ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ (Aditya Birla Capital Scholarship:) ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಗೆ ಅರ್ಜಿ ಆಹ್ವಾನಿಸಿದೆ. ಇದಕ್ಕೆ ಸಂಬಂಧಿಸಿದಂತೆ ಷರತ್ತುಗಳು ಏನು? ಹೇಗೆ ಅರ್ಜಿ ಸಲ್ಲಿಸಬೇಕು, ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿ ತಿಳಿಯೋಣ.
ಇದನ್ನೂ ಓದಿ; ಕುಸಿಯುತ್ತಿದೆ ಚಿನ್ನದ ಬೆಲೆ; ಇಲ್ಲಿದೆ ನೋಡಿ ಇಂದಿನ ದರ-11.09.2023
ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ (Aditya Birla Capital Scholarship:) ಪ್ರತಿ ವರ್ಷ ನೀಡುವ ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್‌ಶಿಪ್ ಯೋಜನೆಯಡಿ ಈ ವರ್ಷವೂ ಸಹ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಯೋಜನೆಯಡಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಆರ್ಥಿಕವಾಗಿ ನೆರವು ನೀಡಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
ಯಾವ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ದೊರೆಯುತ್ತದೆ:
1 ರಿಂದ 12 ನೇ ತರಗತಿ ಮತ್ತು ಪದವಿ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ.
ಇದನ್ನೂ ಓದಿ; ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
ಎಷ್ಟು ಸ್ಕಾಲರ್‌ಶಿಪ್ ಹಣ ದೊರೆಯುತ್ತದೆ:
* 1 ರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಿ ರೂ 18,000 ರೂ. ಸ್ಕಾಲರ್ ಶಿಪ್ ಪಡೆಯಬಹುದು.
* 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ 24,000 ರೂ. ಸ್ಕಾಲರ್ ಶಿಪ್ ಪಡೆಯಬಹುದು.
* ಮಾನ್ಯತೆ ಪಡೆದ ಕಾಲೇಜುಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ 36,000 ರೂ ವಿದ್ಯಾರ್ಥಿ ವೇತನ ಪಡೆಯಬಹುದು.
* ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ವೃತ್ತಿಪರ ಪದವಿ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ 60,000 ರೂ. ವಿದ್ಯಾರ್ಥಿ ವೇತನ ಪಡೆಯಬಹುದು.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
* ಅರ್ಜಿದಾರರು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.
* ಅರ್ಜಿದಾರರ ಸಲ್ಲಿಸುವ ವಿದ್ಯಾರ್ಥಿಯ ಕುಟುಂಬದ ಒಂದು ವರ್ಷದ ಆದಾಯವು ಎಲ್ಲಾ ಮೂಲಗಳಿಂದ 6 ಲಕ್ಷ ಕ್ಕಿಂತ ಹೆಚ್ಚಿಗೆ ಇರಬಾರದು.
* ಆದಿತ್ಯ ಬಿರ್ಲಾ ಕ್ಯಾಪಿಟಲ್ ಲಿಮಿಟೆಡ್ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿಯ ಮಕ್ಕಳು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಇದನ್ನೂ ಓದಿ; ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವುದು:
* ವಿದ್ಯಾರ್ಥಿಯ ಫೋಟೋ
* ಹಿಂದಿನ ತರಗತಿಯ ಅಂಕಪಟ್ಟಿ
* ಗುರುತಿನ ಚೀಟಿ (ಉದಾಹರಣೆಗೆ: ಆಧಾರ್ ಕಾರ್ಡ್/ವೋಟರ್ ಐಡಿ).
* ಪ್ರಸ್ತುತ ಸಾಲಿನ ಶಾಲೆ/ಕಾಲೇಜಿಗೆ ಪ್ರವೇಶ ಪಡೆದಿರುವ ಪುರಾವೆ ಪತ್ರ (ಶಾಲಾ ಶುಲ್ಕ ರಸೀದಿ/ಪವೇಶ ಪತ್ರ/ ಸಂಸ್ಥೆಯ ಗುರುತಿನ ಚೀಟಿ).
* ಅರ್ಜಿದಾರರ ಬ್ಯಾಂಕ್ ಖಾತೆ ವಿವರ
* ಆದಾಯ ಪ್ರಮಾಣಪತ್ರ
ಹಾಗಾದರೆ ಅರ್ಜಿ ಸಲ್ಲಿಸುವ ವಿಧಾನ ಹೇಗೆ:
ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕವೇ ಮನೆಯಲ್ಲಿ ಕುಳಿತು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು
* ಮೊದಲಿಗೆ ಮೇಲೆ ಅರ್ಜಿ ಸಲ್ಲಿಸಲು ನೀಡಿರುವ ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ (https://www.buddy4study.com/page/aditya-birla-capital-scholarship?ref=featuredBlocks)
* ಅರ್ಜಿದಾರರ 10 ಅಂಕಿಯ ಮೊಬೈಲ್ ಸಂಖ್ಯೆಯನ್ನು ಹಾಕಿ
* ಆ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಯನ್ನು ನಮೂದಿಸಿ
* ನಂತರ ನೀವು ಯಾವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಿರಿ ಎಂದು ಆಯ್ಕೆ ಮಾಡಿಕೊಳ್ಳಬೇಕು.
* ನಂತರ ನಿಮ್ಮ ರಾಜ್ಯ, ಲಿಂಗ, ಧರ್ಮ, ಭಾಷೆ ವಿವರ ಭರ್ತಿ ಮಾಡಿ
* “Update” ಬಟನ್ ಮೇಲೆ ಕ್ಲಿಕ್ ಮಾಡಿದರೆ ನೀವು ಅರ್ಜಿ ಸಲ್ಲಿಸಲು ಲಾಗಿನ್ ಆಗುತ್ತಿರಿ.
* “Start application” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳುವ 3 ಪ್ರಶ್ನೆಗಳಲ್ಲು ಓದಿ “Yes”
ಎಂದು ಉತ್ತರಿಸಬೇಕು. ಇದಾದ ಬಳಿಕ “continue” ಬಟನ್ ಮೇಲೆ ಕ್ಲಿಕ್ ಮಾಡಬೇಕು.
* ತದನಂತರ ವಿದ್ಯಾರ್ಥಿಯ ವಿವರ, ಬ್ಯಾಂಕ್ ಖಾತೆ ವಿವರ, ವಿದ್ಯಾಭ್ಯಾಸದ ವಿವರ, ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-11.09.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
30 ಸೆಪ್ಟೆಂಬರ್ 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.






Leave a Reply