Aadhaar E-KYC: ಆಧಾರ್‌ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !

(Aadhaar E-KYC:) ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ದೇಶದ ಎಲ್ಲಾ ಎಲ್‌ಪಿಜಿ ಗ್ರಾಹಕರು ತಮ್ಮ ಗ್ಯಾಸ್ ಸಂಪರ್ಕವನ್ನು ನಿರಂತರವಾಗಿ ಬಳಸಲು ಆಧಾರ್ ಆಧಾರಿತ ಬಯೋಮೆಟ್ರಿಕ್ ಇ-ಕೆವೈಸಿ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದೆ.


ನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ


ಮನೆಯಲ್ಲೇ ಇ-ಕೆವೈಸಿ ಮಾಡಲು ಅವಕಾಶ:
ಸಚಿವಾಲಯದ ಹೊಸ ಮಾರ್ಗಸೂಚಿಗಳ ಪ್ರಕಾರ, ಗ್ಯಾಸ್ ಏಜೆನ್ಸಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ. ಗ್ರಾಹಕರು ತಮ್ಮ ಸ್ಮಾರ್ಟ್‌ಫೋನ್‌ಗಳ ಮೂಲಕ ಅಧಿಕೃತ ಮೊಬೈಲ್ ಅಪ್ಲಿಕೇಶನ್‌ಗಳು ಅಥವಾ ಅಧಿಕೃತ ಆನ್‌ಲೈನ್ ಪೋರ್ಟಲ್‌ಗಳನ್ನು ಬಳಸಿಕೊಂಡು ಮನೆಯಲ್ಲಿ ಕುಳಿತು ಸುಲಭವಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.

ಸರ್ಕಾರದ ಈ ಕ್ರಮದ ಉದ್ದೇಶಗಳು
* ನಕಲಿ ಸಂಪರ್ಕಗಳಿಗೆ ತಡೆ: ಅನಧಿಕೃತ ಮತ್ತು ನಕಲಿ ಗ್ಯಾಸ್ ಸಂಪರ್ಕಗಳನ್ನು ಪತ್ತೆಹಚ್ಚಿ ರದ್ದುಪಡಿಸುವುದು
* ಪಾರದರ್ಶಕತೆ ಹೆಚ್ಚಳ: ವಿತರಣಾ ವ್ಯವಸ್ಥೆಯನ್ನು ಹೆಚ್ಚು ಜವಾಬ್ದಾರಿಯುತವಾಗಿಸುವುದು
* ಸಬ್ಸಿಡಿ ನೇರ ಜಮಾ: ಸರ್ಕಾರದ ಸಬ್ಸಿಡಿ ಮೊತ್ತವು ಅರ್ಹ ಗ್ರಾಹಕರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಆಗುವುದನ್ನು ಖಚಿತಪಡಿಸಿಕೊಳ್ಳುವುದು


ನ್ನೂ ಓದಿ: ಮಾ.18 ರಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ


ಇ-ಕೆವೈಸಿ ಪೂರ್ಣಗೊಳಿಸುವ ವಿಧಾನ
* ಸಂಬಂಧಪಟ್ಟ ಗ್ಯಾಸ್ ವಿತರಕರ ಕಚೇರಿಗೆ ಭೇಟಿ ನೀಡುವುದು
* ಎಲ್‌ಪಿಜಿ ಕಂಪನಿಗಳ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಬಳಕೆ
* ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ವಿವರಗಳನ್ನು ನವೀಕರಿಸುವುದು
* ಆಧಾರ್ ಪರಿಶೀಲನೆ ಪ್ರಕ್ರಿಯೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಮಾರ್ಗಸೂಚಿಗಳಂತೆ ನಡೆಯುತ್ತದೆ.

ಹೆಚ್ಚಿನ ಮಾಹಿತಿಗಾಗಿ
ಹೆಚ್ಚಿನ ವಿವರಗಳಿಗೆ ಪ್ರಧಾನಮಂತ್ರಿ ಉಜ್ಜ್ವಲ ಯೋಜನೆ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಬಹುದು ಅಥವಾ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.

Aadhaar E-KYC: ಆಧಾರ್‌ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !
Aadhaar E-KYC: ಆಧಾರ್‌ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !

ನ್ನೂ ಓದಿ: ರಾಜ್ಯದ ರೈತರೇ ಗಮನಿಸಿ; ಈ ಯೋಜನೆಯಡಿ 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ಸಾಲ!


ಇತ್ತೀಚಿನ ಜನಪ್ರಿಯ ಸುದ್ದಿಗಳು (Aadhaar E-KYC:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ