಕರ್ತ ಪೋಲಿಸ್ ವಶಕ್ಕೆ
ವಿರಾಜಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಗಳ್ಳರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:
ಕೊನೆಗೂ ಮೂಡಿಗೆರೆ ಹಾಗೂ ತರೀಕೆರೆಯ ಟಿಕೆಟ್ ಘೋಷಿದ ಕಾಂಗ್ರೆಸ್
ಕಾಂಗ್ರೆಸ್ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಕಡೆಯ ಪಟ್ಟಿಯಲ್ಲಿ 43 ಜನರ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಕೊನಗೂ ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಮೊದಲ 2 ಎರಡು ಪಟ್ಟಿ ಬಿಡುಗಡೆಗೊಳಿಸಿದ್ದ ಕಾಂಗ್ರೆಸ್ ಟಿಫ್ ಫೈಟ್ ಇರೋ ಕ್ಷೇತ್ರಗಳನ್ನು ಹಾಗೆ ಉಳಿಸಿಕೊಂಡಿತ್ತು. ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಯಾರಿಗೆ ಯಾವ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ ಎಂಬುದರ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ನವೋದಯ ವಿವಿದ್ದೋದ್ದೇಶ ಸೌಹಾರ್ದ ಬ್ಯಾಂಕ್ ಮಾನೇಜರ್ ವಿರುದ್ಧ ದೂರು
ಇನ್ನೂ ಮೂಡಿಗೆರೆ ಕ್ಷೇತ್ರದಿಂದ ನಯನ ಮೋಟಮ್ಮಗೆ ಟಿಕೆಟ್ ಫೈನಲ್ ಆಗಿದೆ. ತರೀಕೆರೆ ವಿಧಾನಸಭಾ ಕ್ಷೇತ್ರದಿಂದ ಶ್ರೀನಿವಾಸ್ ಅವರಿಗೆ ಟಿಕೆಟ್ ಫೈನಲ್ ಆಗಿದೆ.
ಮೂಡಿಗೆರೆಯಿಂದ ಕಾಂಗ್ರೆಸ್ ನಲ್ಲಿ 5ಕ್ಕೂ ಹೆಚ್ಚು ಜನ ಟಿಕೆಟ್ ಆಕಾಂಕ್ಷಿಗಳಿದ್ದರು, ನಯನ ಮೋಟಮ್ಮಗೆ ಟಿಕೆಟ್ ನೀಡಬಾರದೆಂದು ಹಲವು ಬಾರಿ ಬಹಿರಂಗ ಸಭೆ ಮಾಡಿದ್ದರು. ನಯನ ಮೋಟಮ್ಮ ಇಲ್ಲಿಯವರಲ್ಲ ಅವರು ಹೊರಗಿನವರು, ಮೋಟಮ್ಮ ಅವರ ಮಗಳು ಎನ್ನುವುದೇ ಚುನಾವಣೆಗೆ ಸ್ಪರ್ಧಿಸಲು ಮಾನದಂಡವಾಗುವುದಿಲ್ಲ ಎಂಬ ಮಾತುಗಳು ಮೂಡಿಗೆರೆಯ ಕಾಂಗ್ರೆಸ್ ಆಕಾಂಕ್ಷಿಗಳಿಂದ ಕೇಳಿಬಂದಿತ್ತು. ತೀವ್ರ ವಿರೋಧದ ನಡುವೆಯೂ ನಯನ ಮೋಟಮ್ಮಗೆ ಕೈ ಟಿಕೆಟ್ ಘೋಷಣೆ ಮಾಡಿದೆ.
ಇದನ್ನೂ ಓದಿ; ಒಟಿಪಿ ಹೇಳಿದ ಮರುಕ್ಷಣವೇ ಖಾತೆಯಲ್ಲಿದ್ದ ಹಣ ಮಾಯ
ಇನ್ನು ತರೀಕೆರೆಯಲ್ಲಿ ಗೋಪಿಕೃಷ್ಣ ಪ್ರಭಲ ಆಕಾಂಕ್ಷಿಯಾಗಿದ್ದರು. ಲಿಂಗಾಯಿತ ನಾಯಕ ದೋರನಾಳು ಪರಮೇಶ್ ಕೂಡ ರೇಸ್ ನಲ್ಲಿದ್ದರು. ಇತ್ತೀಚಿಗಷ್ಟೇ ದೋರನಾಳು ಪರಮೇಶ್ ಬೆಂಬಲಿಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಕೊಟ್ಟು ಈ ಬಾರಿ ದೋರನಾಳ್ ಪರಮೇಶ್ ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದರು. ಆದರೆ ನಿರೀಕ್ಷೆಯಂತೆ ಕಾಂಗ್ರೆಸ್ ಹೈಕಮಾಂಡ್ ಶ್ರೀನಿವಾಸ್ ಗೆ ಟಿಕೆಟ್ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲೂ ಟಿಕೆಟ್ ಘೋಷಣೆ ಮಾಡಿದ್ದು, ಬಾರೀ ಗೊಂದಲವಿರುವ ಚಿಕ್ಕಮಗಳೂರಿನ ಟಿಕೆಟ್ ಬಾಕಿ ಉಳಿಸಿಕೊಂಡಿದೆ.