ಕಡೂರು: (ನ್ಯೂಸ್ ಮಲ್ನಾಡ್ ವರದಿ) ಸಿಡಿಲು ಬಡಿದು ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ನಡೆದಿದೆ.
ದೇವಸ್ಥಾನಕ್ಕೆ ಆಗಮಿಸಿದ್ದ ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದ ಮುಖೇಶ್ (40) ಎನ್ನುವ ವ್ಯಕ್ತಿ ಮೃತ ದುರ್ದೈವಿ. ದೇವಸ್ಥಾನದ ಹೊರಾಂಗಣದಲ್ಲಿ ನಿಂತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಜೊತೆಯಲ್ಲಿದ್ದ ನಾಲ್ವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ನಾಲ್ವರು ಗಾಯಳುಗಳಿಗೆ ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ವೈದ್ಯರು ವಾಪಸ್ಸು ಕಳುಹಿಸಿದ್ದಾರೆ.
ಭೀಕರ ಅಪಘಾತದಲ್ಲಿ 2 ಸಾವು
ಚಿಕ್ಕಮಗಳೂರು: ಖಾಸಗಿ ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಸೀತಾನದಿ ಸಮೀಪ ನಡೆದಿದೆ.
ಇಂದು ಮಧ್ಯಾಹ್ನ 1.30 ರ ಸುಮಾರಿಗೆ ನವದುರ್ಗಾ ಬಸ್ ಹಾಗೂ ಹ್ಯುಂಡೈ ಇಯಾನ್ ಕಾರು ನಡುವೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಮೃತರನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೊದಲ ದರ್ಜೆ ಸಹಾಯಕ ಸುಬ್ರಹ್ಮಣ್ಯ ಗಾಣಿಗ ಹಾಗೂ ಉಡುಪಿಯ ಇಂದಿರ ನಗರ ಶಾಲೆಯ ದೈಹಿಕ ಶಿಕ್ಷಕ ಸೋಮಶೇಖರ್ ಎಂದು ಗುರುತಿಸಲಾಗಿದೆ.
ದಾವಣಗೆರೆಯಲ್ಲಿ ಮದುವೆ ಮುಗಿಸಿ ವಾಪಾಸ್ಸು ಬರುತ್ತಿರುವಾಗ ಉಡುಪಿಯಿಂದ ಆಗುಂಬೆ ಕಡೆಗೆ ಹೋಗುತ್ತಿದ್ದ ಮಿನಿ ಬಸ್ ಮುಖಾ ಮುಖಿ ಢಿಕ್ಕಿ ಹೊಡೆದಿದೆ. ಸ್ಥಳಕ್ಕೆ ಹೆಬ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.