(Aadhaar Pan Link) ಪಾನ್ ಕಾರ್ಡ್ ಗೆ ಆಧಾರ್ ಅನ್ನು ಲಿಂಕ್ ಮಾಡಬೇಕೆಂದು ಆದಾಯ ತೆರಿಗೆ ಇಲಾಖೆ ಹೇಳುತ್ತಲೇ ಬಂದಿದ್ದು, ಇದೀಗ ಮೇ 31ಕ್ಕೆ ಕೊನೆಯ ದಿನಾಂಕವಾಗಿದೆ.
ಇದನ್ನೂ ಓದಿ: ರೈತರ ಗಮನಕ್ಕೆ; ಈ ಕೆಲಸ ಮಾಡದಿದ್ದರೆ ಖಾತೆಗೆ ಬರಲ್ಲ ಪಿಎಂ ಕಿಸಾನ್ ಯೋಜನೆಯ ಹಣ; ತಕ್ಷಣವೇ ಈ ರೀತಿ ಮಾಡಿ
ಹೌದು, ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದೇ ಹೋದರೆ ಹೆಚ್ಚಿನ ಟಿಡಿಎಸ್ ಕಟ್ಟಬೇಕಾದೀತು. ಈ ಕುರಿತು ಐಟಿ ಇಲಾಖೆ ಮೇ 28 ರಂದು ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದೆ. ಮೇ 31 ರೊಳಗೆ ನಿಮ್ಮ ಪಾನ್ ಅನ್ನು ಆಧಾರ್ ಜೊತೆ ಜೋಡಿಸಿದರೆ ಐಟಿ ಸೆಕ್ಷನ್ 206 ಎಎ ಮತ್ತು 206 ಸಿಸಿ ಅಡಿಯಲ್ಲಿ ಹೆಚ್ಚಿನ ಟ್ಯಾಕ್ಸ್ ಪಾವತಿಯನ್ನು ತಪ್ಪಿಸಬಹುದು.
ಇದನ್ನೂ ಓದಿ: ರೈತರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ಜಮೆ ಆಗಲ್ಲ ಬರ ಪರಿಹಾರ ಹಣ!
ಆಧಾರ್ ಲಿಂಕ್ ಮಾಡದೇ ಇದ್ದಲ್ಲಿ ಏನು?;
ಆಧಾರ್ ಗೆ ಲಿಂಕ್ ಆಗದ ಪಾನ್ ನಂಬರ್ ನಿಷ್ಕ್ರಿಯವಾಗಿರುತ್ತದೆ. ಅಂದರೆ ಇದನ್ನು ಬಳಸಲು ಆಗುವುದಿಲ್ಲ. ಆಧಾರ್ ಗೆ ಲಿಂಕ್ ಮಾಡಿದಲ್ಲಿ ಮಾತ್ರವೇ ಪಾನ್ ಬಳಕೆ ಮಾಡಲು ಆಗುವುದು. ಈಗ ಆಧಾರ್ ಗೆ ಪಾನ್ ಅನ್ನು ಲಿಂಕ್ ಮಾಡಲು ಶುಲ್ಕ ಪಾವತಿಸಬೇಕಾಗುತ್ತದೆ. ಉಚಿತವಾಗಿ ಮಾಡಲು ಇದ್ದ ಡೆಡ್ ಲೈನ್ ಬಹಳ ದಿನಗಳ ಹಿಂದೆಯೇ ಮುಗಿದುಹೋಗಿದೆ. ಈಗ ಶುಲ್ಕ ಪಾವತಿಸಿ ಆಧಾರ್ ಗೆ ಲಿಂಕ್ ಮಾಡುವ ಮೂಲಕ ಪಾನ್ ಕಾರ್ಡ್ ಅನ್ನು ಸಕ್ರಿಯಗೊಳಿಸಬಹುದು.
ಇದನ್ನೂ ಓದಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ; ಗ್ರಾಮ ಆಡಳಿತ ಅಧಿಕಾರಿ ಸೇರಿ 5 ಇಲಾಖೆಗಳ ಹುದ್ದೆಗೆ ಪರೀಕ್ಷೆ ಪ್ರಕಟ
ಯಾರು ಲಿಂಕ್ ಮಾಡಿಸಬೇಕು:
2017 ರ ಜುಲೈ 1ರ ಬಳಿಕ ವಿತರಿಸಲಾದ ಎಲ್ಲಾ ಪಾನ್ ನಂಬರ್ ಗೆ ಆಟೊಮ್ಯಾಟಿಕ್ ಆಗಿ ಆಧಾರ್ ಜೋಡಣೆ ಆಗಿರುತ್ತದೆ. ಆಧಾರ್ ದಾಖಲೆ ಹೊಂದಿದ್ದರೆ ಮಾತ್ರವೇ ಪಾನ್ ನಂಬರ್ ಗೆ ಜೋಡಣೆ ಆಗಿರುತ್ತದೆ. ಆದರೆ, 2017 ರ ಜುಲೈ ಒಂದಕ್ಕಿಂತ ಮುಂಚೆ ಪಾನ್ ಕಾರ್ಡ್ ಮಾಡಿಸುವಾಗ ಆಧಾರ್ ದಾಖಲೆ ಕಡ್ಡಾಯ ಇರಲಿಲ್ಲ. ಬೇರೆ ಬೇರೆ ದಾಖಲೆಗಳನ್ನು ನೀಡಿ ಪಾನ್ ಕಾರ್ಡ್ ಅನ್ನು ಮಾಡಿಸಿದ್ದು, ಹೀಗಾಗಿ 2017 ರ ಜುಲೈ ಒಂದಕ್ಕಿಂತ ಮುಂಚಿತವಾಗಿ ಪಾನ್ ಕಾರ್ಡ್ ಪಡೆದವರು ಕಡ್ಡಾಯವಾಗಿ ಆಧಾರ್ ಲಿಂಕ್ ಮಾಡಿಸಬೇಕು. ಮಾಡದೇ ಇದ್ದಲ್ಲಿ ದಂಡದ ಜೊತೆಗೆ ನಿಷ್ಕ್ರಿಯಗೊಳ್ಳುವ ಸಾಧ್ಯತೆ ಕೂಡ ಇದೆ.
ಇದನ್ನೂ ಓದಿ: ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಶಾಕ್; ಅನ್ನಭಾಗ್ಯ ನಗದು ವರ್ಗಾವಣೆ ಸ್ಥಗಿತ
ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?
* incometaxindiaefiling.gov.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
* ಕ್ವಿಕ್ ಲಿಂಕ್ಸ್ ವಿಭಾಗಕ್ಕೆ ಹೋಗಿ ಮತ್ತು ಲಿಂಕ್ ಆಧಾರ್ ಆಯ್ಕೆಯನ್ನು ಆರಿಸಿ
* ನಿಮ್ಮ ಪಾನ್ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಮೌಲೀಕರಿಸಿ ಬಟನ್ ಕ್ಲಿಕ್ ಮಾಡಿ
* ನಿಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು ಲಿಂಕ್ ಆಧಾರ್ ಬಟನ್ ಕ್ಲಿಕ್ ಮಾಡಿ
* ನಿಮ್ಮ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ ಒಟಿಪಿಯನ್ನು ನಮೂದಿಸಿ ಮತ್ತು ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮೌಲೀಕರಿಸಿ ಬಟನ್ ಕ್ಲಿಕ್ ಮಾಡಿ

ಇದನ್ನೂ ಓದಿ: ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ; ಗ್ರಾಮ ಆಡಳಿತ ಅಧಿಕಾರಿ ಸೇರಿ 5 ಇಲಾಖೆಗಳ ಹುದ್ದೆಗೆ ಪರೀಕ್ಷೆ ಪ್ರಕಟ






