ಎರಡು ಬೈಕ್ ಗಳ ನಡುವೆ ಅಪಘಾತ; ಓರ್ವನಿಗೆ ಗಂಭೀರ ಗಾಯ

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಎರಡು ಬೈಕ್ ಗಳ ನಡುವೆ ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಬಳಿ ನಡೆದಿದೆ. ಸಾಗರದ ನಿವಾಸಿ ಶ್ರೀನಿವಾಸ್ (61) ಗಂಭೀರ ಗಾಯಗಳಾಗಿರುವ ವ್ಯಕ್ತಿ.

ಇದನ್ನೂ ಓದಿ; ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

ಕೊಪ್ಪದಿಂದ ಸಾಗರಕ್ಕೆ ತೆರಳುತಿದ್ದ ಸ್ಕೂಟಿ ಹಾಗೂ ಗರ್ತಿಕೆರೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಬಜಾಜ್ CT 100 ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಶ್ರೀನಿವಾಸ್ ಅವರು ಗಂಭೀರ ಗಾಯಗೊಂಡಿದ್ದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಇನ್ನೊಂದು ಬೈಕ್ ನಲ್ಲಿದ್ದ ಗರ್ತಿಕೆರೆ ಮೂಲದ ಅಭಿ ಎನ್ನುವವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ವಸತಿ ಶಾಲೆಯೊಂದರಲ್ಲಿ 13 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ತೇಜಸ್ವಿನಿ(13) ಮೃತಪಟ್ಟ ವಿದ್ಯಾರ್ಥಿನಿ.

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿರುವ ಖಾಸಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ತೇಜಸ್ವಿನಿ ಎಂಬ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ವಿದ್ಯಾರ್ಥಿನಿಯ ಪಾರ್ಥಿವ ಶರೀರ ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮೃತ ಪಟ್ಟ ವಿದ್ಯಾರ್ಥಿನಿಯ ಶವದ ಮರಣೋತ್ತರ ಪರೀಕ್ಷೆಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಉನ್ನತ ಮಟ್ಟದ ವೈದ್ಯರಿಂದ ಶವ ಪರೀಕ್ಷೆ ಮಾಡಿಸಲು ತೀರ್ಮಾನಿಸಲಾಗಿದೆ ಎಂದೂ ತಿಳಿದು ಬಂದಿದೆ.

ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಇನ್ನು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ಮೃತ ವಿದ್ಯಾರ್ಥಿನಿಯ ಪೋಷಕರಿಗೆ ಸಾಂತ್ವಾನ ಹೇಳಿ. ವಿದ್ಯಾರ್ಥಿನಿ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಕರಣ ದಾಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.