ನವದೆಹಲಿ: ದೇಶದ ಕೋಟ್ಯಂತರ ಆಧಾರ್ ಕಾರ್ಡ್ ಬಳಕೆದಾರರಿಗೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಹತ್ವದ ಸಿಹಿ ಸುದ್ದಿ ನೀಡಿದೆ. ಮೈಆಧಾರ್ ಪೋರ್ಟಲ್ ಮೂಲಕ ಉಚಿತವಾಗಿ ಆಧಾರ್ ದಾಖಲೆಗಳನ್ನು ನವೀಕರಿಸಲು ನೀಡಲಾಗಿದ್ದ ಗಡುವನ್ನು ಯುಐಡಿಎಐ ಮತ್ತೊಂದು ವರ್ಷದವರೆಗೆ ವಿಸ್ತರಿಸಿದೆ.
ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಈ ಸೌಲಭ್ಯವನ್ನು ವಿಸ್ತರಿಸುತ್ತಾ ಬಂದಿರುವ ಯುಐಡಿಎಐ, ಈ ಬಾರಿಯೂ ಜನರಿಂದ ವ್ಯಕ್ತವಾಗಿರುವ ಉತ್ತಮ ಪ್ರತಿಕ್ರಿಯೆಯನ್ನು ಪರಿಗಣಿಸಿ ಹೊಸ ನಿರ್ಧಾರ ಕೈಗೊಂಡಿದೆ.
ಯುಐಡಿಎಐ ಪ್ರಕಟಣೆಯ ಪ್ರಕಾರ, ಲಕ್ಷಾಂತರ ನಾಗರಿಕರು ಮೈಆಧಾರ್ ಪೋರ್ಟಲ್ ಮೂಲಕ ತಮ್ಮ ಗುರುತಿನ ಪುರಾವೆ (PoI) ಹಾಗೂ ವಿಳಾಸದ ಪುರಾವೆ (PoA) ದಾಖಲೆಗಳನ್ನು ಯಶಸ್ವಿಯಾಗಿ ನವೀಕರಿಸಿದ್ದಾರೆ. ವಿಶೇಷವಾಗಿ 10 ವರ್ಷಗಳ ಹಿಂದೆ ಆಧಾರ್ ಪಡೆದಿದ್ದು, ಇದುವರೆಗೆ ಯಾವುದೇ ದಾಖಲೆಗಳನ್ನು ಅಪ್‌ಡೇಟ್ ಮಾಡದವರು ಕಡ್ಡಾಯವಾಗಿ ತಮ್ಮ ವಿವರಗಳನ್ನು ನವೀಕರಿಸಿಕೊಳ್ಳುವಂತೆ ಪ್ರಾಧಿಕಾರ ಮನವಿ ಮಾಡಿದೆ.
ಈ ಉಚಿತ ಸೇವೆ ಕೇವಲ ಆನ್‌ಲೈನ್ ಮೂಲಕ ಸ್ವತಃ ದಾಖಲೆಗಳನ್ನು ಅಪ್‌ಡೇಟ್ ಮಾಡುವವರಿಗೆ ಮಾತ್ರ ಅನ್ವಯವಾಗಲಿದೆ. ನಾಗರಿಕರು ಮೈಆಧಾರ್ ಪೋರ್ಟಲ್ ಮೂಲಕ ಯಾವುದೇ ಶುಲ್ಕವಿಲ್ಲದೆ ಸೇವೆ ಪಡೆಯಬಹುದಾಗಿದೆ.
ಆದರೆ, ಆಧಾರ್ ಸೇವಾ ಕೇಂದ್ರ, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ ದಾಖಲೆಗಳನ್ನು ನವೀಕರಿಸುವವರು ನಿಯಮಿತ ಸೇವಾ ಶುಲ್ಕವಾಗಿ ₹75 ಪಾವತಿಸಬೇಕಾಗುತ್ತದೆ ಎಂದು ಯುಐಡಿಎಐ ಸ್ಪಷ್ಟಪಡಿಸಿದೆ.
ಆಧಾರ್ ಡೇಟಾಬೇಸ್‌ನ ನಿಖರತೆ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ತಮ್ಮ ಮಾಹಿತಿಯನ್ನು ನವೀಕರಿಸಿಕೊಳ್ಳುವುದು ಅಗತ್ಯ ಎಂದು ಯುಐಡಿಎಐ ತಿಳಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Aadhaar Update Deadline:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply