(AADHAAR CARD UPDATE) ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಯಾವುದೇ ಯೋಜನೆಗಳಿಗೂ ಅರ್ಜಿ ಸಲ್ಲಿಸಬೇಕಾದರೆ ದಾಖಲೆಗಳು ಮುಖ್ಯವಾಗಿ ಬೇಕಾಗುತ್ತದೆ. ಅದರಲ್ಲಿ ಆಧಾರ್ ಕಾರ್ಡ್ ಕೂಡ ಒಂದು. ಆದರೆ ಆಧಾರ್ ಕಾರ್ಡ್ ಪಡೆದು 10 ವರ್ಷ ದಾಟಿದವರು ಕಡ್ಡಾಯವಾಗಿ ಆಧಾರ್ ಅಪ್ಡೇಟ್ ಮಾಡಿಸುವಂತೆ ಸರ್ಕಾರ ಹಲವು ಸ್ಪಷ್ಟಪಡಿಸಿತ್ತು. ಇದೀಗ ಆಧಾರ್ ಕಾರ್ಡ್ ಅಪ್ಡೇಟ್ ಗೆ ಜೂನ್ 14 ರಂದು ಕೊನೆಯ ದಿನವಾಗಿದೆ. ಹಾಗಾದರೆ ಆಧಾರ್ ಕಾರ್ಡ್ ಅನ್ನು ಎಲ್ಲಿ ಅಪ್ಡೇಟ್ ಮಾಡಬೇಕು ಹಾಗೂ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಬೆಳೆಪರಿಹಾರ ಹಣ; ಹಣ ಜಮಾ ಆಗಿದ್ಯಾ ಎಂದು ಹೀಗೆ ಚೆಕ್ ಮಾಡಿ
ಆಧಾರ್ ಕಾಡ್ ಅಪ್ಡೇಟ್ ಮಾಡುವುದು ಹೇಗೆ?
* uidai.gov.in ನಲ್ಲಿ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ
* ಹೋಮ್ ಪೇಜ್ ನಲ್ಲಿ, ‘ಮೈ ಅಧಾರ್’ ಟ್ಯಾಬ್ ಅಡಿಯಲ್ಲಿ, ‘ಅಪ್ ಡೇಟ್ ಡೆಮೊಗ್ರಾಫಿಕ್ಸ್ ಡೇಟಾ ಮತ್ತು ಚೆಕ್ ಸ್ಟೇಟಸ್’ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟಕ್ಕೆ ಹೋದ ನಂತರ, ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು ಲಾಗ್ ಇನ್ ಮಾಡಲು ‘OTP’ ಆಯ್ಕೆಯನ್ನು ಆರಿಸಿ.
* ಒಮ್ಮೆ ಹೀಗೆ ಮಾಡಿದ ನಂತರ, ‘ಅಪ್ ಡೇಟ್ ಆಧಾರ್ ಆನ್ ಲೈನ್’ ವಿಭಾಗಕ್ಕೆ ಹೋಗಿ ಮತ್ತು ‘ಅಪ್ ಡೇಟ್ ಆಧಾರ್’ ಕ್ಲಿಕ್ ಮಾಡಿ.
* ಈ ವಿಂಡೋದಲ್ಲಿ ನೀವು ನವೀಕರಿಸಲು ಬಯಸುವ ಡೇಟಾವನ್ನು ಆಯ್ಕೆಮಾಡಿ ಮತ್ತು ಅಗತ್ಯವಿರುವ ಡಾಕ್ಯುಮೆಂಟ್ ಗಳನ್ನು ಅಪ್ ಲೋಡ್ ಮಾಡಿ.
* ಇದೆಲ್ಲಾ ಆದ ಬಳಿಕ ಸಬ್ ಮಿಟ್ ಕೊಡಿ.
* ಇದಿಷ್ಟು ಮಾಡಿದರೆ ನಿಮ್ಮ ಆಧಾರ್ ನವೀಕರಣಗೊಳ್ಳುತ್ತದೆ.
ಇದನ್ನೂ ಓದಿ: ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಇಲ್ಲ ಅಂದ್ರೆ ಸಿಗಲ್ಲ ಸರ್ಕಾರದ ಯೋಜನೆ; ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಡಿಟೈಲ್ಸ್
ಯಾರು ಅಪ್ಡೇಟ್ ಮಾಡಬೇಕು?
ಆಧಾರ್ ಕಾರ್ಡ್ ನಲ್ಲಿ ವ್ಯಕ್ತಿಯ ಬಯೋಮೆಟ್ರಿಕ್ ಡೇಟಾ, ವಿಳಾಸ, ಇಮೇಲ್, ಫೋನ್ ನಂಬರ್ ಹಾಗೂ ಇತರ ಮಾಹಿತಿಗಳಲ್ಲಿ ಯಾವುದೇ ಬದಲಾವಣೆ ಆಗಿದ್ದರೆ ಅವುಗಳನ್ನು ಆಧಾರ್ ನಲ್ಲಿ ಅಪ್ಡೇಟ್ ಮಾಡುವುದು ಅಗತ್ಯ. ಇನ್ನು ಮಗುವಿಗೆ ಆಧಾರ್ ಕಾರ್ಡ್ ಮಾಡಿಸಿದ್ದರೆ ಐದು ವರ್ಷವಾದಾಗ ಹಾಗೂ 15 ವರ್ಷವಾದಾಗ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಅಗತ್ಯ. ಇನ್ನು ಈ ಸನ್ನಿವೇಶಗಳನ್ನು ಹೊರತುಪಡಿಸಿದರೆ ಸದ್ಯ ಯುಐಡಿಎಐ ಸೂಚನೆಯಂತೆ ಆಧಾರ್ ಕಾರ್ಡ್ ಪಡೆದು 10 ವರ್ಷಗಳಾಗಿದ್ದರೆ ಅದನ್ನು ಅಪ್ಡೇಟ್ ಮಾಡುವುದು ಅಗತ್ಯ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply