aadhar- card up: ಆಧಾರ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಓದಿ

(aadhar- card up:) ಸರ್ಕಾರದ ಯಾವುದೇ ಯೋಜನೆಯನ್ನು ಪಡೆಯಲು ಆಧಾರ್‌ ಕಾರ್ಡ್‌ ದಾಖಲೆ ಪ್ರಮಖವಾಗಿ ಬೇಕಾಗುತ್ತದೆ. ಈ ಆಧಾರ್‌ ಕಾರ್ಡ್‌ ಪಡೆದುಕೊಂಡು 10 ವರ್ಷ ಆದವರು ಅಪ್ಡೇಟ್‌ ಮಾಡಬೇಕಿದ್ದು, ಅಪ್ಡೇಟ್‌ ಮಾಡುವುದು ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ


ಆಧಾರ್‌ ಕಾರ್ಡ್‌ ಹೊಂದಿರುವವರು ಉಚಿತ ಆಧಾರ್‌ ಅಪ್ಡೇಟ್‌ ಮಾಡುವ ಗಡುವನ್ನು ಡಿಸೆಂಬರ್‌ 14 2024 ರವರೆಗೆ ವಿಸ್ತರಿಸಿದ್ದು, ಇನ್ನು 2 ದಿನ ಮಾತ್ರ ಉಚಿತವಾಗಿ ಅಪ್ಡೇಟ್‌ ಮಾಡಿಕೊಳ್ಳಬಹುದಾಗಿದೆ.

ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸುವ ಪ್ರಕ್ರಿಯೆಯು ಯುಐಡಿಎಐ ಆನ್‌ಲೈನ್ ಪೋರ್ಟಲ್ ಮೂಲಕ ಲಭ್ಯವಿದೆ. ಬಯೋಮೆಟ್ರಿಕ್ಸ್ ಅನ್ನು ನವೀಕರಿಸಲು ನೀವು ಆಧಾರ್ ಕೇಂದ್ರಗಳಿಗೆ ಭೇಟಿ ನೀಡಬೇಕು. ಇನ್ನು ಆಧಾರ್ ಅಪ್ಡೇಟ್ ಯಾರು ಮಾಡಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ.


ಇದನ್ನೂ ಓದಿ; PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ


ಆಧಾರ್ ಕಾರ್ಡ್ ನಲ್ಲಿ ವ್ಯಕ್ತಿಯ ಬಯೋಮೆಟ್ರಿಕ್ ಡೇಟಾ, ವಿಳಾಸ, ಇಮೇಲ್, ಫೋನ್ ನಂಬರ್ ಹಾಗೂ ಇತರ ಮಾಹಿತಿಗಳಲ್ಲಿ ಯಾವುದೇ ಬದಲಾವಣೆ ಆಗಿದ್ದರೆ ಅವುಗಳನ್ನು ಆಧಾರ್ ನಲ್ಲಿ ಅಪ್ಡೇಟ್ ಮಾಡುವುದು ಅಗತ್ಯ.


ಇದನ್ನೂ ಓದಿ; ಪಂಚಾಯತಿ ರಾಜ್ ನಿಂದ ಸ್ಕಾಲರ್‌ ಶಿಪ್‌; ತಿಂಗಳಿಗೆ ಸಿಗಲಿದೆ 7,000, ಹೀಗೆ ಅರ್ಜಿ ಸಲ್ಲಿಸಿ


ಇನ್ನು ಮಗುವಿಗೆ ಆಧಾರ್ ಕಾರ್ಡ್ ಮಾಡಿಸಿ ಐದು ವರ್ಷವಾದಾಗ ಹಾಗೂ 15 ವರ್ಷವಾದಾಗ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಅಗತ್ಯ. ಇನ್ನು ಈ ಸನ್ನಿವೇಶಗಳನ್ನು ಹೊರತುಪಡಿಸಿದರೆ ಸದ್ಯ ಯುಐಡಿಎಐ ಸೂಚನೆಯಂತೆ ಆಧಾರ್ ಕಾರ್ಡ್ ಪಡೆದು 10 ವರ್ಷಗಳಾಗಿದ್ದರೆ ಅದನ್ನು ಅಪ್ಡೇಟ್ ಮಾಡುವುದು ಅಗತ್ಯ.


ಇದನ್ನೂ ಓದಿ; ನೌಕಾಪಡೆಯಲ್ಲಿ ಜಾಬ್‌ ಆಫರ್‌; 10th, PUC ವಿದ್ಯಾರ್ಹತೆ; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಆಧಾರ್ ಕಾಡ್ ಅಪ್ಡೇಟ್ ಮಾಡುವುದು ಹೇಗೆ?
* uidai.gov.in ನಲ್ಲಿ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ
* ಹೋಮ್‌ ಪೇಜ್‌ ನಲ್ಲಿ, ‘ಮೈ ಅಧಾರ್’ ಟ್ಯಾಬ್ ಅಡಿಯಲ್ಲಿ, ‘ಅಪ್‌ ಡೇಟ್ ಡೆಮೊಗ್ರಾಫಿಕ್ಸ್ ಡೇಟಾ ಮತ್ತು ಚೆಕ್ ಸ್ಟೇಟಸ್’ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟಕ್ಕೆ ಹೋದ ನಂತರ, ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು ಲಾಗ್ ಇನ್ ಮಾಡಲು ‘OTP’ ಆಯ್ಕೆಯನ್ನು ಆರಿಸಿ.
* ಒಮ್ಮೆ ಹೀಗೆ ಮಾಡಿದ ನಂತರ, ‘ಅಪ್‌ ಡೇಟ್ ಆಧಾರ್ ಆನ್‌ ಲೈನ್’ ವಿಭಾಗಕ್ಕೆ ಹೋಗಿ ಮತ್ತು ‘ಅಪ್‌ ಡೇಟ್ ಆಧಾರ್’ ಕ್ಲಿಕ್ ಮಾಡಿ.
* ಈ ವಿಂಡೋದಲ್ಲಿ ನೀವು ನವೀಕರಿಸಲು ಬಯಸುವ ಡೇಟಾವನ್ನು ಆಯ್ಕೆಮಾಡಿ ಮತ್ತು ಅಗತ್ಯವಿರುವ ಡಾಕ್ಯುಮೆಂಟ್‌ ಗಳನ್ನು ಅಪ್‌ ಲೋಡ್ ಮಾಡಿ.
* ಇದೆಲ್ಲಾ ಆದ ಬಳಿಕ ಸಬ್‌ ಮಿಟ್‌ ಕೊಡಿ.
* ಇದಿಷ್ಟು ಮಾಡಿದರೆ ನಿಮ್ಮ ಆಧಾರ್‌ ನವೀಕರಣಗೊಳ್ಳುತ್ತದೆ.

aadhar- card up: ಆಧಾರ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಓದಿ
aadhar- card up: ಆಧಾರ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಓದಿ

ಇತ್ತೀಚಿನ ಜನಪ್ರಿಯ ಸುದ್ದಿಗಳು