ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಪೊಲೀಸ್ ಕಾನ್‌ಸ್ಟೇಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ನಡೆದಿದೆ. ಪೂರ್ಣೇಶ್ ಮೃತ ದುರ್ದೈವಿ. ಪೂರ್ಣೇಶ್‌ನ ಮೃತ ದೇಹ ರಕ್ತದ ಮಡುವಿನಲ್ಲಿ ಪತ್ತೆ ಆಗಿದೆ.
ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ:
ಪೂರ್ಣೇಶ್ ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ತಡರಾತ್ರಿ ಹತ್ಯೆ ನಡೆದಿರುಬಹುದೆಂದು ಅಂದಾಜಿಸಲಾಗಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವೈಯಕ್ತಿಕ ಕಲಹದಿಂದಾಗಿ ಹತ್ಯೆಯಾಗಿರಬಹುದೆಂದು ಶಂಕಿಸಲಾಗಿದೆ. ಸದ್ಯ ತೀರ್ಥಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಕೆಲಸದಿಂದ ವಜಾಗೊಂಡಿದ್ದ ಪೂರ್ಣೇಶ್:
ಆಗುಂಬೆ, ತೀರ್ಥಹಳ್ಳಿ, ಮಾಳೂರು, ಕುಂಸಿಯಲ್ಲಿ ಪೂರ್ಣೇಶ್ ಸೇವೆ ಸಲ್ಲಿಸಿದ್ದರು. ಆದರೆ ಇತ್ತೀಚಿಗೆ ಮದ್ಯ ವ್ಯಸನಿಯಾಗಿದ್ದ ಪೂರ್ಣೇಶ್, ಕೆಲಸದಿಂದ ವಜಾಗೊಂಡಿದ್ದರು ಎಂದು ತಿಳಿದು ಬಂದಿದೆ.