ರಿಪ್ಪನ್‌ಪೇಟೆ: (ನ್ಯೂಸ್ ಮಲ್ನಾಡ್ ವರದಿ) ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ನದೀಮ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಇದನ್ನೂ ಓದಿ; ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಏಪ್ರಿಲ್ 2 ರಂದು ಪಾದಚಾರಿಗೆ ಬೈಕ್ ಡಿಕ್ಕಿಯಾಗಿತ್ತು. ಈ ವೇಳೆ ಪಾದಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೂ ಗಂಭೀರವಾದ ಗಾಯವಾಗಿತ್ತು.
ಇದನ್ನೂ ಓದಿ; ಅಕ್ರಮವಾಗಿ ಗೋವುಗಳ ಸಾಗಿಸುತ್ತಿದ್ದ ಆರೋಪಿ ಬಂಧನ
ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿಂದ ಮೆಗ್ಗಾನ್‌ನಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಒಯ್ಯುತಿದ್ದಾಗ ಪಾದಚಾರಿ ಚಿನ್ನಪ್ಪ ಮೃತಪಟ್ಟಿದ್ದರು.
ಇನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ನದೀಮ್ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗರ್ತಿಕೆರೆ ನಿವಾಸಿ ನದೀಮ್ (22) ಬೈಕ್‌ನಲ್ಲಿ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ಸರ್ಕಾರಿ ಪ್ರೌಢಶಾಲೆ ಬಳಿ ನಡೆದುಕೊಂಡು ಹೋಗುತಿದ್ದ ಚಿನ್ನಪ್ಪ (54) ಎಂಬುವವರಿಗೆ ಬೈಕ್‌ನಿಂದ ಗುದ್ದಿದ್ದರು. ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ನಂತರ ಬೈಕ್ ಪ್ರೌಢಶಾಲಾ ನಾಮಫಲಕಕ್ಕೆ ಜೋರಾಗಿ ಡಿಕ್ಕಿಯಾಗಿತ್ತು. ಈ ಹಿನ್ನೆಲೆಯಲ್ಲಿ ನದೀಮ್ ಗಂಭೀರವಾಗಿ ಗಾಯಗೊಂಡಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚುನಾವಣಾ ಸಮಯದಲ್ಲಿ ಶೃಂಗೇರಿ ಕ್ಷೇತ್ರ ಬಿಜೆಪಿಗೆ ಮತ್ತೊಂದು ಆಘಾತ
- ಕಾಂಗ್ರೆಸ್ ಅಭ್ಯರ್ಥಿ ಟಿ ಡಿ ರಾಜೇಗೌಡರಿಗಿಂತ ಅವರ ಪತ್ನಿಯೇ ಹೆಚ್ಚು ಶ್ರೀಮಂತೆ
- ಪೊಲೀಸರ ಭರ್ಜರಿ ಕಾರ್ಯಾಚರಣೆ
ಚುನಾವಣಾ ಮೆರವಣಿಗೆಗೆ ಮಕ್ಕಳ ಬಳಕೆ ಮಾಡಿ ನೀತಿ ಸಂಹಿತೆ ಉಲ್ಲಂಘನೆ
ದಿನಾಂಕ 18 ಏಪ್ರಿಲ್ 2023ರಂದು ಕೊಡಗಿನ ವಿರಾಜಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ನಾಮಪತ್ರ ಸಲ್ಲಿಕೆ ವೇಳೆ ಮೆರವಣಿಗೆಗೆ ಮಕ್ಕಳನ್ನು ಬಳಕೆ ಮಾಡಿಕೊಂಡ ಕುರಿತು ಗಂಭೀರ ಆರೋಪ ಕೇಳಿಬಂದಿದ್ದು ಈ ಘಟನೆ ಸಂಬಂಧ ಚುನಾವಣೆ ಆಯೋಗ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣಗೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ; ಶೃಂಗೇರಿ: ಕರಡಿ ದಾಳಿಗೆ ರೈತನ ಸ್ಥಿತಿ ಗಂಭೀರ; ಮಣಿಪಾಲಕ್ಕೆ ದಾಖಲು
ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ಸಾವಿರಾರು ಸಂಖ್ಯೆ ಜನರೊಂದಿಗೆ ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ರ್ಯಾಲಿ ನಡೆಸಿದ್ದರು.
ಈ ಸಂದರ್ಭದಲ್ಲಿ ನೂರಾರು ಮಕ್ಕಳು ಕಾಂಗ್ರೆಸ್ ಶಾಲು, ಟೋಪಿ ಧರಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು
ಚುನಾವಣಾ ಆಯೋಗ ಈಗಾಗಲೇ 18 ವರ್ಷದೊಳಗಿನ ಮಕ್ಕಳನ್ನು ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಸೂಚನೆ ಹೊರಡಿಸಿದ್ಧು ಈ ಬೆಳವಣಿಗೆ ಸಂಬಂಧ ಚುನಾವಣೆ ಆಯೋಗ ಏನು ಕ್ರಮ ಕೈಗೊಳ್ಳುತ್ತದೆ ಕಾದು ನೋಡಬೇಕಿದೆ.
ಇದನ್ನೂ ಓದಿ; ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಧಾಕರ್ ಎಸ್ ಶೆಟ್ಟಿ
ಹಣ ನೀಡಿ ಜನರನ್ನು ಕರೆತಂದರು:
ಇನ್ನು ಹಣ ನೀಡಿ ಮೆರವಣಿಗೆಗೆ ಜನರನ್ನು ಕರೆದುಕೊಂಡು ಬಂದಿರುವುದು ಹಾಗೂ ಹೊರ ಊರುಗಳಿಂದ ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬಂದಿದ್ದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳು ಸಾಕಷ್ಟು ವೈರಲ್ ಆಗಿದೆ.