Actor Ajith Kumar: ಮತ್ತೊಂದು ಕಾರು ಖರೀದಿಸಿದ ಅಜಿತ್

(Actor Ajith Kumar:) ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಇತ್ತೀಚೆಗೆ ದುಬೈಯಿಂದ ಚೆನ್ನೈಗೆ ಮರಳಿದ್ದಾರೆ. ವೃತ್ತಿಪರ ರೇಸರ್ ಆಗಿರುವ ಅವರು ರೇಸಿಂಗ್ ತರಬೇತಿ ಹಾಗೂ ಸಂಬಂಧಿತ ಕಾರ್ಯಗಳ ನಿಮಿತ್ತ ದುಬೈಗೆ ತೆರಳಿದ್ದರು. ಆದರೆ ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಅಮೆರಿಕ–ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದ ಅಂತರಾಷ್ಟ್ರೀಯ ವಿಮಾನಯಾನಗಳಲ್ಲಿ ವ್ಯತ್ಯಯ ಉಂಟಾದ ಕಾರಣ ಕೆಲವು ದಿನಗಳ ಕಾಲ ದುಬೈನಲ್ಲೇ ಉಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಪರಿಸ್ಥಿತಿ ಸಹಜಗೊಂಡ ನಂತರ ಅವರು ಸುರಕ್ಷಿತವಾಗಿ ಚೆನ್ನೈಗೆ ವಾಪಸ್ಸಾಗಿದ್ದಾರೆ.


ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ


ಚೆನ್ನೈಗೆ ತಲುಪುತ್ತಿದ್ದಂತೆಯೇ ಅಜಿತ್ ಕುಮಾರ್ ಅವರು ಸ್ಥಳೀಯ ಸಾಯಿ ಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಿಗಿ ಭದ್ರತೆಯ ನಡುವೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಇದರ ಜೊತೆಗೆ ಅಜಿತ್ ಕುಮಾರ್ ಹೊಸ ಕಾರು ಖರೀದಿಸಿರುವುದು ಕೂಡ ಅಭಿಮಾನಿಗಳ ಗಮನ ಸೆಳೆದಿದೆ. ಸಾಮಾನ್ಯವಾಗಿ ಕೋಟ್ಯಾಂತರ ರೂಪಾಯಿ ಮೌಲ್ಯದ ಐಷಾರಾಮಿ ಹಾಗೂ ರೇಸಿಂಗ್ ಕಾರುಗಳನ್ನು ಇಷ್ಟಪಡುವ ಅಜಿತ್, ಈ ಬಾರಿ ಮಹೀಂದ್ರ ಕಂಪನಿಯ ಹೊಸ Mahindra BE6 ಎಲೆಕ್ಟ್ರಿಕ್ ಕಾರನ್ನು ಖರೀದಿಸಿದ್ದಾರೆ. ಮಹೀಂದ್ರದ ಅತ್ಯಾಧುನಿಕ ಎಲೆಕ್ಟ್ರಿಕ್ ಎಸ್‌ಯುವಿ (SUV) ಆಗಿರುವ ಈ ಕಾರು ಪರಿಸರ ಸ್ನೇಹಿ ತಂತ್ರಜ್ಞಾನ ಮತ್ತು ಆಕರ್ಷಕ ವಿನ್ಯಾಸ ಹೊಂದಿದೆ. ಇದರ ಅಂದಾಜು ಬೆಲೆ ಸುಮಾರು 24 ಲಕ್ಷ ರೂಪಾಯಿಯಾಗಿದೆ.

Actor Ajith Kumar: ಮತ್ತೊಂದು ಕಾರು ಖರೀದಿಸಿದ ಅಜಿತ್
Actor Ajith Kumar: ಮತ್ತೊಂದು ಕಾರು ಖರೀದಿಸಿದ ಅಜಿತ್

ಇದನ್ನೂ ಓದಿ: ಮಾ.18 ರಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ


ಇತ್ತೀಚಿನ ಜನಪ್ರಿಯ ಸುದ್ದಿಗಳು (Actor Ajith Kumar:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ