Monday, December 11, 2023
Homeಮಲೆನಾಡುಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ; ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ; ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಸೀತಾನದಿ ಸಮೀಪ ನಡೆದಿದೆ.

ಇದನ್ನೂ ಓದಿ; ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು

ಇಂದು ಮಧ್ಯಾಹ್ನ 1.30 ರ ಸುಮಾರಿಗೆ ನವದುರ್ಗಾ ಬಸ್ ಹಾಗೂ ಹ್ಯುಂಡೈ ಇಯಾನ್ ಕಾರು ನಡುವೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಮೃತರನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೊದಲ ದರ್ಜೆ ಸಹಾಯಕ ಸುಬ್ರಹ್ಮಣ್ಯ ಗಾಣಿಗ ಹಾಗೂ ಉಡುಪಿಯ ಇಂದಿರ ನಗರ ಶಾಲೆಯ ದೈಹಿಕ ಶಿಕ್ಷಕ ಸೋಮಶೇಖರ್ ಎಂದು ಗುರುತಿಸಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ದಾವಣಗೆರೆಯಲ್ಲಿ ಮದುವೆ ಮುಗಿಸಿ ವಾಪಾಸ್ಸು ಬರುತ್ತಿರುವಾಗ ಉಡುಪಿಯಿಂದ ಆಗುಂಬೆ ಕಡೆಗೆ ಹೋಗುತ್ತಿದ್ದ ಮಿನಿ ಬಸ್ ಮುಖಾ ಮುಖಿ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಹೆಬ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಜಯಪುರ: “ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ” ಶಿಬಿರ

ಜಯಪುರ: (ನ್ಯೂಸ್ ಮಲ್ನಾಡ್ ವರದಿ) “ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ” ಶಿಬಿರವನ್ನು ಜೂನ್ 11 ರ ಭಾನುವಾರ ಬೆಳಗ್ಗೆ 9:00 ನಡೆಸಲಾಗುವುದು ಎಂದು ಪತ್ರಿಕೆ ಹೇಳಿಕೆಯಲ್ಲಿ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಕಿಬ್ಳಿ ಪ್ರಸನ್ನ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

ನವಚೈತ್ರ ಸಾಂಸ್ಕೃತಿಕ ವೇದಿಕೆ ಕೊಪ್ಪ, ಮೇಗುಂದಾ ಹೋಬಳಿ ಪತ್ರಕರ್ತರು ಜಯಪುರ, ಗ್ರಾಮ ಪಂಚಾಯಿತಿ ಅಗಳಗಂಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಗಳಗಂಡಿ, ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಜಿಲ್ಲಾ ಅಂಧತ್ವ ನಿವಾರಣ ವಿಭಾಗ, ಕೊಪ್ಪ ತಾಲೂಕು ಆರೋಗ್ಯ ಕೇಂದ್ರ, ಅಗಳಗಂಡಿ ಸಮುದಾಯ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞರಿಂದ “ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ” ಶಿಬಿರವನ್ನು ಆಯೋಜಿಸಲಾಗಿದೆ.

ಜೂನ್ 11 ರ ಭಾನುವಾರ ಬೆಳಗ್ಗೆ 9:00 ರಿಂದ 1:00 ಗಂಟೆಯವರೆಗೆ ಅಗಳಗಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯದರ್ಶಿ ಕಿಬ್ಳಿ ಪ್ರಸನ್ನ ಕುಮಾರ್ ಪತ್ರಿಕಾ ಹೇಳಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಕಣ್ಣಿನ ಚಿಕಿತ್ಸೆಗೆ ಒಳಪಡುವ ರೋಗಿಗಳು ತಪಾಸಣಾ ದಿನದಂದೇ ಆಸ್ಪತ್ರೆಗೆ ಹೋಗಲು ಸಿದ್ದರಿದ್ದಲ್ಲಿ ಉಚಿತ ಸಾರಿಗೆ, ಊಟ ಹಾಗೂ ವಸತಿ ವ್ಯವಸ್ಥೆಯನ್ನು ನೀಡಲಾಗುವುದು. ಶಸ್ತ್ರಚಿಕಿತ್ಸೆಯ ನಂತರ ಶಿಬಿರ ಸ್ಥಳಕ್ಕೆ ವಾಪಸು ಕರೆತಂದು ಬಿಡಲಾಗುತ್ತದೆಇನ್ನು ಶಿಬಿರಕ್ಕೆ ಬರುವಾಗ ಆಧಾರ್ ಕಾರ್ಡ್ ಅಥವಾ ಯಾವುದಾದರೂ ಭಾವಚಿತ್ರವಿರುವ ಗುರುತಿನ ಚೀಟಿ ತರತಕ್ಕದ್ದು. ಈ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಸಾರ್ವಜನಿಕರು ಹೆಚ್ಚು ಹೆಚ್ಚಾಗಿ ಬಳಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ 7795144239 ಸಂಪರ್ಕಿಸಬಹುದು.

ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

Most Popular

Recent Comments