Sunday, September 24, 2023
Homeಮಲೆನಾಡುಚಿಕ್ಕಮಗಳೂರುಹಿಂದು ಬ್ರಿಗೇಡ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಹಿಳಾ ಅಭ್ಯರ್ಥಿ

ಹಿಂದು ಬ್ರಿಗೇಡ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಹಿಳಾ ಅಭ್ಯರ್ಥಿ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಹಿಂದು ಬ್ರಿಗೇಡ್ ನ ಉದ್ದೇಶ ಹಿಂದುತ್ವದ ರಕ್ಷಣೆಯಾಗಿದ್ದು, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕರ ಕೊಡುಗೆ ಹಿಂದುತ್ವಕ್ಕೆ ಶೂನ್ಯ. ಈಗಾಗಲೇ ಹಿಂದು ಬ್ರಿಗೇಡ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ಬದಲಾವಣೆ ಇಲ್ಲ ಎಂದು ಹಿಂದು ಬ್ರಿಗೇಡ್ ನ ತಾಲ್ಲೂಕು ಅಧ್ಯಕ್ಷ ಸುರೇಶ್ ಬಂಡಾರಿ ಹೇಳಿದ್ದಾರೆ.

ಇದನ್ನೂ ಓದಿ; ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಹಿಂದು ಬ್ರಿಗೇಡ್ ಬೆಂಬಲಿತ ಅಭ್ಯರ್ಥಿಯಾಗಿ ಶೃಂಗೇರಿ ಮೂಲದ ಜಿ ಭಾರತಿ ಎಂಬುವವರನ್ನು ಕಣಕ್ಕಿಳಿಸಿದ್ದು, ನಿನ್ನೆ ಕೊಪ್ಪದಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ; ಅಕ್ರಮವಾಗಿ ಗೋವುಗಳ ಸಾಗಿಸುತ್ತಿದ್ದ ಆರೋಪಿ ಬಂಧನ

ಪ್ರವೀಣ್ ಖಾಂಡ್ಯ ಹಿಂದು ಬ್ರಿಗೇಡ್ ನಲ್ಲಿಲ್ಲ

ಕಳೆದ ಕೆಲ ದಿನಗಳ ಹಿಂದೆ ಹಿಂದು ಬ್ರಿಗೇಡ್ ನಲ್ಲಿ ಗುರಿತಿಸಿಕೊಂಡಿದ್ದ ಪ್ರವೀಣ್ ಖಾಂಡ್ಯ, ಗೌರಿಗಂಡಿ ಚಂದ್ರಶೇಖರ್ ಹಾಗೂ ಬಿಜೆಪಿ ಅಭ್ಯರ್ಥಿ ಜೀವರಾಜ್ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಹಿಂದುತ್ವದ ಕಾರಣಕ್ಕಾಗಿ ಈ ಬಾರಿ ಬಿಜೆಪಿ ಹಾಗೂ ಹಿಂದು ಬ್ರಿಗೇಡ್ ಒಂದಾಗಿ ಚುನಾವಣೆ ಎದುರಿಸಲಿದೆ ಎಂದು ಹೇಳಲಾಗಿತ್ತು.

ಈ ಕುರಿತು ನ್ಯೂಸ್ ಮಲ್ನಾಡ್ ನೊಂದಿಗೆ ಮತನಾಡಿದ ಸುರೇಶ್ ಬಂಡಾರಿ, ಇದು ಕೇವಲ ಪ್ರವೀಣ್ ಖಾಂಡ್ಯ ಒಬ್ಬರ ತೀರ್ಮಾನವೇ ಹೊರತು ಹಿಂದು ಬ್ರಿಗೇಡ್ ನದ್ದಲ್ಲ. ಅವರು ಹಿಂದು ಬ್ರಿಗೇಡ್ ನ ಸದಸ್ಯರಾಗಿದ್ದರು. ಅವರು ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಭೇಟಿಯಾಗುವ ವಿಚಾರವನ್ನು ನಮ್ಮೊಂದಿಗೆ ಪ್ರಸ್ತಾಪಿಸಿಲ್ಲ. ಈಗ ಪ್ರವೀಣ್ ಖಾಂಡ್ಯ ಸಂಘಟನೆಯಿಂದ ಹೊರಗಿದ್ದಾರೆ ಎಂದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಬಿಜೆಪಿ ಆಡಳಿತದಲ್ಲಿರುವಾಗಲೇ ಸಂಘಟನೆ ಕಾರ್ಯಕರ್ತರ ಮೇಲೆ ಹೆಚ್ಚು ಕೇಸ್

ಕ್ಷೇತ್ರದಲ್ಲಿ ಹಿಂದು ಸಂಘಟನೆಗಳಿಗೆ ಬಿಜೆಪಿ ಹಾಗೂ ಮಾಜಿ ಶಾಸಕರ ಕೊಡುಗೆ ಶೂನ್ಯ. ಕ್ಷೇತ್ರದಲ್ಲಿ ಬಿಜೆಪಿಯ ಶಾಸಕರು ಇದ್ದಾಗಲೇ ಅತೀ ಹೆಚ್ಚು ಕೇಸ್ ಗಳು ಹಿಂದು ಸಂಘಟನೆಯ ಕಾರ್ಯಕರ್ತರ ಮೇಲೆ ದಾಖಲಾಗಿತ್ತು. ಕಳೆದ ಐದು ವರ್ಷ ಕಾಂಗ್ರೆಸ್ ಶಾಸಕರು ಇದ್ದಾಗ ಯಾವುದೇ ಹಿಂದು ಕಾರ್ಯಕರ್ತರ ಮೇಲೆ ಕೇಸ್ ದಾಖಲಾಗಿಲ್ಲ. ಯಾವುದೇ ಕಾರ್ಯಕರ್ತರ ಮೇಲೆ ಕೇಸ್ ಆದಾಗಲೂ ಮಾಜಿ ಶಾಸಕರು ಅವರ ಬೆಂಬಲಕ್ಕೆ ನಿಂತ ಉದಾಹರಣೆಗಳು ಇಲ್ಲ. ಹೀಗಾಗಿ ಹಿಂದು ಕಾರ್ಯಕರ್ತರಿರು ಕಾಂಗ್ರೆಸ್ ಹಾಗೂ ಬಿಜೆಪಿ ಎರಡಕ್ಕೂ ಮತ ನೀಡದ ಪರಿಸ್ಥಿತಿಯಲ್ಲಿದ್ದಾರೆ ಹೀಗಾಗಿ ಹಿಂದು ಬ್ರಿಗೇಡ್ ಅನ್ನು ಅಸ್ತಿತ್ವಕ್ಕೆ ತಂದಿದ್ದೇವೆ ಎಂದರು.

ಹಿಂದು ಬ್ರಿಗೇಡ್ ನ ಉದ್ದೇಶ ಹಿಂದುತ್ವದ ರಕ್ಷಣೆ. ಗೋವುಗಳನ್ನು ರಕ್ಷಣೆ ಮಾಡುವುದು ನಮ್ಮ ಸಂಘಟನೆಯ ಮೂಲ ಉದ್ದೇಶ. ಈಗಾಗಲೇ ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಬಾವಿಗೆ ಹಾರಿ ರೈತ ಅತ್ಮಹತ್ಯೆ

ಚುನಾವಣಾ ಮೆರವಣಿಗೆಗೆ ಮಕ್ಕಳ ಬಳಕೆ ಮಾಡಿ ನೀತಿ ಸಂಹಿತೆ ಉಲ್ಲಂಘನೆ

ದಿನಾಂಕ 18 ಏಪ್ರಿಲ್ 2023ರಂದು ಕೊಡಗಿನ ವಿರಾಜಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ನಾಮಪತ್ರ ಸಲ್ಲಿಕೆ ವೇಳೆ ಮೆರವಣಿಗೆಗೆ ಮಕ್ಕಳನ್ನು ಬಳಕೆ ಮಾಡಿಕೊಂಡ ಕುರಿತು ಗಂಭೀರ ಆರೋಪ ಕೇಳಿಬಂದಿದ್ದು ಈ ಘಟನೆ ಸಂಬಂಧ ಚುನಾವಣೆ ಆಯೋಗ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣಗೆ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ;  ಶೃಂಗೇರಿ: ಕರಡಿ ದಾಳಿಗೆ ರೈತನ ಸ್ಥಿತಿ ಗಂಭೀರ; ಮಣಿಪಾಲಕ್ಕೆ ದಾಖಲು

ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ಸಾವಿರಾರು ಸಂಖ್ಯೆ ಜನರೊಂದಿಗೆ ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ರ್ಯಾಲಿ ನಡೆಸಿದ್ದರು.

ಈ ಸಂದರ್ಭದಲ್ಲಿ ನೂರಾರು ಮಕ್ಕಳು ಕಾಂಗ್ರೆಸ್ ಶಾಲು, ಟೋಪಿ ಧರಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು

ಚುನಾವಣಾ ಆಯೋಗ ಈಗಾಗಲೇ 18 ವರ್ಷದೊಳಗಿನ ಮಕ್ಕಳನ್ನು ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಸೂಚನೆ ಹೊರಡಿಸಿದ್ಧು ಈ ಬೆಳವಣಿಗೆ ಸಂಬಂಧ ಚುನಾವಣೆ ಆಯೋಗ ಏನು ಕ್ರಮ ಕೈಗೊಳ್ಳುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಧಾಕರ್ ಎಸ್ ಶೆಟ್ಟಿ

ಹಣ ನೀಡಿ ಜನರನ್ನು ಕರೆತಂದರು:

ಇನ್ನು ಹಣ ನೀಡಿ ಮೆರವಣಿಗೆಗೆ ಜನರನ್ನು ಕರೆದುಕೊಂಡು ಬಂದಿರುವುದು ಹಾಗೂ ಹೊರ ಊರುಗಳಿಂದ ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬಂದಿದ್ದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳು ಸಾಕಷ್ಟು ವೈರಲ್ ಆಗಿದೆ.

Most Popular

Recent Comments