Agricultural Loan: ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್

(Agricultural Loan) ಎಲ್ಲೆಡೆ ಮಳೆಯಾಗುತ್ತಿದ್ದು ಕೆಲವೆಡೆ ರೈತರು ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದಾರೆ. ಹೀಗಿರುವಾಗ ರೈತರು ಬ್ಯಾಂಕ್ ಮೂಲಕ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ. ಯಾಕೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ


ಚುನಾವಣಾ ನೀತಿ ಸಂಹಿತೆ ಮೊದಲಾದ ಕಾರಣಗಳಿಂದ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದ ಕೃಷಿ ಸಾಲ ವಿತರಿಸುವುದು ವಿಳಂಬವಾಗಿದೆ. ಸಂಕಷ್ಟದಲ್ಲಿದ್ದ ಲಕ್ಷಾಂತರ ರೈತರು ಬರಗಾಲದ ನಡುವೆಯೂ ಏಪ್ರಿಲ್ ಅಂತ್ಯಕ್ಕೆ 2023 -24 ನೇ ಸಾಲಿನ ಸಾಲ ಮರುಪಾವತಿಸಿದ್ದು, ಹೊಸ ಸಾಲದ ನಿರೀಕ್ಷೆಯಲ್ಲಿದ್ದಾರೆ. ಕೆಲವು ಸಹಕಾರ ಸಂಘಗಳಲ್ಲಿ ಮಾತ್ರ ಸಾಲ ವಿತರಿಸಲಾಗುತ್ತಿದೆ. ಉಳಿದ ಕಡೆ ಸಾಲ ನೀಡಲಾಗುತ್ತಿಲ್ಲ. ಸರ್ಕಾರದ ಮಟ್ಟದಲ್ಲಿ ಮೇಲುಸ್ತುವಾರಿ ಗಮನಿಸಲು ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ಮುಂಗಾರು ಮತ್ತು ಹಿಂಗಾರು ಮಳೆ ಕೊರತೆಯಿಂದ ಬೆಳೆ ಹಾಳಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಾರಿ ಉತ್ತಮ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಸಾಲದ ನಿರೀಕ್ಷೆಯಲ್ಲಿದ್ದಾರೆ.


ಇದನ್ನೂ ಓದಿ: ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್; ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಮುಂಗಾರು ಪೂರ್ವ ಮಳೆ ಕೂಡ ಆಗುತ್ತಿದ್ದು, ರೈತರಿಗೆ ಬಿತ್ತನೆ ಇತರೆ ಕಾರ್ಯಕ್ಕೆ ಸಾಲ ಅಗತ್ಯವಾಗಿದೆ. ಬೀಜ, ಗೊಬ್ಬರ, ಮೊದಲಾದವುಯಗಳಿಗೆ ರೈತರಿಗೆ ಸಾಲ ಬೇಕಿದೆ. ಸಾಲ ವಿತರಿಸಲು ಮುಖ್ಯಮಂತ್ರಿ ಮತ್ತು ಸಂಬAಧಿಸಿದ ಸಚಿವರು ಸಭೆ ನಡೆಸಲು ನೀತಿ ಸಂಹಿತೆ ಅಡ್ಡಿಯಾಗಿದೆ. ಜೂನ್ 6 ರ ನಂತರ ರೈತರಿಗೆ ಸಾಲ ಸೌಲಭ್ಯ ಸಿಗುವ ಸಾಧ್ಯತೆ ಇದೆ. 5 ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿ ಸಾಲ ಮಿತಿ ನಿಗದಿಪಡಿಸಲಾಗಿದೆ. ಆದರೆ, ಬಹುತೇಕ ಕಡೆ ರೈತರಿಗೆ ಗರಿಷ್ಠ ಸಾಲ ಸಿಗುತ್ತಿಲ್ಲ. ಇನ್ನು ಚುನಾವಣಾ ನೀತಿ ಸಂಹಿತೆ ಮುಗಿಯುವರೆಗೆ ರೈತರು ಕಾಯಬೇಕಿದೆ.

Agricultural Loan: ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್
Agricultural Loan: ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್