(Aadhaar Link Bank) 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ಮಂಜೂರು ಮಾಡಲಾಗಿದೆ. ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡದಿದ್ದರೆ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮೆ ಆಗುವುದಿಲ್ಲ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಬೆಳೆ ಕಟಾವು ಆಧಾರದ ಮೇಲೆ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಬೀನ್ ಹಾಗೂ ತೊಗರಿ ಬೆಳೆಗಳೆಗೆ ಕಲಬುರಗಿ ಜಿಲ್ಲೆಯ 69,829 ರೈತರ ಬ್ಯಾಂಕ್ ಖಾತೆಗೆ 94.558 ಕೋಟಿ ರೂ., ಸ್ಥಳೀಯ ಪ್ರಕೃತಿ ವಿಕೋಪದಡಿ 18,433 ರೈತರ ಬ್ಯಾಂಕ್ ಖಾತೆಗೆ 6.242 ಕೋಟಿ ರೂ. ವಿಮೆ ಮೊತ್ತ ಹಾಗೂ ಬೆಳೆ ರಾಶಿ ಸಂದರ್ಭದಲ್ಲಿ ಆಗುವ ಹಾನಿ ಘಟಕದಡಿ 382 ರೈತರ ಬ್ಯಾಂಕ್ ಖಾತೆಗೆ 81.927 ಲಕ್ಷ ರೂ. ಹೀಗೆ ಒಟ್ಟು 88,644 ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ 101.619 ಕೋಟಿ ರೂ. ಬೆಳೆ ವಿಮೆ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಇದನ್ನೂ ಓದಿ: ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
ಇದರಲ್ಲಿ 281 ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ ಸಂಖ್ಯೆ ಜೋಡನೆಯಾಗದ ಕಾರಣ 35.95 ಲಕ್ಷ ರೂ. ಪರಿಹಾರ ರೈತರ ಖಾತೆಗೆ ಜಮೆಯಾಗಿರುವುದಿಲ್ಲ. ಇಂತಹ ರೈತರ ವಿವರ ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು, ಸಂಬಂಧಪಟ್ಟ ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಮಾಡಿಸಿದಲ್ಲಿ ಬೆಳೆ ವಿಮೆ ಪರಿಹಾರ ಜಮೆಯಾಗಲಿದೆ ಎಂದಿದ್ದಾರೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್; ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಹೆಚ್ಚಿಸಿದ ಸರ್ಕಾರ
ಇನ್ನೂ ಕಳೆದ ಡಿಸೆಂಬರ್-2023 ಮಾಹೆಯಲ್ಲಿ ಜಿಲ್ಲೆಯಲ್ಲಿ ಮಳೆ ಆಶ್ರಿತ ತೊಗರಿ ಬೆಳೆ ವಿಮೆ ಮಾಡಿಸಿದ 1,20,724 ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ 83.63 ಕೋಟಿ ರೂ. ಮಧ್ಯಂತರ ಪರಿಹಾರ ಜಮೆ ಮಾಡಲಾಗಿತ್ತು. ಒಟ್ಟಾರೆಯಾಗಿ ಕಳೆದ 2023-24ನೇ ಸಾಲಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ 185.259 ಕೋಟಿ ರೂ. ಪರಿಹಾರ ಜಮೆಯಾಗಿದೆ.
ಇದನ್ನೂ ಓದಿ: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್; ಇನ್ಮುಂದೆ ಗ್ರಾ.ಪಂ ಗಳಲ್ಲಿ ಸಿಗಲಿವೆ ಈ ದಾಖಲೆ!
ಕಳೆದ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 1,62,071 ರೈತರು, 1,86,850 ಹೆಕ್ಟರ್ ಪ್ರದೇಶ ಬೆಳೆ ವಿಮೆ ಯೋಜನೆಯಡಿ ನೊಂದಾಯಿಸಿಕೊಂಡಿದ್ದು, ಇದಕ್ಕಾಗಿ ವಿಮಾ ಸಂಸ್ಥೆಗೆ ವಿಮಾ ಕಂತಿನ ರೂಪದಲ್ಲಿ 160.30 ಕೋಟಿ ರೂ. ಸಂದಾಯ ಮಾಡಲಾಗಿತ್ತು. ಇದರಲ್ಲಿ ರೈತರ ವಂತಿಕೆ 18.47 ಕೋಟಿ ರೂ., ರಾಜ್ಯ ಸರ್ಕಾರದ ವಂತಿಕೆ 70.92 ಕೋಟಿ ರೂ. ಹಾಗೂ ಕೇಂದ್ರ ಸರ್ಕಾರದ ವಂತಿಕೆ 70.92 ಕೋಟಿ ರೂ. ಸೇರಿದೆ.

ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಕಂದಾಯ ದಾಖಲೆ ಕುರಿತು ಬಿಗ್ ಅಪ್ಡೇಟ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!






