Aadhaar- Ration Card: ಆಧಾರ್‌ & ರೇಷನ್‌ ಕಾರ್ಡ್‌ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ

(Aadhaar- Ration Card:) ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ಕುರಿತು ಉಚಿತ ತರಬೇತಿ ಆಯೋಜಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 29 ರಿಂದ ಪ್ರಾರಂಭವಾಗಲಿದೆ.

ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ಈ ದಾಖಲೆ ಕಡ್ಡಾಯ:
ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
ಅರ್ಜಿ ಸಲ್ಲಿಕೆಗೆ ಡಿಸೆಂಬರ್ 18 ಕೊನೆಯ ದಿನವಾಗಿದೆ.


ನ್ನೂ ಓದಿ: ಆಲದ ಮರದ ನೆರಳಿನಲ್ಲಿ ಶುರುವಾದ ಭಾರತೀಯ ಸ್ಟಾಕ್ ಮಾರ್ಕೆಟ್ – ಇಂದು 400 ಲಕ್ಷ ಕೋಟಿಯ ಮೌಲ್ಯ!


(Aadhaar- Ration Card:) ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9241482541, 9113880324 ಅನ್ನು ಸಂಪರ್ಕಿಸಬಹುದು ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadhaar- Ration Card: ಆಧಾರ್‌ & ರೇಷನ್‌ ಕಾರ್ಡ್‌ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ
Aadhaar- Ration Card: ಆಧಾರ್‌ & ರೇಷನ್‌ ಕಾರ್ಡ್‌ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (Aadhaar- Ration Card:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ