ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಜೈಲಿನಲ್ಲಿದ್ದ ಕೊಲೆ ಆರೋಪಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕೆಂಚಪ್ಪ (49) ಚಿಕಿತ್ಸೆ ಫಲಿಸದೆ ಮೃತಪಟ್ಟ ಕೊಲೆ ಆರೋಪಿ.
ಇದನ್ನೂ ಓದಿ; ಶೃಂಗೇರಿ: ರಿಜಿಸ್ಟ್ರೇಷನ್ ನಂಬರ್ ಇಲ್ಲದ ಕಾರ್ ನಲ್ಲಿ ಬಂದ್ರು.. 3000 ರೂ. ಪೆಟ್ರೋಲ್ ಹಾಕಿಸಿ ಹಣ ಕೊಡದೆ ಪರಾರಿಯಾದ್ರು!
ಕಡೂರು ಪೊಲೀಸ್ ಠಾಣೆಯಲ್ಲಿ, ಮೊಬೈಲ್ ವಿಚಾರವಾಗಿ ಮಂಜುನಾಥ್ ಎಂಬುವುರನ್ನು ಕೊಲೆ ಮಾಡಿರುವ ಆರೋಪದಡಿ ಕೆಂಚಪ್ಪ 5 ತಿಂಗಳಿನಿಂದ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಲ್ಲಿದ್ದರು. ಮೂರು ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಮಳೆಗಾಲದಲ್ಲಿ ಗೆಳೆಯರ ಜೊತೆ ಟ್ರೆಕ್ಕಿಂಗ್ ಮಾಡಲು ಚಿಕ್ಕಮಗಳೂರಿನ ಬೆಸ್ಟ್ ಜಾಗ ಇಲ್ಲಿದೆ ನೋಡಿ
- ಟ್ವಿಟ್ಟರ್ ಗೆ ಟಕ್ಕರ್ ನೀಡಲು ಬಿಡುಗಡೆ ಮಾಡಿದ ಥ್ರೆಡ್ಸ್ ಆಪ್ ಹೇಗಿದೆ..
- arecanut price: 08 ಜುಲೈ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಆದರೆ, ಕೆಂಚಪ್ಪ ಅವರ ಕುಟುಂಬಸ್ಥರು ಅನಾರೋಗ್ಯವಿದ್ದರೂ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಜೈಲು ಸಿಬ್ಬಂದಿ ಮೇಲೆ ಆರೋಪ ಮಾಡಿದ್ದಾರೆ.
ಇದನ್ನೂ ಓದಿ; fact check: ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ ಎಂದು ವಿಡಿಯೋ ವೈರಲ್
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ; ಸರ್ಕಾರಿ ಬಸ್ಸಿನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕುಡಿದ ಮತ್ತಿನಲ್ಲಿ ಯುವಕರು ಕೆ.ಎಸ್.ಆರ್.ಟಿ.ಸಿ ಬಸ್ಸಿನ ಗ್ಲಾಸ್ ಒಡೆದು, ಬಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪದ ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದೆ.
ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿನಿಂದ ಗಾಜಿನ ಮದ್ಯದ ಬಾಟಲಿಯನ್ನ ಬಸ್ಸಿನ ಮೇಲೆ ಎಸೆದಿದ್ದಾರೆ. ಇದು ಬಸ್ಸಿನ ಮುಂಭಾಗದ ಗ್ಲಾಸಿಗೆ ತಗುಲಿ ಗಾಜು ಪುಡಿಯಾಗಿದೆ. ಈ ವೇಳೆ ಕಡೂರು ಕೆ.ಎಸ್.ಆರ್.ಟಿ.ಸಿ ವಿಭಾಗದ ಚಾಲಕ ಸತೀಶ್, ಕಾರಿನಲ್ಲಿದ್ದವರನ್ನ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಯುವಕರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಚಾಲಕ ಸತೀಶ್ ಅವರನ್ನು ಬೀರೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ ಕಿರಣ್, ಸತೀಶ್, ಸಚಿನ್, ಸುಪ್ರೀತ್ ಎಂಬುವವರನ್ನ ಬಂಧಿಸಲಾಗಿದ್ದು, ಹಲ್ಲೆ ಮಾಡುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.