(Age Limit:) ಕರ್ನಾಟಕ ಹೈಕೋರ್ಟ್ 2026-27ನೇ ಶೈಕ್ಷಣಿಕ ಸಾಲಿನ ಒಂದನೇ ತರಗತಿ ಪ್ರವೇಶಕ್ಕೆ ನಿಗದಿಪಡಿಸಿರುವ ವಯೋಮಿತಿ ನಿಯಮದ ಕುರಿತು ಮಹತ್ವದ ಆದೇಶ ಹೊರಡಿಸಿದೆ. ವಯೋಮಿತಿ ನಿಯಮದಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಮರು ಪರಿಶೀಲಿಸಿ, ಒಂದು ವಾರದೊಳಗೆ ಸೂಕ್ತ ಶಿಫಾರಸ್ಸು ಹಾಗೂ ತೀರ್ಮಾನ ಕೈಗೊಳ್ಳುವಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಗೆ ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ನೇತೃತ್ವದ ನ್ಯಾಯಪೀಠವು ಆರು ಮಂದಿ ಅಪ್ರಾಪ್ತ ವಿದ್ಯಾರ್ಥಿಗಳು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.
ಏನು ಪ್ರಕರಣ?
ಶಾಲಾ ಶಿಕ್ಷಣ ಇಲಾಖೆ ಇದೇ ವರ್ಷದ ಮಾರ್ಚ್ 28ರಂದು ಹೊರಡಿಸಿದ್ದ ಆದೇಶದಂತೆ, 2026-27ನೇ ಸಾಲಿನ ಒಂದನೇ ತರಗತಿ ಪ್ರವೇಶಕ್ಕೆ 6 ವರ್ಷ ವಯಸ್ಸು ಪೂರ್ಣಗೊಳ್ಳಬೇಕು ಎಂಬ ನಿಯಮವನ್ನು ಜಾರಿಗೆ ತಂದಿತ್ತು. ಈ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿಗಳ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು.
ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದ ಪ್ರಮುಖ ಅಂಶಗಳು:
ಅರ್ಜಿದಾರ ಮಕ್ಕಳು ಈಗಾಗಲೇ 2025-26ನೇ ಸಾಲಿನ ಯುಕೆಜಿ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ.
ಆದರೆ 6 ವರ್ಷ ವಯಸ್ಸು ಪೂರ್ಣಗೊಳ್ಳದ ಕಾರಣ ಅವರಿಗೆ ಒಂದನೇ ತರಗತಿಗೆ ಪ್ರವೇಶ ನಿರಾಕರಣೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಜ್ಯದ ಸುಮಾರು 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇದೇ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.
ವಯೋಮಿತಿ ನಿಯಮದ ಪರಿಣಾಮವಾಗಿ ಮಕ್ಕಳು ಮತ್ತೊಮ್ಮೆ ಯುಕೆಜಿ ತರಗತಿಯಲ್ಲಿ ಓದಲು ಅನಿವಾರ್ಯತೆ ಎದುರಾಗಬಹುದು.
ಇದರಿಂದ ಒಂದು ಸಂಪೂರ್ಣ ಶೈಕ್ಷಣಿಕ ವರ್ಷ ವ್ಯರ್ಥವಾಗುವ ಆತಂಕ ವ್ಯಕ್ತವಾಗಿದೆ.
ಪೋಷಕರಲ್ಲಿ ಆತಂಕ
ಪೋಷಕರು ತಮ್ಮ ಮಕ್ಕಳನ್ನು ಹಿಂದಿನ ಪ್ರವೇಶ ನಿಯಮಾವಳಿಗಳ ಆಧಾರದ ಮೇಲೆ ಎಲ್‌ಕೆಜಿ ಹಾಗೂ ಯುಕೆಜಿಗೆ ಸೇರಿಸಿದ್ದರು. 2026-27ರಲ್ಲಿ ಮಕ್ಕಳು ಸಹಜವಾಗಿ ಒಂದನೇ ತರಗತಿಗೆ ಸೇರುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಪೋಷಕರಿಗೆ ಹೊಸ ವಯೋಮಿತಿ ನಿಯಮ ಆಘಾತ ಉಂಟುಮಾಡಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, “ಸಮಂಜಸವಾದ ಸಮಯ ನೀಡಿದಲ್ಲಿ ಸರ್ಕಾರ ಮನವಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಿದೆ” ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
ಸರ್ಕಾರಕ್ಕೆ ಲಿಖಿತ ಮನವಿ
ಹೈಕೋರ್ಟ್ ಸೂಚನೆಯ ಬೆನ್ನಲ್ಲೇ, ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಒಂದು ಬಾರಿಯ ಸಡಿಲಿಕೆ ನೀಡಬೇಕು ಎಂದು ಪೋಷಕರು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಹಾಗೂ ಪ್ರಾಥಮಿಕ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Age Limit:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply