ಚುನಾವಣಾ ಪ್ರಚಾರಕ್ಕೆ ಬಂದಾಗ ಪ್ರಶ್ನಿಸಿದ ಮಹಿಳೆ ಮೇಲೆ ಪ್ರೀತಂಗೌಡ ಬೆಂಬಲಿಗನಿಂದ ಹಲ್ಲೆ; ಸಿಸಿಟಿವಿಯಲ್ಲಿ ಗಲಾಟೆ ದೃಶ್ಯ ಸೆರೆ

ಹಾಸನ: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ ಆರು ದಿನಗಳು ಬಾಕಿ ಉಳಿದಿವೆ ಅದರಂತೆ ಉಭಯ ಪಕ್ಷಗಳು ಪ್ರಚಾರದಲ್ಲಿ ತೊಡಗಿದೆ. ಅದರಂತೆ ಇದೀಗ ಚುನಾವಣಾ ಪ್ರಚಾರಕ್ಕೆ ಬಂದಾಗ, ಪ್ರಶ್ನೆ ಮಾಡಿದ ಮಹಿಳೆ ಮೇಲೆಯೇ ಹಲ್ಲೆ ಮಾಡಿದ ಆರೋಪ ಹೊಸಕೊಪ್ಪಲು ಬಡಾವಣೆಯ ಗಾಂಧಿನಗರದಲ್ಲಿ ಕೇಳಿಬಂದಿದೆ.

ಇದನ್ನೂ ಓದಿ; ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿ‌ಸಿ ಹೆಚ್ಚಿ‌ನ‌ ಬೆಲೆಗೆ ಮಾರಾಟ!

ನಿನ್ನೆ ರಾತ್ರಿ ಬಿಜೆಪಿ ಅಭ್ಯರ್ಥಿ ಶಾಸಕ ಪ್ರೀತಂಗೌಡ ಬಿಜೆಪಿ ಮುಖಂಡ ಹಾಗೂ ನಗರಸಭೆ ಅಧ್ಯಕ್ಷ ಮೋಹನ್ ಕುಮಾರ್ ಪುತ್ರ ಚೇತನ್ ಮತ್ತು ಸಂಗಡಿಗರು ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಗೀತಮ್ಮ ಎಂಬ ಮಹಿಳೆ ‘ನಮ್ಮ ಮನೆ ಬಳಿ ಕಸ ಸಂಗ್ರಹ ವಾಹನ ಬರೋದಿಲ್ಲ, ಬೀದಿ ದೀಪ ಇಲ್ಲ. ನಮ್ಮ ಬೇಡಿಕೆ ಈಡೇರಿಸಿ ಆನಂತರ ಮತ ಹಾಕುತ್ತೆವೆ ಎಂದಿದ್ದಾರೆ. ಇದೇ ಕಾರಣಕ್ಕೆ ಮಹಿಳೆ ತಮ್ಮ ಮೇಲೆ ಹತ್ಯೆ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಇನ್ನು ಪ್ರಶ್ನೆ ಮಾಡಿದ ಮಹಿಳೆ ಮೇಲೆ ಹಲ್ಲೆ ಮಾಡಿ ಮನೆಯ ಗೇಟ್ ಒದ್ದು, ಮನೆ ಮುಂದೆ ಗಲಾಟೆ ಮಾಡೋ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಗರಸಭೆ ಅಧ್ಯಕ್ಷನ ಪುತ್ರ ಚೇತನ್ ಮತ್ತು ಸುಪ್ರಿತ್ ಎಂಬುವವರ ವಿರುದ್ಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ಸಿಗರು ವೋಟ್‌ ಕೇಳೋಕೆ ಬಂದ್ರೆ ʻನಾಯಿ ಬಿಡ್ತೀವಿʼ

ಚಿಕ್ಕಮಗಳೂರು: ಮಲೆನಾಡಿನ ಮನೆಯೊಂದರ ಮುಂದೆ ಕಾಂಗ್ರೆಸ್ಸಿಗರು ಮತ ಕೇಳಲು ಬಂದ್ರೆ ನಾಯಿ ಬಿಡಲಾಗುವುದು ಎಂದು ಎಚ್ಚರಿಕೆಯ ಬೋರ್ಡ್ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಯ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರೊಬ್ಬರು ಎಚ್ಚರಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ;  ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂದೂ ಸಂಘಟನೆ ಭಜರಂಗದಳ ನಿಷೇಧ ಮಾಡುತ್ತೇವೆ ಎಂದಿರುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ಕೆಂಡವಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಗುಡ್ಡಟ್ಟಿ ಎಂಬ ಗ್ರಾಮದಲ್ಲಿ ಅರುಣ್ ಎಂಬ ಭಜರಂಗದಳದ ಕಾರ್ಯಕರ್ತ ತಮ್ಮ ಮನೆ ಮುಂದೆ ಬೋರ್ಡ್ ಹಾಕಿ ಮತ ಕೇಳಲು ಬರುವ ಕಾಂಗ್ರೆಸ್ಸಿಗರಿಗೆ ಎಚ್ಚರಿಕೆ ನೀಡಿದ್ದಾರೆ. ಇದು ಬಜರಂಗದಳದವರ ಮನೆ. ಕಾಂಗ್ರೆಸ್ಸಿಗರು ಮತ ಕೇಳಲು ಅವಕಾಶವಿಲ್ಲ. ಕಾಂಗ್ರೆಸ್ಸಿಗರು ಮತ ಕೇಳಲು ಬಂದ್ರೆ ನಾಯಿಯನ್ನು ಬಿಡಲಾಗುವುದು”ಎಂಬ ಎಚ್ಚರಿಕೆ ಬೋರ್ಡ್ ಹಾಕಿದ್ದಾರೆ.