(Aadhaar update;) ಕೆಲವು ದಾಖಲೆಗಳು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಯೋಜನೆಯ ಲಾಭ ಪಡೆಯಲು ಮುಖ್ಯವಾಗಿದೆ. ಅಲ್ಲದೆ. ವಿವಿಧ ಯೋಜನೆಗೆ, ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಗೆ ಹಾಗೂ ಹಲವು ಕಡೆ ದಾಖಲೆಗಳು ಬೇಕಾಗುತ್ತದೆ. ಅದರಲ್ಲಿ ಆಧಾರ್ ಕಾರ್ಡ್ ಕೂಡ ಒಂದು. ಈ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ಅಪ್‌ಡೇಟ್ ಮಾಡಲು ಸೂಚಿಸಿತ್ತು. ಈ ಅಪ್ ಡೇಟ್ ಕುರಿತು ಇಲ್ಲಿದೆ ಮಾಹಿತಿ.
ಇದನ್ನೂ ಓದಿ; ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು(ಯುಐಡಿಎಐ) ಆಧಾರ್ ಹೊಂದಿರುವವರು ಉಚಿತ ಆಧಾರ್ ಅಪ್ ಡೇಟ್ ಗಡುವನ್ನು ಮತ್ತೆ ವಿಸ್ತರಿಸಿದೆ. ನೀವು ಇದೀಗ ನಿಮ್ಮ ಆಧಾರ್ ವಿವರಗಳನ್ನು ಡಿಸೆಂಬರ್ 14, 2024 ರವರೆಗೆ ಉಚಿತವಾಗಿ ಅಪ್‌ಡೇಟ್ ಮಾಡಬಹುದು. ಜೂನ್ 2024 ರಿಂದ ಹಿಂದಿನ ವಿಸ್ತರಣೆಯನ್ನು ಅನುಸರಿಸಿ ಇದು ಎರಡನೇ ವಿಸ್ತರಣೆಯಾಗಿದೆ.
ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸುವ ಪ್ರಕ್ರಿಯೆಯು ಯುಐಡಿಎಐ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರ ಲಭ್ಯವಿದೆ. ಆದಾಗ್ಯೂ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸಲು ಉಚಿತ ಆಯ್ಕೆಯು ಲಭ್ಯವಿಲ್ಲ. ಬಯೋಮೆಟ್ರಿಕ್ಸ್ ಅನ್ನು ನವೀಕರಿಸಲು, ನೀವು ಆಧಾರ್ ಕೇಂದ್ರಗಳಿಗೆ ಭೇಟಿ ನೀಡಬೇಕು ಮತ್ತು ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಆಧಾರ್ ಕಾಡ್ ಅಪ್ಡೇಟ್ ಮಾಡುವುದು ಹೇಗೆ?
* uidai.gov.in ನಲ್ಲಿ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ
* ಹೋಮ್ ಪೇಜ್ ನಲ್ಲಿ, ‘ಮೈ ಅಧಾರ್’ ಟ್ಯಾಬ್ ಅಡಿಯಲ್ಲಿ, ‘ಅಪ್ ಡೇಟ್ ಡೆಮೊಗ್ರಾಫಿಕ್ಸ್ ಡೇಟಾ ಮತ್ತು ಚೆಕ್ ಸ್ಟೇಟಸ್’ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟಕ್ಕೆ ಹೋದ ನಂತರ, ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು ಲಾಗ್ ಇನ್ ಮಾಡಲು ‘OTP’ ಆಯ್ಕೆಯನ್ನು ಆರಿಸಿ.
* ಒಮ್ಮೆ ಹೀಗೆ ಮಾಡಿದ ನಂತರ, ‘ಅಪ್ ಡೇಟ್ ಆಧಾರ್ ಆನ್ ಲೈನ್’ ವಿಭಾಗಕ್ಕೆ ಹೋಗಿ ಮತ್ತು ‘ಅಪ್ ಡೇಟ್ ಆಧಾರ್’ ಕ್ಲಿಕ್ ಮಾಡಿ.
* ಈ ವಿಂಡೋದಲ್ಲಿ ನೀವು ನವೀಕರಿಸಲು ಬಯಸುವ ಡೇಟಾವನ್ನು ಆಯ್ಕೆಮಾಡಿ ಮತ್ತು ಅಗತ್ಯವಿರುವ ಡಾಕ್ಯುಮೆಂಟ್ ಗಳನ್ನು ಅಪ್ ಲೋಡ್ ಮಾಡಿ.
* ಇದೆಲ್ಲಾ ಆದ ಬಳಿಕ ಸಬ್ ಮಿಟ್ ಕೊಡಿ.
* ಇದಿಷ್ಟು ಮಾಡಿದರೆ ನಿಮ್ಮ ಆಧಾರ್ ನವೀಕರಣಗೊಳ್ಳುತ್ತದೆ.
ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; ಎರಡು ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಈ ರೀತಿ ಚೆಕ್ ಮಾಡಿ
ಯಾರು ಅಪ್ಡೇಟ್ ಮಾಡಬೇಕು?
ಆಧಾರ್ ಕಾರ್ಡ್ ನಲ್ಲಿ ವ್ಯಕ್ತಿಯ ಬಯೋಮೆಟ್ರಿಕ್ ಡೇಟಾ, ವಿಳಾಸ, ಇಮೇಲ್, ಫೋನ್ ನಂಬರ್ ಹಾಗೂ ಇತರ ಮಾಹಿತಿಗಳಲ್ಲಿ ಯಾವುದೇ ಬದಲಾವಣೆ ಆಗಿದ್ದರೆ ಅವುಗಳನ್ನು ಆಧಾರ್ ನಲ್ಲಿ ಅಪ್ಡೇಟ್ ಮಾಡುವುದು ಅಗತ್ಯ. ಇನ್ನು ಮಗುವಿಗೆ ಆಧಾರ್ ಕಾರ್ಡ್ ಮಾಡಿಸಿದ್ದರೆ ಐದು ವರ್ಷವಾದಾಗ ಹಾಗೂ 15 ವರ್ಷವಾದಾಗ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಅಗತ್ಯ. ಇನ್ನು ಈ ಸನ್ನಿವೇಶಗಳನ್ನು ಹೊರತುಪಡಿಸಿದರೆ ಸದ್ಯ ಯುಐಡಿಎಐ ಸೂಚನೆಯಂತೆ ಆಧಾರ್ ಕಾರ್ಡ್ ಪಡೆದು 10 ವರ್ಷಗಳಾಗಿದ್ದರೆ ಅದನ್ನು ಅಪ್ಡೇಟ್ ಮಾಡುವುದು ಅಗತ್ಯ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






