Sunday, September 24, 2023
Homeಮಲೆನಾಡುಆಂಬ್ಯುಲೆನ್ಸ್ ಬಾರದೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

ಆಂಬ್ಯುಲೆನ್ಸ್ ಬಾರದೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಬಾರದೆ ನಡು ರಸ್ತೆಯಲ್ಲೇ ಯುವಕ ಸಾವನ್ನಪ್ಪಿರುವ ಘೋರ ದುರಂತವೊಂದು ಹಾಸನ ಜಿಲ್ಲೆಯ ನ ಬೇಲೂರು ರಸ್ತೆಯ ಕಲ್ಕರೆ ಗ್ರಾಮದ ಬಳಿ ನಡೆದಿದೆ.

ಇದನ್ನೂ ಓದಿ; ಎಸ್.ಎಸ್.ಎಲ್.ಸಿ ಫಲಿತಾಂಶ: ಚಿಕ್ಕಮಗಳೂರು ಜಿಲ್ಲೆಗೆ ಎಷ್ಟನೇ ಸ್ಥಾನ?

ಇದನ್ನೂ ಓದಿ; ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ

ಕಲ್ಕರೆ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕನೊಬ್ಬ ನಡುರಸ್ತೆಯಲ್ಲೇ ಬಿದ್ದಿದ್ದು, ಈ ವೇಳೆ ಸ್ಥಳೀಯರು ಆಂಬ್ಯುಲೆನ್ಸ್ ಗೆ ಕರೆ ಮಾಡಿದಾರೆ, ಆದರೆ 1 ಗಂಟೆಯಾದರೂ ಆಂಬ್ಯುಲೆನ್ಸ್ ಬಾರದೆ ಯುವಕ ನಡುರಸ್ತೆಯಲ್ಲೇ ಒದ್ದಾಡಿ ಸಾವನ್ನಪ್ಪಿದ್ದಾನೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಮೃತ ಯುವಕನನ್ನು ಬೇಲೂರು ತಾಲೂಕಿನ ಇಬೀಡು ಗ್ರಾಮದ ಆನಂದ್ (30) ಎಂದು ಗುರುತಿಸಲಾಗಿದೆ. ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕಿದ್ದು, ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.

ಇದನ್ನೂ ಓದಿ; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗಿರಿಧರ್ (46) ಮಯಂಕ್(3) ಮೃತ ರ್ದುದೈವಿಗಳು. ಇನ್ನು ಹೊನ್ನಾವರದಿಂದ ಸಂಬಂಧಿಕರ ಮದುವೆ ನಿಮಿತ್ತ ಗಿರಿಧರ್ ಕುಟುಂಬ ತೆರಳುವಾಗ, ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ ವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Most Popular

Recent Comments