ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲಾಧಿಕಾರಿಯಾಗಿದ್ದ ಕೆ.ಎನ್ ರಮೇಶ್ ವರ್ಗಾವಣೆ ಹಿನ್ನಲೆಯಲ್ಲಿ ಮಹಿಳೆಯೊಬ್ಬರು ಉಡುಗೊರೆ ನೀಡಿ ಕಣ್ಣೀರಿಟ್ಟಿದ್ದಾರೆ.
ಇದನ್ನೂ ಓದಿ; ದ್ವಿಚಕ್ರ ವಾಹನ ಸವಾರರಿಗೆ ಕಾಫಿನಾಡ ಪೊಲೀಸರ ಆರೋಗ್ಯ ಪಾಠ
ಕಳೆದ 2 ವರ್ಷದಿಂದ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದ ಕೆ.ಎನ್ ರಮೇಶ್ ವರ್ಗಾವಣೆಗೊಂಡಿದ್ದು, ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದಾಗ ಜಮೀನು ದಾಖಲೆ ಮಾಡಿಕೊಟ್ಟಿದ್ದನ್ನ ಮಹಿಳೆಯೊಬ್ಬರು ನೆನೆದು ತನ್ನ ತೋಟದಲ್ಲಿ ಸಾವಯವ ಗೊಬ್ಬರದಲ್ಲಿ ಬೆಳೆದ ತರಕಾರಿ ನೀಡಿ ಕೃತಜ್ಞತೆಯ ಕಣ್ಣೀರು ಸುರಿಸಿದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಸಿಗಂದೂರು ಲಾಂಚ್ ಸ್ಥಗಿತಕ್ಕೆ ದಿನಗಣನೆ
- ಅನುಭವಕ್ಕೆ ಬಾರದ ಜ್ಞಾನ ವ್ಯರ್ಥ, ಆತ್ಮ ಜ್ಞಾನವೇ ವಿಜ್ಞಾನ- ವಿಶ್ವನಾಥ ಸುಂಕಸಾಳ
- ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ
ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ವರ್ಗಾವಣೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎನ್. ರಮೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಮೀನಾ ನಾಗರಾಜ್ ಅವರನ್ನು ಸರ್ಕಾರ ನೇಮಕ ಮಾಡಲಾಗಿದೆ. ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಬಯೋ ಟೆಕ್ನಾಲಜಿ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಮೀನಾ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇನ್ನು ಜಿಲ್ಲಾಧಿಕಾರಿಗಳಾಗಿದ್ದ ಕೆ.ಎನ್. ರಮೇಶ್ ಕಳೆದ 2 ವರ್ಷದಿಂದ ಚಿಕ್ಕಮಗಳೂರು ಡಿಸಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಚುನಾವಣೆಗೂ ಮುನ್ನವೇ dc-sp ವರ್ಗಾವಣೆಗೆ ಕಾಂಗ್ರೆಸ್ ಆಗ್ರಹಿಸಿತ್ತು. ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಇತ್ತೀಚೆಗೆ ಚಿಕ್ಕಮಗಳೂರು ಜಿ.ಪಂ. ಸಿ.ಇ.ಓ. ಸ್ಥಾನದಿಂದ ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥರಾಗಿ ವರ್ಗಾವಣೆ ಆಗಿದ್ದ ಜಿ.ಪ್ರಭು ಅವರನ್ನು ತುಮಕೂರು ಜಿ.ಪಂ. ಸಿ.ಇ.ಓ. ಅಗಿ ನೇಮಕ ಮಾಡಲಾಗಿದೆ. ಜಿಲ್ಲಾಧಿಕಾರಿಗಳಾಗಿದ್ದ ಕೆ.ಎನ್. ರಮೇಶ್ ಅವರನ್ನು ವರ್ಗಾವಣೆ ಮಾಡಿದ್ದು ಯಾವುದೇ ಸ್ಥಾನವನ್ನು ಸೂಚಿಸಿಲ್ಲ.