Monday, December 11, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ಹತ್ತೂರು ತಿರುಗಿದರೂ ದೊರೆಯದ ಶೌಚಾಲಯ: ರಾಷ್ಟ್ರಪತಿಗೆ ಮಹಿಳೆ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಚಿಕ್ಕಮಗಳೂರು: ಹತ್ತೂರು ತಿರುಗಿದರೂ ದೊರೆಯದ ಶೌಚಾಲಯ: ರಾಷ್ಟ್ರಪತಿಗೆ ಮಹಿಳೆ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ರಕೃತಿ ಪ್ರೇಮಿಗಳ ಸ್ವರ್ಗ, ಪ್ರವಾಸಿಗರ ಮೆಚ್ಚಿನ ತಾಣವಾದ ಚಿಕ್ಕಮಗಳೂರಿನ ಬಾಬಾಬುಡನಗಿರಿ ದತ್ತ ಪೀಠ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಅಲ್ಲಿ ಕನಿಷ್ಠ ಶೌಚಾಲಯದಂತಹ ಮೂಲಸೌಕರ್ಯವಿಲ್ಲದೆ ತಾನು ಅನುಭವಿಸಿದ ಯಾತನೆಯನ್ನು ಮಹಿಳೆಯೊಬ್ಬರು ರಾಷ್ಟ್ರಪತಿ ಮರ್ಮು ಅವರಿಗೆ ಪತ್ರ ಮುಖಾಂತರ ವಿವರಿಸಿದ್ದಾರೆ. ಇದೀಗ ಆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಕನ್ನಡದಲ್ಲಿ ಪತ್ರ ಬರೆದಿರುವ ಜಡೆಮ್ಮ ಎಂಬ ಮಹಿಳೆ ತನಗೆ ಎದುರಾದ ಸಂಕಷ್ಟವನ್ನು ಎಳೆಎಳೆಯಾಗಿ ವಿವರಿಸಿದ್ದಾರೆ. ಲಕ್ಷಾಂತರ ಜನರು ಭೇಟಿ ನೀಡುವ ಯಾತ್ರಾ ಕೇಂದ್ರಗಳಲ್ಲಿ ಕನಿಷ್ಠ ಶೌಚಾಲಯಗಳನ್ನಾದರೂ ನಿರ್ಮಿಸುವಂತೆ ಪತ್ರದಲ್ಲಿ ಮಹಿಳೆ ಒತ್ತಾಯಿಸಿದ್ದಾರೆ. ನೀವು ರಾಷ್ಟ್ರಪತಿಯಾದರೂ ಮಹಿಳೆಯಾಗಿರುವ ಕಾರಣ ನಿಮಗೆ ನನ್ನ ಯಾತನೆ ಹೆಚ್ಚು ಅರ್ಥವಾಗಬಹುದು ಎಂದು ವಿವರಿಸಿದ್ದಾರೆ. ಅಲ್ಲದೆ “ನನ್ನಂತಹ ಸಾಮಾನ್ಯ ಮಹಿಳೆಯರ ನೋವನ್ನು ತಿಳಿಸುವುದು ಪತ್ರದ ಮುಖ್ಯ ಉದ್ದೇಶ ಎಂದು ಹೇಳಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


“ಕೆಲವು ದಿನಗಳ ಹಿಂದೆ ನಾನು ಬಾಬಾಬುಡನಗಿರಿ ದತ್ತ ಪೀಠ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿಗೆ ಭೇಟಿ ನೀಡಿದ್ದೆ, ಬಾಬಾಬುಡನ್‌ಗಿರಿಯಲ್ಲಿ ಈ ವೇಳೆ ನನಗೆ ನೈಸರ್ಗಿಕ ಕರೆ ಒತ್ತಡ ಆರಂಭವಾಯಿತು. ಈ ವೇಳೆ ಸಾರ್ವಜನಿಕ ಶೌಚಾಲಯಕ್ಕಾಗಿ ಹುಡುಕಾಡಿದರೂ ಪ್ರಯೋಜನವಾಗಲಿಲ್ಲ. “ನಂತರ ಸೀತಾಳಯ್ಯನಗಿರಿ ಹತ್ತಿ ಸಾರ್ವಜನಿಕ ಶೌಚಾಲಯಕ್ಕಾಗಿ ಅವರಿವರಲ್ಲಿ ಕೇಳಿದೆ. ಅಲ್ಲಿಯೂ ಶೌಚಾಲಯವಿರಲಿಲ್ಲ. ಈ ವೇಳೆ ಕ್ಷಣಕ್ಷಣಕ್ಕೂ ಯಾತನೆ ಅನುಭವಿಸಿದೆ. ಬಳಿಕ ಸಹಿಸಲಾಗದೆ ಅವಮಾನ ಬದಿಗಿಟ್ಟು ಮೂತ್ರ ವಿಸರ್ಜನೆ ಮಾಡಿದೆ ಎಂದು ಹೇಳಿದ್ದಾರೆ.

ಪ್ರತಿದಿನವೂ ಜನರು ತಮ್ಮ ಧರ್ಮ ಮತ್ತು ದೇವರಿಗಾಗಿ ಹೋರಾಡುತ್ತಾರೆ, ಆದರೆ ಶೌಚಾಲಯಗಳನ್ನು ನಿರ್ಮಿಸುವ ಬಗ್ಗೆ ಅವರ ನಿರ್ಲಕ್ಷ್ಯ ದುರದೃಷ್ಟಕರ. ಇಂತಹ ಪ್ರಸಿದ್ಧ ಸ್ಥಳದಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲದಿರುವುದು ಸಂವಿಧಾನದ 19 ಮತ್ತು 21 ನೇ ವಿಧಿಯ ಉಲ್ಲಂಘನೆಯಾಗಿದೆ. ನಾವು ಮಂಗಳ ಗ್ರಹವನ್ನು ತಲುಪಿದ್ದೇವೆ ಆದರೆ ಭೂಮಿ ಮೇಲೆ ಅಗತ್ಯವಿದ್ದಲ್ಲಿ ಶೌಚಾಲಯ ನಿರ್ಮಿಸಲು ಸಾಧ್ಯವಾಗಿರುವುದು ಶೋಚನೀಯ ಎಂದು ವಿವರಿಸಿದ್ದಾರೆ.

ಚಿಕ್ಕಮಗಳೂರು: ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲ ಬೇಕಾಗಲ್ಲ: ಸಿ.ಟಿ. ರವಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಕ್ರವರ್ತಿ ಸೂಲಿಬೆಲೆ ಅಪ್ರತಿಮ ದೇಶಭಕ್ತ, ಅವರ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದರು.

ಇದನ್ನೂ ಓದಿ;  ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ

ಇದನ್ನೂ ಓದಿ;  ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ

ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ. ಬಹುಶಃ ಕಾಂಗ್ರೆಸ್ ಅವರ ಕಣ್ಣಿಗೆ ಸೂಲಿಬೆಲೆ ಲಾಡೆನ್ ತರ ಕಾಣ್ತಿದ್ದಾರಾ, ಲಾಡೆನ್ ಬಂದ್ರೆ ಒಳಗೆ ಬಿಟ್ಟುಕೊಳ್ತಾರೆ. ಚಕ್ರವರ್ತಿ ಸೂಲಿಬೆಲೆ ಬಂದ್ರೆ ಏನು, ಕಾಂಗ್ರೆಸ್ಸಿಗರಿಗೆ ಅಧಿಕಾರದ ಮದ ಅತಿಯಾಗಿದೆ ಎಂದು ಕಾಣಿಸುತ್ತದೆ. ಹಾಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ;  ಸಿಟ್ಟಿನಲ್ಲಿ ತಮ್ಮನ ಜೀವವನ್ನೇ ತೆಗೆದ ಅಣ್ಣ

ಅಧಿಕಾರದ ಅತಿಯಾದ ಮದ ಹೆಚ್ಚು ದಿನ ಉಳಿಯಲು ಸಾಧ್ಯವಿಲ್ಲ ಈ ಹಿಂದೆ ಕಾಂಗ್ರೆಸ್ ಸಂವಿಧಾನವನ್ನೇ ಬುಡಮೇಲು ಮಾಡಿ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿತ್ತು. ಜನ ಈ ಹಿಂದೆ ಕಾಂಗ್ರೆಸ್ಸಿಗೆ ಬುದ್ಧಿ ಕಲಿಸಿದ್ದನ್ನ ಅವರು ನೆನಪಿಟ್ಟುಕೊಳ್ಳಬೇಕು ಎಂದು ಸಿ.ಟಿ ರವಿ ಹೇಳಿದರು

ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲಬೇಕಾಗಲ್ಲ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಯುವಕರು ಸ್ಥಳದಲ್ಲೇ ಸಾವು

Most Popular

Recent Comments