Friday, June 9, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ದತ್ತಪೀಠ ಮಾರ್ಗದಲ್ಲಿ ಭೀಕರ ಅಪಘಾತ; ಪ್ರಪಾತಕ್ಕೆ ಉರುಳಿದ ಕಾರು

ಚಿಕ್ಕಮಗಳೂರು: ದತ್ತಪೀಠ ಮಾರ್ಗದಲ್ಲಿ ಭೀಕರ ಅಪಘಾತ; ಪ್ರಪಾತಕ್ಕೆ ಉರುಳಿದ ಕಾರು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರ ಕಾರೊಂದು ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಪ್ರಪಾತಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗಿರಿಶ್ರೇಣಿಯಲ್ಲಿ ನಡೆದಿದೆ.

ಮೈಸೂರಿನಿಂದ ಚಿಕ್ಕಮಗಳೂರಿಗೆ ಒಂದೇ ಕುಟುಂಬದ ನಾಲ್ವರು ಬುಧವಾರ ಪ್ರವಾಸಕ್ಕೆ ಬಂದಿದ್ದು, ಚಿಕ್ಕಮಗಳೂರಿನಿಂದ ದತ್ತಪೀಠಕ್ಕೆ ತೆರಳಿದ ಬಳಿಕ ಚಿಕ್ಕಮಗಳೂರು ನಗರಕ್ಕೆ ಹಿಂದಿರುಗುತ್ತಿದ್ದ ಮಾರ್ಗದಲ್ಲಿರುವ ಕವಿಕಲ್‍ಗಂಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಸೀತಾರಾಮ್, ಸುಗುಣ, ಶ್ರೇಯಸ್, ಶುಭಾ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದ್ದು, ಅಪಘಾತ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಪಶ್ಚಾತ್ತಾಪ ಪಾದಯಾತ್ರೆ ಕೈಗೊಂಡ ವೈ ಎಸ್ ವಿ ದತ್ತಾ; ರಾಜಕೀಯದಿಂದಲೂ ನಿವೃತ್ತಿ; ಸೋಲಿನ ಬಳಿಕ ಅಭಿಮಾನಿಗಳಿಗೆ ಸುದೀರ್ಘ ಪತ್ರ; ಏನಂದ್ರು ಮೇಷ್ಟ್ರು?


ಇತ್ತೀಚಿನ ಜನಪ್ರಿಯ ಸುದ್ದಿಗಳು


ಚಿಕ್ಕಮಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023 ರಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತಗೊಂಡ ಜೆಡಿಎಸ್ ನ ವೈಎಸ್‌ವಿ ದತ್ತ ಅವರು ಇದೀಗ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಮಾತ್ರವಲ್ಲದೆ ಚುನಾವಣೆ ಸಮಯದಲ್ಲಿ ನಡೆದ ಬೆಳವಣಿಗೆಯಿಂದ ಪಶ್ಚಾತ್ತಾಪ ಪಟ್ಟಿರುವ ದತ್ತ ಅವರು, ಇದೀಗ ಕ್ಷೇತ್ರದಲ್ಲಿ ಪಶ್ಚಾತ್ತಾಪ ಪಾದಯಾತ್ರೆ ಕೈಗೊಂಡು ಜನರಲ್ಲಿ ಕ್ಷಮೆ ಕೋರಲು ನಿರ್ಧರಿಸಿದ್ದಾರೆ. ಈ ಬಗ್ಗೆ ವೈಎಸ್‌ವಿ ದತ್ತ ಸುದೀರ್ಘ ಪತ್ರ ಬರೆದಿದ್ದಾರೆ.

ನನಗೆ ಕ್ಷೇತ್ರದ ಜನತೆ ನೀಡಿರುವ ಪ್ರೀತಿಗೆ ಪ್ರತಿಯಾಗಿ ಕೊನೆಯ ಉಸಿರು ಇರುವವರೆಗೂ ಎಲ್ಲರಲ್ಲೂ ಒಂದಾಗಿ ನನ್ನ ನೆಲದಲ್ಲಿಯೇ ಮಣ್ಣಾಗುತ್ತೇನೆ. ನನ್ನ ಅನೇಕ ತಪ್ಪುಗಳಿಗೆ ಜನ ಸರಿಯಾದ ಶಿಕ್ಷೆ ನೀಡಿದ್ದಾರೆ. ತಪ್ಪು ಮಾಡಿದ ನಾನು ಪ್ರಾಯಶ್ಚಿತ್ತ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಕಡೂರು ಮಾಜಿ ಶಾಸಕ ವೈ.ಎಸ್.ವಿ. ದತ್ತ ಹೇಳಿದ್ದಾರೆ.

ಕ್ಷೇತ್ರದ ನೂತನ ಶಾಸಕರಿಗೆ ಮಂತ್ರಿಯಾಗಲೆಂದು ಶುಭ ಹಾರೈಸಿದರು. ಸದ್ಯ ನಾನೀಗ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ನಾನು ಎಲ್ಲಿ ಎಡವಿದೆ, ನನ್ನ ಮತದಾರ ಬಂಧುಗಳಾದ ನಿಮ್ಮ ನಿರೀಕ್ಷೆಯನ್ನು ಮುಟ್ಟಲು ನಾನು ಎಲ್ಲಿ ವಿಫಲನಾಗಿದ್ದೇನೆ ಎಂಬ ಬಗ್ಗೆ ಚಿಂತನ ಮಂಥನ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಕಡೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜೂನ್ 24ರಂದು ನನ್ನ ಜನ್ಮದಿನವಾಗಿದ್ದು, ಅಂದಿನಿಂದ ಕ್ಷೇತ್ರದ ಪ್ರತಿ ಹಳ್ಳಿಗೆ ಪಾದಯಾತ್ರೆ ಮೂಲಕ ತೆರಳಿ ಜನರ ಕ್ಷಮೆ ಕೋರುತ್ತೇನೆ. ಪಾದಯಾತ್ರೆ ವೇಳೆ ಹಳ್ಳಿಗಳಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಯಾವುದೇ ಚುನಾವಣೆ ದೃಷ್ಟಿಯಿಂದ ನಾನು ಇದನ್ನು ಮಾಡುತ್ತಿಲ್ಲ. ನನ್ನ ಆತ್ಮಾವಲೋಕನಕ್ಕಾಗಿ ಪ್ರಾಯಶ್ಚಿತ್ತ ಪಾದಯಾತ್ರೆ ಮಾಡುತ್ತಿದ್ದೇನೆ ಎಂದು ದತ್ತ ತಿಳಿಸಿದ್ದಾರೆ.

ಕಳೆದ 17 ವರ್ಷಗಳಿಂದ ನೀವು ತೋರಿರುವ ಪ್ರೀತಿ, ಬೆಂಬಲ, ಅಭಿಮಾನದ ಕಾರಣದಿಂದ ನಿಮ್ಮ ಋಣ ತೀರಿಸುವ ಹಾಗೂ ನನ್ನ ಕೊನೆಯ ಉಸಿರು ಇರುವವರೆಗೂ ನಾನು ನಿಮ್ಮೊಂದಿಗೆ ಇದ್ದು ನಿಮ್ಮಲ್ಲಿಯೇ ಒಬ್ಬನಾಗಿ ಈ ನನ್ನ ನೆಲದಲ್ಲಿ ಮಣ್ಣಾಗಬೇಕೆಂಬ ದೃಢ ಸಂಕಲ್ಪ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುವ ವೈ.ಎಸ್.ವಿ. ದತ್ತ ಅವರ ನಿರ್ಧಾರಕ್ಕೆ ಸಂಸದ ಪ್ರಜ್ವಲ್ ರೇವಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ನಿವೃತ್ತಿ ಮಾತನಾಡಬೇಡಿ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದು, ಕಡೂರಿನಲ್ಲಿ ದತ್ತ ಅವರ ಸೋಲು ಕೇವಲ ಅವರೊಬ್ಬರ ಸೋಲಲ್ಲ, ಅದು ನಮ್ಮೆಲ್ಲರ ಸೋಲು. ಎಲ್ಲರೂ ಸೇರಿ ದತ್ತ ಅವರಿಗೆ ಸಹಕಾರ ನೀಡೋಣ ಎಂದು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

Most Popular

Recent Comments