agricultural pump sets: ಕೃಷಿ ಪಂಪ್ ಸೆಟ್ ಸಕ್ರಮ ನಿರೀಕ್ಷೆಯಲ್ಲಿದ್ದ ರೈತರಿಗೆ ಇಂಧನ ಸಚಿವ ಗುಡ್ ನ್ಯೂಸ್

(agricultural pump sets:) ಕೃಷಿ ಪಂಪ್ ಸೆಟ್ ಸಕ್ರಮ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್ ನೀಡಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: 60 ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್‌ ಶಿಪ್; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೆ ತಂದಿದ್ದು, ರೈತರು ಸ್ವಯಂ ಮೂಲ ಸೌಕರ್ಯ ಕಲ್ಪಿಸಿಕೊಂಡರೆ ಎಸ್ಕಾಂ ವತಿಯಿಂದ ಟ್ರಾನ್ಸ್ ಫಾರ್ಮರ್ ಒದಗಿಸಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.

(agricultural pump sets:) 2023ರ ಸೆ. 22ರ ಬಳಿಕ ಸ್ಥಾಪಿಸಿರುವ ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ರೈತರು ಸ್ವಂತ ವೆಚ್ಚದಲ್ಲಿ ಲೈನ್ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಿಕೊಂಡರೆ ಎರಡು ಅಥವಾ ಅದಕ್ಕಿಂತ ಹೆಚ್ಚು ಪಂಪ್ ಸೆಟ್ ಗಳಿಗೆ ಎಸ್ಕಾಂಗಳ ವತಿಯಿಂದಲೇ ಟ್ರಾನ್ಸ್ ಫಾರ್ಮರ್ ಒದಗಿಸಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗುವುದು ಎಂದರು.


ನ್ನೂ ಓದಿ: ಆಸ್ತಿ ಖರೀದಿ, ಮಾರಾಟಗಾರರಿಗೆ ಭರ್ಜರಿ ಸುದ್ದಿ; ಏನದು? ಇಲ್ಲಿದೆ ನೋಡಿ


ರಾಜ್ಯದಲ್ಲಿ 2004ರಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ-ಸಕ್ರಮ ಯೋಜನೆ ಜಾರಿಗೆ ಬಂದಿತ್ತಾದರೂ 2023ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ 4.5 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಗಳು ಇದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ 2023ರ ಸೆ. 22ಕ್ಕೆ ಮುನ್ನ ಸಂಪರ್ಕ ಪಡೆದಿದ್ದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ನಿರ್ಧರಿಸಿ ಈವರೆಗೆ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಿದೆ. ಉಳಿದವುಗಳನ್ನು ಇನ್ನು ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು ಎಂದು ತಿಳಿಸಿದರು.


ನ್ನೂ ಓದಿ: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ವಿವಿಧ ಯೋಜನೆಯಲ್ಲಿ ಶೇ.90ರಷ್ಟು ಸಹಾಯಧನ


(agricultural pump sets:) ಆದರೆ, 2023ರ ಸೆ. 22ರ ಬಳಿಕ ಸ್ಥಾಪಿಸಲಾದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ಕಾನೂನಿನಲ್ಲಿ ಅವಕಾಶ ಇರಲಿಲ್ಲ. ಈ ಹಿನ್ನೆಲೆಯಲ್ಲಿ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಅಕ್ರಮ ಪಂಪ್ ಸೆಟ್ ಹೊಂದಿರುವ ರೈತರು ಎಸ್ಕಾಂಗಳಿಗೆ ನಿಗದಿತ ಠೇವಣಿ ಪಾವತಿಸಿ ಅವರ ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ಅದಾದ ಬಳಿಕ 2 ಅಥವಾ ಅದಕ್ಕಿಂತ ಹೆಚ್ಚಿನ ಪಂಪ್ ಸೆಟ್ ಗಳಿಗೆ ಅವುಗಳ ಸಾಮರ್ಥ್ಯ ಆಧರಿಸಿ ಎಸ್ಕಾಂಗಳ ವತಿಯಿಂದ ಟ್ರಾನ್ಸ್ ಫಾರ್ಮರ್ ಒದಗಿಸಿ ಸಂಪರ್ಕ ಸಕ್ರಮಗೊಳಿಸಲಾಗುವುದು ಎಂದು ಹೇಳಿದರು.

agricultural pump sets: ಕೃಷಿ ಪಂಪ್ ಸೆಟ್ ಸಕ್ರಮ ನಿರೀಕ್ಷೆಯಲ್ಲಿದ್ದ ರೈತರಿಗೆ ಇಂಧನ ಸಚಿವ ಗುಡ್ ನ್ಯೂಸ್
agricultural pump sets: ಕೃಷಿ ಪಂಪ್ ಸೆಟ್ ಸಕ್ರಮ ನಿರೀಕ್ಷೆಯಲ್ಲಿದ್ದ ರೈತರಿಗೆ ಇಂಧನ ಸಚಿವ ಗುಡ್ ನ್ಯೂಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು (agricultural pump sets:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?