ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ಸುಗಳ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ; ಎಸ್.ಎಸ್.ಎಲ್.ಸಿ ಫಲಿತಾಂಶ: ಚಿಕ್ಕಮಗಳೂರು ಜಿಲ್ಲೆಗೆ ಎಷ್ಟನೇ ಸ್ಥಾನ?
ಇದನ್ನೂ ಓದಿ; ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ
ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್ ಮತ್ತು ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಕುಮಧ್ವತಿ ಸೇತುವೆ ಮೇಲೆ ಮುಖಾಮುಕಿ ಡಿಕ್ಕಿ ಉಂಟಾಗಿತ್ತು. ಇದರಲ್ಲಿ ಹೊಸದುರ್ಗದ ತಿಪ್ಪೇಸ್ವಾಮಿ ಮತ್ತು ಅಪರಿಚಿತನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಆತನ ಗುರುತು ಇನ್ನೂ ಪತ್ತೆಯಾಗಿಲ್ಲ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಮತದಾನ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ಮೃತ್ಯು
- ರಕ್ತದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ಕೈಕಾಲುಗಳ ಬೆರಳುಗಳಲ್ಲಿ ಹೀಗೆಲ್ಲಾ ಸಮಸ್ಯೆ ಬರುತ್ತೆ!
- ಇಬ್ಬರ ಹೆಸರು ಬರೆದಿಟ್ಟು ಚಿನ್ನಾಬೆಳ್ಳಿ ವ್ಯಾಪಾರಿ ಆತ್ಮಹತ್ಯೆ
ಒಟ್ಟು 37 ಜನರನ್ನ ಶಿವಮೊಗ್ಗ ಮೆಗ್ಗಾನ್ ಗೆ ಸಾಗಿಸಲಾಗಿದ್ದು, ಇದರಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡ ಹಿನ್ನಲೆಯಲ್ಲಿ ಮೆಗ್ಗಾನ್ ನಿಂದ ಶಿವಮೊಗ್ಗದ ನಾರಾಯಣ ಹೃದಯಾಲಯಕ್ಕೆ ಸಾಗಿಸಲಾಗಿದೆ.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಎಸ್ಪಿ ಮಿಥುನ್ ಕುಮಾರ್ ಶಿಕಾರಿಪುರದ ಬಿಜೆಪಿ ಅಭ್ಯರ್ಥಿ ವಿಜೇಂದ್ರ, ಸಂಸದ ರಾಘವೇಂದ್ರ, ಶಿವಮೊಗ್ಗ ನಗರದ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ, ಕಾಂಗ್ರೆಸ್ ಅಭ್ಯರ್ಥಿ ಹೆಚ್ ಸಿ ಯೋಗೀಶ್, ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮೆಗ್ಗಾನ್ ಗೆ ದಾಖಲಾದ ಅಪಘಾತದಲ್ಲಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿದರು.
ಇದನ್ನೂ ಓದಿ; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ
ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು
ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.
ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗಿರಿಧರ್ (46) ಮಯಂಕ್(3) ಮೃತ ರ್ದುದೈವಿಗಳು. ಇನ್ನು ಹೊನ್ನಾವರದಿಂದ ಸಂಬಂಧಿಕರ ಮದುವೆ ನಿಮಿತ್ತ ಗಿರಿಧರ್ ಕುಟುಂಬ ತೆರಳುವಾಗ, ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ ವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.