Agricultural Ponds: ಮಣ್ಣು ಬಳಕೆಗೆ ಸರ್ಕಾರದ ಹೊಸ ರೂಲ್ಸ್

(Agricultural Ponds:) ಬೆಂಗಳೂರು: ರಾಜ್ಯದಲ್ಲಿ ಕೃಷಿ ಉದ್ದೇಶಗಳಿಗಾಗಿ ಮಣ್ಣು ಸಾಗಾಟ ಮಾಡುವ ಹಾಗೂ ಜಮೀನು ಅಭಿವೃದ್ಧಿಪಡಿಸುವ ರೈತರಿಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ನಿಯಮಾನುಸಾರ ಅನುಮತಿ ಪಡೆದು ಮಣ್ಣನ್ನು ಬಳಸಿಕೊಳ್ಳಲು ಮತ್ತು ಸಾಗಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ಉಪಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು-2025ರ ನಿಯಮ 3-A(a) ಅಡಿಯಲ್ಲಿ ರೈತರು ಹಾಗೂ ಭೂಮಾಲೀಕರು ತಮ್ಮ ಸ್ವಂತ ಕೃಷಿ ಚಟುವಟಿಕೆಗಳಿಗೆ ಮಣ್ಣನ್ನು ಬಳಸಿಕೊಳ್ಳುವ ಸಂಬಂಧ ಇದ್ದ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.

ಯಾವ ಕೆಲಸಗಳಿಗೆ ಅನುಮತಿ?
ಹೊಸ ನಿಯಮಾವಳಿಗಳ ಪ್ರಕಾರ ಕೆಳಕಂಡ ಚಟುವಟಿಕೆಗಳ ವೇಳೆ ದೊರೆಯುವ ಮಣ್ಣನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ:

ಪಟ್ಟಾ ಜಮೀನನ್ನು ಸಮತಟ್ಟು ಮಾಡುವುದು
ಜಮೀನನ್ನು ಬೇಸಾಯಕ್ಕೆ ಯೋಗ್ಯವಾಗಿ ಅಭಿವೃದ್ಧಿಪಡಿಸುವುದು
ಕಟ್ಟಡ ನಿರ್ಮಾಣಕ್ಕಾಗಿ ಅಡಿಪಾಯ ತೆಗೆಯುವುದು
ನೀರಾವರಿ ಉದ್ದೇಶಕ್ಕಾಗಿ ಬಾವಿ ತೋಡುವುದು
ಮಳೆನೀರು ಕೊಯ್ಲು ಹಾಗೂ ಕೃಷಿ ಹೊಂಡ ನಿರ್ಮಾಣ
ಕೆರೆಗಳಲ್ಲಿ ಹೂಳು ತೆಗೆಯುವುದು
ಮೀನುಗಾರಿಕೆ ಹೊಂಡ ನಿರ್ಮಾಣ ಮಾಡುವುದು
ಅನುಮತಿ ಪಡೆಯುವ ವಿಧಾನ

ಮೇಲಿನ ಚಟುವಟಿಕೆಗಳ ಸಂದರ್ಭದಲ್ಲಿ ದೊರೆಯುವ ಮಣ್ಣನ್ನು ನಿಯಮಬದ್ಧವಾಗಿ ಬಳಸಿಕೊಳ್ಳಲು ಅಥವಾ ಸಾಗಾಟ ಮಾಡಲು ರೈತರು ಸಂಬಂಧಪಟ್ಟ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕರು ಅಥವಾ ಹಿರಿಯ ಭೂವಿಜ್ಞಾನಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಸಲ್ಲಿಸಲಾದ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಇಲಾಖೆಯಿಂದ ಅಧಿಕೃತ ಕಾರ್ಯಾನುಮತಿ ನೀಡಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Agricultural Ponds: ಮಣ್ಣು ಬಳಕೆಗೆ ಸರ್ಕಾರದ ಹೊಸ ರೂಲ್ಸ್
Agricultural Ponds: ಮಣ್ಣು ಬಳಕೆಗೆ ಸರ್ಕಾರದ ಹೊಸ ರೂಲ್ಸ್ಪ್ರಜಾವಾಣಿ ಚಿತ್ರ. ಪ್ರಶಾಂತ್ ಎಚ್.ಜಿ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Agricultural Ponds:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?