Aadhar-Update:ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಆದೇಶ

(Aadhar-Update) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳ ಲಾಭ ಪಡೆಯಲು ದಾಖಲೆಗಳು ಮುಖ್ಯ. ಅದರಲ್ಲಿ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇನ್ನು ಹಲವು ದಾಖಲೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಾಯಧನ, ಸಬ್ಸಿಡಿ, ಸಾಲ ಸೌಲಭ್ಯಕ್ಕೆ ಮುಖ್ಯವಾಗಿದೆ. ಇದೀಗ ಆಧಾರ್ ಕಾರ್ಡ್ ಹೊಂದಿರುವವರಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಹೌದು, ಆಧಾರ್ ಕಾರ್ಡ್ ಹೊಂದಿರುವವರು ಉಚಿತ ಆಧಾರ್ ಅಪ್ ಡೇಟ್ ಗಡುವನ್ನು ವಿಸ್ತರಿಸಿದ್ದು, ಆಧಾರ್ ವಿವರಗಳನ್ನು ಡಿಸೆಂಬರ್ 14, 2024 ರವರೆಗೆ ಉಚಿತವಾಗಿ ಅಪ್‌ಡೇಟ್ ಮಾಡಬಹುದು. ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸುವ ಪ್ರಕ್ರಿಯೆಯು ಯುಐಡಿಎಐ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರ ಲಭ್ಯವಿದೆ. ಆದಾಗ್ಯೂ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸಲು ಉಚಿತ ಆಯ್ಕೆಯು ಲಭ್ಯವಿಲ್ಲ. ಬಯೋಮೆಟ್ರಿಕ್ಸ್ ಅನ್ನು ನವೀಕರಿಸಲು, ನೀವು ಆಧಾರ್ ಕೇಂದ್ರಗಳಿಗೆ ಭೇಟಿ ನೀಡಬೇಕು ಮತ್ತು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇನ್ನು ಆಧಾರ್ ಅಪ್ಡೇಟ್ ಯಾರು ಮಾಡಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೇಷನ್‌ ಕಾರ್ಡ್‌ ಗೆ ಅರ್ಜಿ ಆಹ್ವಾನ; ಈ ದಾಖಲೆಗಳು ಕಡ್ಡಾಯ


ಆಧಾರ್ ಕಾರ್ಡ್ ನಲ್ಲಿ ವ್ಯಕ್ತಿಯ ಬಯೋಮೆಟ್ರಿಕ್ ಡೇಟಾ, ವಿಳಾಸ, ಇಮೇಲ್, ಫೋನ್ ನಂಬರ್ ಹಾಗೂ ಇತರ ಮಾಹಿತಿಗಳಲ್ಲಿ ಯಾವುದೇ ಬದಲಾವಣೆ ಆಗಿದ್ದರೆ ಅವುಗಳನ್ನು ಆಧಾರ್ ನಲ್ಲಿ ಅಪ್ಡೇಟ್ ಮಾಡುವುದು ಅಗತ್ಯ. ಇನ್ನು ಮಗುವಿಗೆ ಆಧಾರ್ ಕಾರ್ಡ್ ಮಾಡಿಸಿದ್ದರೆ ಐದು ವರ್ಷವಾದಾಗ ಹಾಗೂ 15 ವರ್ಷವಾದಾಗ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಅಗತ್ಯ. ಇನ್ನು ಈ ಸನ್ನಿವೇಶಗಳನ್ನು ಹೊರತುಪಡಿಸಿದರೆ ಸದ್ಯ ಯುಐಡಿಎಐ ಸೂಚನೆಯಂತೆ ಆಧಾರ್ ಕಾರ್ಡ್ ಪಡೆದು 10 ವರ್ಷಗಳಾಗಿದ್ದರೆ ಅದನ್ನು ಅಪ್ಡೇಟ್ ಮಾಡುವುದು ಅಗತ್ಯ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ; ಸ್ಕಾಲರ್‌ ಶಿಪ್‌ ಜೊತೆ ಸಿಗಲಿದೆ ಈ ಸೌಲಭ್ಯ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಆಧಾರ್ ಕಾಡ್ ಅಪ್ಡೇಟ್ ಮಾಡುವುದು ಹೇಗೆ?
* uidai.gov.in ನಲ್ಲಿ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ
* ಹೋಮ್‌ ಪೇಜ್‌ ನಲ್ಲಿ, ‘ಮೈ ಅಧಾರ್’ ಟ್ಯಾಬ್ ಅಡಿಯಲ್ಲಿ, ‘ಅಪ್‌ ಡೇಟ್ ಡೆಮೊಗ್ರಾಫಿಕ್ಸ್ ಡೇಟಾ ಮತ್ತು ಚೆಕ್ ಸ್ಟೇಟಸ್’ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟಕ್ಕೆ ಹೋದ ನಂತರ, ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು ಲಾಗ್ ಇನ್ ಮಾಡಲು ‘OTP’ ಆಯ್ಕೆಯನ್ನು ಆರಿಸಿ.
* ಒಮ್ಮೆ ಹೀಗೆ ಮಾಡಿದ ನಂತರ, ‘ಅಪ್‌ ಡೇಟ್ ಆಧಾರ್ ಆನ್‌ ಲೈನ್’ ವಿಭಾಗಕ್ಕೆ ಹೋಗಿ ಮತ್ತು ‘ಅಪ್‌ ಡೇಟ್ ಆಧಾರ್’ ಕ್ಲಿಕ್ ಮಾಡಿ.
* ಈ ವಿಂಡೋದಲ್ಲಿ ನೀವು ನವೀಕರಿಸಲು ಬಯಸುವ ಡೇಟಾವನ್ನು ಆಯ್ಕೆಮಾಡಿ ಮತ್ತು ಅಗತ್ಯವಿರುವ ಡಾಕ್ಯುಮೆಂಟ್‌ ಗಳನ್ನು ಅಪ್‌ ಲೋಡ್ ಮಾಡಿ.
* ಇದೆಲ್ಲಾ ಆದ ಬಳಿಕ ಸಬ್‌ ಮಿಟ್‌ ಕೊಡಿ.
* ಇದಿಷ್ಟು ಮಾಡಿದರೆ ನಿಮ್ಮ ಆಧಾರ್‌ ನವೀಕರಣಗೊಳ್ಳುತ್ತದೆ.

Aadhar-Update:ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಆದೇಶ
Aadhar-Update:ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಆದೇಶ

ಇದನ್ನೂ ಓದಿ; ಐಡಿಬಿಐ ಬ್ಯಾಂಕ್‌’ನಲ್ಲಿ 1000 ಹುದ್ದೆಗಳಿಗೆ ಅರ್ಜಿ ಆಹ್ವಾನ; 29,000 ವೇತನ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು